Galaxy F13: 11,000 ರೂ. ಒಳಗಿನ ಬೆಸ್ಟ್​ ಸ್ಮಾರ್ಟ್​​​ಫೋನ್​ ಗ್ಯಾಲಕ್ಸಿ F13 ಖರೀದಿಗೆ ಲಭ್ಯ: ಆಫರ್ ಮಿಸ್ ಮಾಡ್ಬೇಡಿ

ಕಳೆದ ವಾರವಷ್ಟೆ ಸ್ಯಾಮ್​ಸಂಗ್ ಭಾರತದಲ್ಲಿ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 (Samsung Galaxy F13) ಅನ್ನು ಲಾಂಚ್‌ ಮಾಡಿತ್ತು. ಇದೀಗ ಸೇಲ್ ಕಾಣುತ್ತಿದ್ದುಆಕರ್ಷಕ ಫೀಚರ್​​ಗಳ ಮೂಲಕ ಗಮನ ಸೆಳೆಯುತ್ತಿದೆ.

Galaxy F13: 11,000 ರೂ. ಒಳಗಿನ ಬೆಸ್ಟ್​ ಸ್ಮಾರ್ಟ್​​​ಫೋನ್​ ಗ್ಯಾಲಕ್ಸಿ F13 ಖರೀದಿಗೆ ಲಭ್ಯ: ಆಫರ್ ಮಿಸ್ ಮಾಡ್ಬೇಡಿ
Samsung Galaxy F13
Follow us
TV9 Web
| Updated By: Vinay Bhat

Updated on:Jun 30, 2022 | 12:42 PM

ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುವುದರಲ್ಲಿ ಸ್ಯಾಮ್​ಸಂಗ್ (Samsung) ಎತ್ತಿದ ಕೈ. ಈಗಾಗಲೇ 15,000 ರೂ. ಒಳಗಡೆ ಅದೆಷ್ಟೊ ಫೋನ್​ಗಳನ್ನು ರಿಲೀಸ್ ಮಾಡಿ ಅದರಲ್ಲಿ ಯಶಸ್ಸು ಕೂಡ ಕಂಡಿದೆ. ಕಳೆದ ವಾರವಷ್ಟೆ ಸ್ಯಾಮ್​ಸಂಗ್ ಭಾರತದಲ್ಲಿ ಬಜೆಟ್ ಬೆಲೆಗೆ ಗ್ಯಾಲಕ್ಸಿ ಎಫ್​​13 (Samsung Galaxy F13) ಅನ್ನು ಲಾಂಚ್‌ ಮಾಡಿತ್ತು. ಇದೀಗ ಸೇಲ್ ಕಾಣುತ್ತಿದ್ದುಆಕರ್ಷಕ ಫೀಚರ್​​ಗಳ ಮೂಲಕ ಗಮನ ಸೆಳೆಯುತ್ತಿದೆ. ಬರೋಬ್ಬರಿ 6000mAh ಬ್ಯಾಟರಿ ಸಾಮರ್ಥ್ಯದಿಂದ ಕೂಡಿರುವ ಈ ಫೋನ್ ಮೊದಲ ಸೇಲ್ ಪ್ರಯುಕ್ತ ಆಫರ್​ನಲ್ಲೂ ಕಾಣಿಸಿಕೊಂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ (Flipkart)​ ಮೂಲಕ ಮಾರಾಟ ಆಗುತ್ತಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್‌ ಸೌಲಭ್ಯ ಹೊಂದಿರುವುದು ವಿಶೇಷ.

  1. ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 4GB RAM ಮತ್ತು 64GB ಸ್ಟೋರೇಜ್‌ ಆಯ್ಕೆಗೆ 11,999 ರೂ. ಬೆಲೆ ಹೊಂದಿದೆ. ಹಾಗೆಯೆ ಇದರ 4GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 12,999 ರೂ. ನಿಗದಿ ಮಾಡಲಾಗಿದೆ.
  2. ಲಾಂಚ್‌ ಆಫರ್‌ ಪ್ರಯುಕ್ತ ಐಸಿಐಸಿಐ ಬ್ಯಾಂಕ್‌ ಮೂಲಕ ಖರೀದಿಸುವವರು 1,000 ರೂ. ವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು. ಸ್ಯಾಮ್‌ಸಂಗ್‌.ಕಾಮ್‌, ಫ್ಲಿಪ್‌ಕಾರ್ಟ್.ಕಾಮ್‌ ಮತ್ತು ಆಯ್ದ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಬಹುದು.
  3. ಈ ಫೋನ್‌ 6.6 ಫುಲ್‌ ಹೆಚ್‌ಡಿ + LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದರಿಂದ ನಿಮ್ಮ ಸ್ಮಾರ್ಟ್‌ಫೋನ್‌ ಗೀರುಗಳಿಂದ ರಕ್ಷಣೆಯನ್ನು ಪಡೆಯಲಿದೆ.
  4. ಸ್ಯಾಮ್‌ಸಂಗ್‌ ಗ್ಯಾಲಕ್ಸಿ F13 ಎಕ್ಸಿನೋಸ್‌ 850 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ RAM ಪ್ಲಸ್‌ ಟೆಕ್ನಾಲಜಿಯನ್ನು ಹೊಂದಿದ್ದು, ಹೆಚ್ಚಿನ RAM ಸಾಮರ್ಥ್ಯವನ್ನು ನೀಡಲು ಐಡಲ್ ಸ್ಟೋರೇಜ್‌ ಅನ್ನು ಬಳಸಲಿದೆ.
  5. ಇದನ್ನೂ ಓದಿ
    Image
    World Social Media Day 2022: ಇಂದು ಸಾಮಾಜಿಕ ಮಾಧ್ಯಮ ದಿನ; ಸೋಷಿಯಲ್ ಮೀಡಿಯಾದ ಇತಿಹಾಸ, ಪ್ರಾಮುಖ್ಯತೆ ಬಗ್ಗೆ ತಿಳಿಯೋಣ ಬನ್ನಿ
    Image
    Galaxy M32: 6000mAh ಬ್ಯಾಟರಿಯ ಗ್ಯಾಲಕ್ಸಿ M32 ಫೋನಿನ ಬೆಲೆ ಭರ್ಜರಿ ಇಳಿಕೆ: ಇಂದೇ ಖರೀದಿಸಿ
    Image
    WhatsApp: ವಾಟ್ಸ್ಆ್ಯಪ್​​ನಲ್ಲಿರುವ ಈ ಹಿಡನ್ ಫೀಚರ್ ನೀವು ಬಳಸಿದ್ದೀರಾ?: ಒಮ್ಮೆ ಇಲ್ಲಿ ನೋಡಿ
    Image
    Moto G42: ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ ಮೋಟೋ G42 ಸ್ಮಾರ್ಟ್​​ಫೋನ್: ಜುಲೈ 4ಕ್ಕೆ ಬಿಡುಗಡೆ
  6. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
  7. ದೀರ್ಘ ಸಮಯ ಬಾಳಿಕೆ ಬರುವ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲುಟೂತ್‌ v5.0, ವೈಫೈ, ಯುಎಸ್‌ಬಿ ಪೋರ್ಟ್‌, 3.5ಮಿ.ಮೀ ಹೆಡ್‌ಫೋನ್‌ ಜ್ಯಾಕ್‌ ಅನ್ನು ಹೊಂದಿದೆ.

ನಿಮ್ಮ ವಾಹನ ಸೇಫ್ ಆಗಿದೆಯೇ?; ಭಾರತದಲ್ಲಿ ವರ್ಷಕ್ಕೆ ಎಷ್ಟು ಕಾರುಗಳು ಕಳ್ಳತನವಾಗುತ್ತದೆ ಗೊತ್ತಾ?

Published On - 12:42 pm, Thu, 30 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ