Best Smartphone: ಇಲ್ಲಿದೆ ನೋಡಿ 15,000 ರೂ. ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು
Best Smartphone Under Rs. 15,000: ರಿಯಲ್ ಮಿ, ಶವೋಮಿ, ಸ್ಯಾಮ್‌ಸಂಗ್, ಪೋಕೋ ಬ್ರಾಂಡ್‌ಗಳು 15,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣಗೊಳಿಸಿವೆ. ಹಾಗಾದ್ರೆ 15,000ರೂ.ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ನೋಡೋಣ.
ಭಾರತದ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ಬಜೆಟ್ ಬೆಲೆಯ ಮೊಬೈಲ್ ಕೂಡ ಸೌಂಡ್ ಮಾಡುತ್ತಿವೆ. ಈ ಗಂತು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಸ್ಮಾರ್ಟ್ಫೋನ್ಗಳ ಬಿಡುಗಡೆ ಹೆಚ್ಚಿನ ಸಂಖ್ಯೆಯಲ್ಲಿದೆ. ಕಳೆದ ಕೆಲವು ತಿಂಗಳಲ್ಲಿ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಫೋನ್ಗಳು ಅನಾವರಣಗೊಂಡಿವೆ. ಇದರಲ್ಲಿ ಕೆಲವು ಫೋನ್ಗಳು ಸಂಚಲನ ಮೂಡಿಸಿದರೆ ಇನ್ನೂ ಕೆಲವು ಫ್ಲಾಫ್ ಆಗಿವೆ. ರಿಯಲ್ ಮಿ, ಶವೋಮಿ, ಸ್ಯಾಮ್‌ಸಂಗ್, ಪೋಕೋ ಬ್ರಾಂಡ್‌ಗಳು 15,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣಗೊಳಿಸಿವೆ. ಹಾಗಾದ್ರೆ 15,000ರೂ.ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ನೋಡೋಣ.
ಮೋಟೋ G52:
ಮೋಟೋ G52 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಪೋಲ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಈ ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ಮಾದರಿಗೆ 14,499 ರೂ. ಬೆಲೆ ಹೊಂದಿದೆ.
ರೆಡ್ಮಿ ನೋಟ್ 11T 5G:
ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ 6.6-ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB + 64GB ಸ್ಟೋರೇಜ್ ಮಾದರಿಗೆ 15,999 ರೂ. ಬೆಲೆಯನ್ನು ಹೊಂದಿದೆ. ಬ್ಯಾಂಕ್ ಆಫರ್ನಲ್ಲಿ 15,000 ರೂ. ಗೆ ಖರೀದಿಸಬಹುದು.
WhatsApp: ನಿಮ್ಮ ಫ್ರೆಂಡ್ಸ್ ನಿಮ್ಮನ್ನ ಹೈಡ್ ಮಾಡಿ ಏನು ಸ್ಟೇಟಸ್ ಹಾಕಿದ್ದಾರೆ ನೋಡಬೇಕೇ?: ಇಲ್ಲಿದೆ ಟ್ರಿಕ್
ಒಪ್ಪೋ K10:
ಒಪ್ಪೋ K10 ಸ್ಮಾರ್ಟ್‌ಫೋನ್ 6.59 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ನಲ್ಲಿದ್ದು, ಕಲರ್ ಒಎಸ್ 11.1 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಯಾಗದ ಸ್ಟೋರೇಜ್ ಸ್ಪೇಸ್ ಬಳಸಿಕೊಂಡು ಹೆಚ್ಚುವರಿ 5G ಮೂಲಕ ಡೈನಾಮಿಕ್ ‘RAM ವಿಸ್ತರಣೆಯನ್ನು’ ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 6GB RAM + 128GB ಸ್ಟೋರೇಜ್ ಮಾದರಿಗೆ 14,990 ರೂ. ಆಗಿದೆ.
ಪೋಕೋ M4 ಪ್ರೊ:
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G96 ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 14,999 ರೂ. ಗೆ ಲಭ್ಯವಿದೆ.
ರಿಯಲ್‌ಮಿ 9i:
ಟೆಕ್ ಪ್ರಿಯರಿಂದ ಸಾಕಷ್ಟು ಪ್ರಶಂಸೆ ಪಡೆದಿರುವ ರಿಯಲ್‌ಮಿ 9i ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಆಂಡ್ರಾಯ್ಡ್ 11 ರಿಯಲ್‌ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 33W ವೇಗದ ಚಾರ್ಜಿಂಗ್‌ನೊಂದಿಗೆ 5000mAh ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 13,999 ರೂ. ಆಗಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:48 pm, Fri, 3 June 22