Best Smartphones: ಬಲಿಷ್ಠ ಬ್ಯಾಟರಿ ಬ್ಯಾಕಪ್ ಸ್ಮಾರ್ಟ್​ಫೋನ್‌ ಹುಡುಕುತ್ತಿರುವಿರಾ?: ಇಲ್ಲಿದೆ ಅತ್ಯುತ್ತಮ ಆಯ್ಕೆಗಳು

Big Battery Smartphones: ನೀವು ದೀರ್ಘ ಸಮಯ ಬಾಳಿಕೆ ಬರುವ ಒಂದೊಳ್ಳೆ ದೊಡ್ಡ ಬ್ಯಾಟರಿ ಆಯ್ಕೆ ಇರುವ ಸ್ಮಾರ್ಟ್​ಫೋನ್ ಹುಡಕುತ್ತಿದ್ದೀರಾ?. ಇಂದು ಉತ್ತಮ ಬ್ಯಾಟರಿ ಬ್ಯಾಕಪ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿವೆ. ಹಾಗಾದರೆ, ಬಲಿಷ್ಠ ಬ್ಯಾಟರಿ ಆಯ್ಕೆ ಹೊಂದಿರುವ ಕೆಲವು ಉತ್ತಮ ಫೋನ್‌ಗಳನ್ನು ನೋಡೋಣ.

Best Smartphones: ಬಲಿಷ್ಠ ಬ್ಯಾಟರಿ ಬ್ಯಾಕಪ್ ಸ್ಮಾರ್ಟ್​ಫೋನ್‌ ಹುಡುಕುತ್ತಿರುವಿರಾ?: ಇಲ್ಲಿದೆ ಅತ್ಯುತ್ತಮ ಆಯ್ಕೆಗಳು
Smartphone Battery
Follow us
|

Updated on: Mar 17, 2024 | 2:19 PM

ಇಂದು ಸ್ಮಾರ್ಟ್‌ಫೋನ್ (Smartphone) ಬಳಕೆದಾರರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಬ್ಯಾಟರಿ ಬ್ಯಾಕಪ್ ಕೂಡ ಒಂದು. ಸ್ಮಾರ್ಟ್‌ಫೋನ್‌ನಲ್ಲಿರುವ ಅಪ್ಲಿಕೇಶನ್‌ಗಳ ಕಾರಣದಿಂದಾಗಿ, ಬ್ಯಾಟರಿಯು ಬೇಗನೆ ಖಾಲಿ ಆಗುತ್ತವೆ. ಕೆಲವು ಆ್ಯಪ್​ಗಳು ಬ್ಯಾಕ್​ಗ್ರೌಂಡ್ ಕೆಲಸ ಮಾಡುವ ಮೂಲಕ ಬ್ಯಾಟರಿಯನ್ನು ತಿನ್ನುತ್ತವೆ. ಈ ಸಮಸ್ಯೆಯನ್ನು ನಿವಾರಣೆ ಮಾಡಲು ಉತ್ತಮ ಬ್ಯಾಟರಿ ಬ್ಯಾಕಪ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿವೆ. ಹಾಗಾದರೆ, ಬಲಿಷ್ಠ ಬ್ಯಾಟರಿ ಆಯ್ಕೆ ಹೊಂದಿರುವ ಕೆಲವು ಉತ್ತಮ ಫೋನ್‌ಗಳನ್ನು ನೋಡೋಣ.

ಆಸಸ್ ರೋಗ್ ಫೋನ್ 8 ಪ್ರೊ: ಚೀನಾದ ಈ ಸ್ಮಾರ್ಟ್ ಫೋನ್ 5,500 mAh ನ ಶಕ್ತಿಶಾಲಿ ಬ್ಯಾಟರಿಯನ್ನು ಹೊಂದಿದೆ. ಈ ಫೋನ್​ನಲ್ಲಿ 6.78 ಇಂಚಿನ ಡಿಸ್​ಪ್ಲೇ ನೀಡಲಾಗಿದೆ ಇದು 50MP ಹಿಂಬದಿಯ ಕ್ಯಾಮೆರಾ ಮತ್ತು 32MP ಮುಂಭಾಗದ ಕ್ಯಾಮೆರಾವನ್ನು ಸಹ ಹೊಂದಿದೆ. ಈ ಫೋನಿನ ಬೆಲೆ 94,999 ರೂ.

ಒನ್​ಪ್ಲಸ್ 12R: ಈ ಸ್ಮಾರ್ಟ್‌ಫೋನ್ 5,500 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ದೀರ್ಘ ಚಾರ್ಜಿಂಗ್ ಸಮಯವನ್ನು ನೀಡುತ್ತದೆ. ಈ ಫೋನ್‌ನ ಇತರ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 6.78 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಇದ್ದು, ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಂನೊಂದಿಗೆ ಕಾರ್ಯನಿರ್ವಹಿಸುತ್ತದೆ. ಒನ್​ಪ್ಲಸ್ 12R ಬೆಲೆ 39,999 ರೂ.

ವೋಟರ್ ಐಡಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?: ಇಲ್ಲಿದೆ ಮಾಹಿತಿ

ರೆಡ್ಮಿ ನೋಟ್ 13 ಪ್ರೊ: ರೆಡ್ಮಿ ನೋಟ್ 13 ಪ್ರೊ ಸ್ಮಾರ್ಟ್‌ಫೋನ್ ಶಕ್ತಿಯುತ 5,050 mAh ಬ್ಯಾಟರಿಯಿಂದ ಚಾಲಿತವಾಗಿದೆ. ಇದು 6.67 ಇಂಚಿನ ಪರದೆಯನ್ನು ಹೊಂದಿದೆ. ಬರೋಬ್ಬರಿ 200 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾವನ್ನು ಸಹ ಹೊಂದಿದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಂನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದರ ಬೆಲೆ 26,499 ರೂ.

ಸ್ಯಾಮ್​ಸಂಗ್ ಗ್ಯಾಲಕ್ಸಿ M15: ಸ್ಯಾಮ್​ಸಂಗ್ ಗ್ಯಾಲಕ್ಸಿ M15 ಸ್ಮಾರ್ಟ್‌ಫೋನ್ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್​ನಲ್ಲಿ 6.5 ಇಂಚಿನ ಡಿಸ್​ಪ್ಲೇ ನೀಡಲಾಗಿದೆ. ಇದು 50 ಮೆಗಾಪಿಕ್ಸೆಲ್‌ಗಳ ಅಪರೂಪದ ಕ್ಯಾಮೆರಾವನ್ನು ಸಹ ಹೊಂದಿದೆ. ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್​ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದರ ಬೆಲೆ 15,990 ರೂ.

ಮುಂದಿನ ವಾರ ಬಿಡುಗಡೆ ಆಗಲಿವೆ ಸಾಲು ಸಾಲು ಸ್ಮಾರ್ಟ್​ಫೋನ್​ಗಳು: ಯಾವುವು ನೋಡಿ

ಸ್ಯಾಮ್​ಸಂಗ್ ಗ್ಯಾಲಕ್ಸಿ S24 ಆಲ್ಟ್ರಾ: ಸ್ಯಾಮ್​ಸಂಗ್ ಗ್ಯಾಲಕ್ಸಿ S24 Ultra ಉತ್ತಮ ಬ್ಯಾಟರಿ ಬ್ಯಾಕಪ್‌ನೊಂದಿಗೆ ವಿನ್ಯಾಸಗೊಳಿಸಲಾದ ಮತ್ತೊಂದು ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ 5000 mAh ಶಕ್ತಿಶಾಲಿ ಬ್ಯಾಟರಿಯನ್ನು ನೀಡಲಾಗಿದೆ. ಇತರ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 6.8 ಇಂಚಿನ ದೊಡ್ಡ ಡಿಸ್​ಪ್ಲೇ ಹೊಂದಿದೆ. 200 ಮೆಗಾಪಿಕ್ಸೆಲ್‌ಗಳ ಅಪರೂಪದ ಕ್ಯಾಮೆರಾವನ್ನು ನೀಡಲಾಗಿದೆ. ಇದರ ಬೆಲೆ 1,39,999 ರೂ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಸುದೀಪ್ ಎದುರಲ್ಲೇ ಧರ್ಮ ಕೀರ್ತಿರಾಜ್​ಗೆ ನಾಲಾಯಕ್ ಎಂದ ಬಿಗ್ ಬಾಸ್ ಮಂದಿ
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಯಥರ್ವ್ ಯಶ್ ಅದ್ದೂರಿ ಬರ್ತ್​ಡೇ ಪಾರ್ಟಿ; ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಪಾಲಿಕೆ ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ಸುದೀಪ್ ಎದುರು ‘ಕೆಂಪೇಗೌಡ’ ಡೈಲಾಗ್ ಹೇಳಿದ ಚೈತ್ರಾ ಕುಂದಾಪುರ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಾಗಲಕೋಟ: ಜಾತ್ರೆಗೆ 500 ನೋಟುಗಳ ಅಂಗಿ ತೊಟ್ಟುಕೊಂಡು ಬಂದ ಯುವಕ
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?