AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme GT 2: 40,000 ರೂ. ವಿನ ಈ ಸ್ಮಾರ್ಟ್​ಫೋನ್ ಮೇಲೆ ಶೇ. 40 ರಷ್ಟು ಡಿಸ್ಕೌಂಟ್: ಆಫರ್ ಮಿಸ್ ಮಾಡ್ಬೇಡಿ

ಫ್ಲಿಪ್​ಕಾರ್ಟ್​ನಲ್ಲಿ ರಿಯಲ್ ಮಿ GT 2 ಫೋನ್ ಕೇವಲ 23,999 ರೂ. ಗೆ ಸೇಲ್ ಕಾಣುತ್ತಿದೆ. ಶೇ. 40 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರ ಮೂಲಬೆಲೆ 39,999 ರೂ. ಆಗಿದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.

Realme GT 2: 40,000 ರೂ. ವಿನ ಈ ಸ್ಮಾರ್ಟ್​ಫೋನ್ ಮೇಲೆ ಶೇ. 40 ರಷ್ಟು ಡಿಸ್ಕೌಂಟ್: ಆಫರ್ ಮಿಸ್ ಮಾಡ್ಬೇಡಿ
Realme GT 2
Vinay Bhat
|

Updated on: Jun 24, 2023 | 1:30 PM

Share

ನೀವು ಕಡಿಮೆ ಬೆಲೆಗೆ ಹೊಸ ಪ್ರೀಮಿಯಂ ಸ್ಮಾರ್ಟ್​ಫೋನ್ (Smartphone) ಖರೀದಿಸುವ ಯೋಜನೆಯಲ್ಲಿದ್ದರೆ ಇಲ್ಲೊಂದು ಆಕರ್ಷಕ ಆಫರ್ ಇದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart) ರಿಯಲ್ ಮಿ GT 2 ಫೋನ್ ಅತಿ ಕಡಿಮೆ ಬೆಲೆಗೆ ಮಾರಾಟ ಕಾಣುತ್ತಿದೆ. ಈ ಫೋನ್​ನಲ್ಲಿ ಬಲಿಷ್ಠವಾದ ಪ್ರೊಸೆಸರ್, ದೀರ್ಘ ಸಮಯ ಬಾಳಕೆ ಬರುವ ಬ್ಯಾಟರಿ, ಆಕರ್ಷಕ ಡಿಸ್ ಪ್ಲೇ ಸೇರಿದಂತೆ ಅತ್ಯುತ್ತಮ ಕ್ಯಾಮೆರಾ ಕೂಡ ನೀಡಲಾಗಿದೆ. ಇದು ಗೇಮರ್​ಗಳ ಆಯ್ಕೆ ಕೂಡ ಆಗಿದೆ. ಹಾಗಾದರೆ ರಿಯಲ್ ಮಿ GT 2 (Realme GT 2) ಸ್ಮಾರ್ಟ್​ಫೋನ್ ಎಷ್ಟು ರೂ. ಗೆ ಮಾರಾಟ ಕಾಣುತ್ತಿದೆ. ಇದರ ಫೀಚರ್​ಗಳು ಏನೇನಿವೆ ಎಂಬುದನ್ನು ನೋಡೋಣ.

ಆಫರ್ ಏನಿದೆ?:

ಫ್ಲಿಪ್​ಕಾರ್ಟ್​ನಲ್ಲಿ ರಿಯಲ್ ಮಿ GT 2 ಫೋನ್ ಕೇವಲ 23,999 ರೂ. ಗೆ ಸೇಲ್ ಕಾಣುತ್ತಿದೆ. ಶೇ. 40 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಇದರ ಮೂಲಬೆಲೆ 39,999 ರೂ. ಆಗಿದೆ. ಇದು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ನೀವು ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ ಶೇ. 5 ರಷ್ಟು ಕ್ಯಾಶ್​ಬ್ಯಾಕ್ ಕೂಡ ಸಿಗಲಿದೆ. 23,200 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಇದೆ.

ಇದನ್ನೂ ಓದಿ
Image
Vivo X90s: ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ: ಬಿಡುಗಡೆಗೆ ಸಿದ್ಧವಾದ ವಿವೋ X90s ಸ್ಮಾರ್ಟ್​ಫೋನ್
Image
AC Gas Leak: ಎಸಿ ಹಾಳಾಗಿದೆ ಎಂದು ಮೆಕ್ಯಾನಿಕ್ ಕರೆಯುವ ಮುನ್ನ ಈ ಅಂಶಗಳನ್ನು ನೆನಪಿನಲ್ಲಿಡಿ
Image
WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಪಿನ್‌ ಮೆಸೇಜ್‌ ಡ್ಯುರೇಷನ್‌ ಫೀಚರ್: ಏನಿದು ನೋಡಿ
Image
Asus Zenfone 10: ತಯಾರಾಗಿ: ಬರುತ್ತಿದೆ 200MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್

Boult Crown R Pro: ಪ್ರೀಮಿಯಂ ಲುಕಿಂಗ್ ಮತ್ತು ಸೂಪರ್ ಫೀಚರ್ಸ್ ಬೋಲ್ಟ್ ಸ್ಮಾರ್ಟ್​ವಾಚ್

ಫೀಚರ್ಸ್ ಏನಿದೆ?:

ರಿಯಲ್‌ ಮಿ GT 2 ಸ್ಮಾರ್ಟ್‌ಫೋನ್‌ 6.62 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, 120Hz ರಿಫ್ರೆಶ್ ರೇಟ್‌ ಮತ್ತು 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಗೇಮರ್​ಗಳಿಗೆ ಹೇಳಿ ಮಾಡಿಸಿದ ಆಕ್ಟಾ-ಕೋರ್ ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

ಆಕರ್ಷಕವಾದ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್​ನಿಂದ ಕೂಡಿದ್ದು ಇದು ಸೋನಿ IMX766 ಸೆನ್ಸಾರ್‌ ಹೊಂದಿದೆ. ಅಂತೆಯೆ ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಮುಂಭಾಗ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಗೆ 65W ವೇಗದ ಚಾರ್ಜಿಂಗ್‌ ಬೆಂಬಲವಿದೆ. ಈ ಫೋನ್ 5ಜಿ ಕೂಡ ಸಪೋರ್ಟ್ ಮಾಡುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ