Best Smartphone: ಜನವರಿಯಲ್ಲಿ 25,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್​ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ

Smartphones under 25,000: ಹೆಚ್ಚಿನವರು ಕಡಿಮೆ ಬೆಲೆಗೆ ಆಕರ್ಷಕ ಫೀಚರ್​ಗಳುಳ್ಳ ಫೋನಿನ ಮೇಲೆ ಕಣ್ಣಿಟ್ಟಿರುತ್ತಾರೆ. ನೀವು ಕೂಡ ಸ್ಮಾರ್ಟ್‌ಪೋನ್ ಖರೀದಿಸುವ ಯೋಜನೆಯನ್ನು ಹೊಂದಿದ್ದರೆ ಈ ಜನವರಿಯಲ್ಲಿ ರೂ. 25,000 ಒಳಗೆ ಖರೀದಿಸಬಹುದಾದ ಬೆಸ್ಟ್ ಫೋನ್ ಬಗ್ಗೆ ಮಾಹಿತಿ ನಾವು ಕೊಡುತ್ತೇವೆ.

Best Smartphone: ಜನವರಿಯಲ್ಲಿ 25,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್​ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ
Amazon Fab Phones Fest Sale
Follow us
TV9 Web
| Updated By: Vinay Bhat

Updated on: Jan 09, 2022 | 1:46 PM

ಭಾರತದ ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಮೊಬೈಲ್​ಗಳ ಬಿಡುಗಡೆ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗ ಹೊಸ ವರ್ಷದ ಮೊದಲ ತಿಂಗಳು ಆಗಿರುವುದರಿಂದ ಮೊಬೈಲ್ ಬಿಡುಗಡೆಯೂ ಜೋರಾಗಿ ಆಗುತ್ತಿದೆ. ಕಡಿಮೆ ಎಂದರೂ ವಾರಕ್ಕೆ 2-3 ಫೋನ್​ಗಳು ಮಾರುಕಟ್ಟೆಗೆ ಪ್ರವೇಶ ಪಡೆಯುತ್ತವೆ. ಇದರಿಂದ ಖರೀದಿದಾರರಿಗೂ ಯಾವ ಫೋನ್ ಕೊಂಡುಕೊಳ್ಳಬೇಕು ಎಂಬ ಗೊಂದಲ ಮೂಡುವುದು ಸಹಜ. ಅದರಲ್ಲೂ ಹೆಚ್ಚಿನವರು ಕಡಿಮೆ ಬೆಲೆಗೆ ಆಕರ್ಷಕ ಫೀಚರ್​ಗಳುಳ್ಳ ಫೋನಿನ ಮೇಲೆ ಕಣ್ಣಿಟ್ಟಿರುತ್ತಾರೆ. ನೀವು ಕೂಡ ಸ್ಮಾರ್ಟ್‌ಪೋನ್ ಖರೀದಿಸುವ ಯೋಜನೆಯನ್ನು ಹೊಂದಿದ್ದರೆ ಈ ಜನವರಿಯಲ್ಲಿ ರೂ. 25,000 (Smartphones under 25,000) ಒಳಗೆ ಖರೀದಿಸಬಹುದಾದ ಬೆಸ್ಟ್ ಫೋನ್ ಬಗ್ಗೆ ಮಾಹಿತಿ ನಾವು ಕೊಡುತ್ತೇವೆ.

ಒನ್‌ಪ್ಲಸ್‌ ನಾರ್ಡ್‌ CE 5G ಸ್ಮಾರ್ಟ್‌ಫೋನ್‌ ಪ್ರಸ್ತುತ 24,999 ರೂ. ಗಳಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೋನಿ ಐಎಂಎಕ್ಸ್ 471 ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಶವೋಮಿ ಎಂಐ 10i ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಒಳಗೊಂಡಿದೆ. ಜೊತೆಗೆ 5820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಶಿಯೋಮಿ ಮಿ10i ಸ್ಮಾರ್ಟ್‌ಫೋನ್‌ 6GB RAM+64GB 20,999ರೂ.ಗಳು ಆಗಿದೆ. 6GB RAM+128GB ಬೆಲೆಯು 21,999ರೂ. ಮತ್ತು 8GB RAM+128GB ವೇರಿಯಂಟ್‌ ದರವು 23,999 ರೂ. ಆಗಿದೆ.

ರಿಯಲ್‌ಮಿ X7 5G ಸ್ಮಾರ್ಟ್‌ಫೋನ್‌ ಪ್ರಸ್ತುತ 19,999 ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ. 4310mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 65W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ಐಕ್ಯೂ Z5 ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಪ್ರಸ್ತುತ 23,990ರೂ. ಬೆಲೆಯಲ್ಲಿ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11. ಆಧಾರಿತ ಒರಿಜಿನ್ ಓಎಸ್ 1.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಮೋಟೋರೊಲಾ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊಪವರ್ 30 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಮೊಟೊರೊಲಾ ಎಡ್ಜ್ 20 ಫ್ಯೂಷನ್ ಬೆಲೆ 6GB + 128GB ಸ್ಟೋರೇಜ್ ರೂಪಾಂತರಕ್ಕೆ 21,499ರೂ, ಮತ್ತು 8GB + 128GB ಸ್ಟೋರೇಜ್ ಆಯ್ಕೆಗೆ 22,999 ರೂ. ಆಗಿದೆ.

Galaxy S21 FE 5G: ಸ್ಯಾಮ್​ಸಂಗ್​ನಿಂದ ಸರ್​ಪ್ರೈಸ್: ನಾಳೆವೇ ಭಾರತದಲ್ಲಿ ರಿಲೀಸ್ ಆಗಲಿದೆ ಬಹುನಿರೀಕ್ಷಿತ ಗ್ಯಾಲಕ್ಸಿ S21 FE ಫೋನ್

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್