AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Airtel: ಸದ್ದಿಲ್ಲದೆ ಬಳಕೆದಾರರಿಗೆ ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಏರ್ಟೆಲ್: ಏನೆಲ್ಲ ಪ್ರಯೋಜನ ನೋಡಿ

ಏರ್ಟೆಲ್​ನ 199 ರೂ. ಪ್ರಿಪೇಯ್ಡ್‌ ಪ್ಲಾನ್‌ 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 3GB ಡೇಟಾ ಪ್ರಯೋಜನ ಪಡೆಯಬಹುದು. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆ ಹಾಗೂ ದೈನಂದಿನ 100 SMS ಉಚಿತ ಪ್ರಯೋಜನ ಕೂಡ ದೊರೆಯಲಿದೆ.

Airtel: ಸದ್ದಿಲ್ಲದೆ ಬಳಕೆದಾರರಿಗೆ ಹೊಸ ಧಮಾಕ ಪ್ಲಾನ್ ಪರಿಚಯಿಸಿದ ಏರ್ಟೆಲ್: ಏನೆಲ್ಲ ಪ್ರಯೋಜನ ನೋಡಿ
ಭಾರ್ತಿ ಏರ್​ಟೆಲ್
TV9 Web
| Updated By: Vinay Bhat|

Updated on: Nov 10, 2022 | 2:06 PM

Share

ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋ (Jio) ಹಾಗೂ ಏರ್ಟೆಲ್ (Airtel) ನಡುವಣ ಪೈಪೋಟಿ ಮುಂದುವರೆಯುತ್ತಲೇ ಇದೆ. ನಂಬರ್ ಒನ್ ಸ್ಥಾನಕ್ಕಾಗಿ ಹೋರಾಡುತ್ತಿರುವ ಏರ್ಟೆಲ್ ಬಳಕೆದಾರರಿಗೆ ಆಕರ್ಷಕ ಯೋಜನೆಗಳನ್ನು ಬಿಡುಗಡೆ ಮಾಡುತ್ತಿದೆ. ಇದರ ನಡುವೆ ಎರಡೂ ಕಂಪನಿಗಳು 5ಜಿ ಸೇವೆಯನ್ನು ಕೂಡ ನೀಡುತ್ತಿದೆ. ಜೊತೆಗೆ ಹೊಸ ಹೊಸ ಬಳಕೆದಾರರನ್ನು ಸೆಳೆಯುವಲ್ಲಿ ಕೂಡ ಯಶಸ್ವಿಯಾಗುತ್ತಿದೆ. ಬೆಲೆ ಹೆಚ್ಚಳ ಮಾಡಿದ್ದರೂ ತನ್ನ ಪ್ಲಾನ್​ನ ಜೊತೆಗೆ ಇತರೆ ವಿಶೇಷ ಆಫರ್​ಗಳನ್ನು ನೀಡುತ್ತಿರುವ ಏರ್ಟೆಲ್​ನ ಯೋಜನೆಗಳು ಹೆಚ್ಚಿನವರ ಗಮನ ಸೆಳೆಯುತ್ತಿವೆ. ಇದೀಗ ಸದ್ದಿಲ್ಲದೆ ತನ್ನ ಗ್ರಾಹಕರಿಗೆ ಏರ್ಟೆಲ್ 199ರೂ. ಬೆಲೆಯಲ್ಲಿ ಹೊಸ ಪ್ರಿಪೇಯ್ಡ್‌ ಪ್ಲಾನ್‌ (Prepaid Plan) ಅನ್ನು ಬಿಡುಗಡೆ ಮಾಡಿದೆ.

ಏರ್ಟೆಲ್​ನ 199 ರೂ. ಪ್ರಿಪೇಯ್ಡ್‌ ಪ್ಲಾನ್‌ 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಈ ಅವಧಿಯಲ್ಲಿ ಒಟ್ಟು 3GB ಡೇಟಾ ಪ್ರಯೋಜನ ಪಡೆಯಬಹುದು. ಇದರ ಜೊತೆಗೆ ಅನಿಯಮಿತ ವಾಯಿಸ್ ಕರೆ ಹಾಗೂ ದೈನಂದಿನ 100 SMS ಉಚಿತ ಪ್ರಯೋಜನ ಕೂಡ ದೊರೆಯಲಿದೆ. ಒಂದು ತಿಂಗಳ ವ್ಯಾಲಿಡಿಟಿಯನ್ನು ಎದುರು ನೋಡುತ್ತಿರುವ ಬಳಕೆದಾರರಿಗಾಗಿ ಈ ಯೋಜನೆ ಸಹಕರಿ ಆಗಲಿದೆ. ಈ ಪ್ಲಾನ್​ನಲ್ಲಿ ಏರ್ಟೆಲ್ ಥ್ಯಾಂಕ್ಸ್ ಅಪ್ಲಿಕೇಶನ್, ಉಚಿತ ಹಲೋ ಟ್ಯೂನ್ಸ್ ಮತ್ತು ವಿಂಕ್ ಮ್ಯೂಸಿಕ್‌ನ ಹೆಚ್ಚುವರಿ ಪ್ರಯೋಜನಗಳನ್ನು ಪಡೆಯಬಹುದು.

ಈ ಹಿಂದೆ ಕೂಡ ಏರ್ಟೆಲ್ 199ರೂ. ಬೆಲೆಯಲ್ಲಿ ಪ್ರಿಪೇಯ್ಡ್‌ ಪ್ಲಾನ್‌ ಪರಿಚಯಿಸಿತ್ತು. ಆದರೆ ಅದರಲ್ಲಿ 24 ದಿನಗಳ ವ್ಯಾಲಿಡಿಟಿ ಮಾತ್ರ ಇರುತ್ತಿತ್ತು. ಅತ್ತ ಜಿಯೋದಲ್ಲಿ ಕೂಡ ಇದೇ 199 ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್ ಇದೆ. ಇದು ದೈನಂದಿನ 1.5GB ಡೇಟಾ ಪ್ರಯೋಜನವನ್ನು ನೀಡುತ್ತಿದೆ. ಇದರಲ್ಲಿ ಕೂಡ ಅನಿಯಮಿತ ಕರೆ ಪ್ರಯೋಜನ ಹಾಗೂ ದಿನನಿತ್ಯ 100 ಉಚಿತ ಎಸ್​ಎಮ್​ಎಸ್​ ಸೌಲಭ್ಯ ಲಭ್ಯವಾಗಲಿದೆ.23 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ಇದನ್ನೂ ಓದಿ
Image
Facebook Down: ವಾಟ್ಸ್​ಆ್ಯಪ್, ಇನ್​ಸ್ಟಾ, ಟ್ವಿಟರ್ ಆಯ್ತು ಈಗ ಫೇಸ್​ಬುಕ್ ಡೌನ್: ಲಾಗಿನ್ ಮಾಡಲು ಜನರ ಪರದಾಟ
Image
Nokia G60 5G: ಮೊಟ್ಟ ಮೊದಲ ನೋಕಿಯಾ 5G ಫೋನ್ ಈಗ ಖರೀದಿಗೆ ಲಭ್ಯ: ಬೆಲೆ ಎಷ್ಟು?, ಏನು ಫೀಚರ್ಸ್?
Image
WhatsApp New Feature: ವಾಟ್ಸ್​ಆ್ಯಪ್​ನ ಹೊಸ ಫೀಚರ್​ Communityಯನ್ನು ಕ್ರಿಯೇಟ್​ ಮಾಡುವುದು ಹೇಗೆ? ಹಂತ ಹಂತವಾಗಿ ತಿಳಿಯಿರಿ
Image
Bengaluru Tech Summit 2022: ನ. 16ರಿಂದ 18ರವರೆಗೆ ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್-2022: ಪ್ರಧಾನಿ ಮೋದಿಯಿಂದ ಉದ್ಘಾಟನೆ

ಇನ್ನು ಇತ್ತೀಚೆಗಷ್ಟೆ ಏರ್ಟೆಲ್​ನಲ್ಲಿ ಅತಿ ಹೆಚ್ಚುನ ಜನರು ಉಪಯೋಗಿಸುತ್ತಿರುವ 265 ರೂ. ಬೆಲೆಯ ಪ್ರಿಪೇಯ್ಡ್‌ ಪ್ಲಾನ್‌ ಪರಿಷ್ಕರಣೆ ಆಗಿದ್ದು, 28 ದಿನಗಳ ಬದಲಾಗಿ 30 ದಿನಗಳ ವ್ಯಾಲಿಡಿಟಿ ಪಡೆದಿದೆ. ಎರಡು ದಿನಗಳ ವ್ಯಾಲಿಡಿಯನ್ನು ಹೆಚ್ಚಿಸಿದೆ. ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿದಿನ 1 GB ಹೈ ಸ್ಪೀಡ್ 4G ಡೇಟಾ ಲಭ್ಯವಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 45GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಅನಿಯಮಿತ ವಾಯಿಸ್ ಕರೆ, ದಿನಕ್ಕೆ 100 ಎಸ್‌ಎಂಎಸ್‌ ಸೇವೆಗಳು ಲಭ್ಯವಾಗಲಿದೆ. ಸದ್ಯಕ್ಕೆ ಆಯ್ದ ಬಳಕೆದಾರರಿಗೆ ಮಾತ್ರ ಈ ಯೋಜನೆ ಜಾರಿಯಲ್ಲಿದೆ.

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ