BSNL: ಜಿಯೋ, ಏರ್ಟೆಲ್ಗೆ ಟಕ್ಕರ್ ಕೊಟ್ಟ ಬಿಎಸ್‌ಎನ್‌ಎಲ್: ಪ್ರತಿದಿನ 5GB ಡೇಟಾ, 84 ದಿನ ವ್ಯಾಲಿಡಿಟಿ
ಬಿಎಸ್ಎನ್ಎಲ್ನ 599 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಉಪಯೋಗವಾಗಲಿದೆ. ಈ ಯೋಜನೆಯಲ್ಲಿ ವಿಶೇಷವಾಗಿ ನಿಮಗೆ ಪ್ರತಿದಿನ ಬರೋಬ್ಬರಿ 5GB ಡೇಟಾ ಸೌಲಭ್ಯ ದೊರೆಯುತ್ತದೆ.
ಜಿಯೋ (Jio), ಏರ್ಟೆಲ್ (Airtel) ನಂತಹ ಅಧಿಕ ಬಳಕೆದಾರರನ್ನು ಹೊಂದಿರುವ ಟೆಲಿಕಾಂ ಕಂಪೆನಿಗೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್ (BSNL) ಸಂಸ್ಥೆ ಶಾಕ್ ನೀಡಿದೆ. ಅಧಿಕ ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಡೇಟಾ ಪ್ರಯೋಜನಗಳನ್ನು ನೀಡುತ್ತಾ ಬರುತ್ತಿರುವ ಬಿಎಸ್‌ಎನ್‌ಎಲ್ ಸದ್ಯ ಬಜೆಟ್ ದರದ ಮತ್ತೊಂದು ಆಕರ್ಷಕ ಪ್ಲಾನ್ ಬಳಕೆದಾರರ ಗಮನ ಸೆಳೆದಿದೆ. ಹಾಗಾದ್ರೆ ಆ ಪ್ಲಾನ್ ಯಾವುದು?, ಏನು ಪ್ರಯೋಜನ ಎಂಬ ಕುರಿತ ಮಾಹಿತಿ ಇಲ್ಲಿದೆ ನೋಡಿ…
ಬಿಎಸ್ಎನ್ಎಲ್ನ 599 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ ಅಧಿಕ ಡೇಟಾ ಬಯಸುವ ಚಂದಾದಾರರಿಗೆ ಉಪಯೋಗವಾಗಲಿದೆ. ಈ ಯೋಜನೆಯಲ್ಲಿ ವಿಶೇಷವಾಗಿ ನಿಮಗೆ ಪ್ರತಿದಿನ ಬರೋಬ್ಬರಿ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ 450GB ಡೇಟಾ ಪ್ರಯೋಜನವನ್ನು ಪಡೆಯಬಹುದು.
ಇದಿಷ್ಟೆ ಅಲ್ಲದೆ ಬಿಎಸ್‌ಎನ್‌ಎಲ್ 499 ರೂ. ಪ್ರಿಪೇಯ್ಡ್ ಪ್ಲಾನ್ ಕೂಡ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಇದು ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಮತ್ತು Zing ಪ್ರಯೋಜನವನ್ನು ಪಡೆಯಬಹುದು.
ಇನ್ನೂ ಬಿಎಸ್‌ಎನ್‌ಎಲ್ 2399 ರೂಪಾಯಿಯ ವಾರ್ಷಿಕ ಪ್ಲಾನ್ ಒಟ್ಟು 600 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 250 FUP ನಿಮಿಷಗಳ ಮಿತಿಯಲ್ಲಿ ಉಚಿತ ವಾಯಿಸ್ ಕರೆಗಳ ಪ್ರಯೋಜನವನ್ನು ಒದಗಿಸಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದ್ದು, 60 ದಿನಗಳಿಗೆ ಬಿಎಸ್‌ಎನ್‌ಎಲ್ ಟ್ಯೂನ್ ಸೌಲಭ್ಯವು ಸಿಗಲಿದೆ. ಆದರೆ ಯಾವುದೇ ಡೇಟಾ ಪ್ರಯೋಜನ ಲಭ್ಯ ಇರುವುದಿಲ್ಲ. ಡೇಟಾ ಅಗತ್ಯ ಇರದ ಹಾಗೂ ವಾಯಿಸ್ ಕರೆ ಮತ್ತು ಹೆಚ್ಚಿನ ವ್ಯಾಲಿಡಿಟಿ ಬಯಸುವ ಗ್ರಾಹಕರು ಈ ಪ್ಲಾನ್ ಅನ್ನು ಆ್ಯಕ್ಟಿವ್ ಮಾಡಿಕೊಳ್ಳಬಹುದು.
Xiaomi: ಇದೇ ಮೊದಲ ಬಾರಿಗೆ ವಿಶ್ವದ ನಂಬರ್ ಒನ್ ಸ್ಮಾರ್ಟ್ಫೋನ್ ಬ್ರ್ಯಾಂಡ್ ಪಟ್ಟಕ್ಕೇರಿದ ಶವೋಮಿ
ಸ್ಮಾರ್ಟ್ಫೋನಿನ ಮೆಮೊರಿ ಹೆಚ್ಚಿಸಲು ಮೆಮೊರಿ ಕಾರ್ಡ್ ಬೇಡ: ಈ ಟ್ರಿಕ್ ಪಾಲೋ ಮಾಡಿ
(BSNL Latest Prepaid plan just Rs 599 gives 5GB daily data for 84 days validity)