Best Smartphone: ಭರ್ಜರಿ ಸೇಲ್ ಕಾಣುತ್ತಿದೆ 20,000 ರೂ. ಒಳಗಿನ ಈ ಹೊಸ 4 ಸ್ಮಾರ್ಟ್​​ಫೋನ್​ಗಳು

Smartphone Under RS. 20,000: ಪ್ರಸಿದ್ಧ ಮೊಬೈಲ್ ಕಂಪನಿಗಳು 15 ರಿಂದ 20 ಸಾವಿರ ಬೆಲೆಗಳಿಗೆ ಆಕರ್ಷಕ ಫೀಚರ್​​ಗಳ ಫೋನನ್ನು ಅನಾವರಣ ಮಾಡುತ್ತಿದೆ. ಆದರೆ, ಇದರಲ್ಲಿ ಕ್ಲಿಕ್ ಆಗುವುದು ಬೆರಳಣಿಕೆಯಷ್ಟು ಮಾತ್ರ. ಈ ಪೈಕಿ ಇತ್ತೀಚೆಗಷ್ಟೆ 20,000 ರೂ. ಒಳಗೆ ಬಿಡುಗಡೆ ಆಗಿ ಸದ್ಯ ಭರ್ಜರಿ ಸೇಲ್ ಕಾಣುತ್ತಿರುವ ಸ್ಮಾರ್ಟ್​ಫೋನ್​ ಪರಿಚಯ ನೋಡೋಣ.

Best Smartphone: ಭರ್ಜರಿ ಸೇಲ್ ಕಾಣುತ್ತಿದೆ 20,000 ರೂ. ಒಳಗಿನ ಈ ಹೊಸ 4 ಸ್ಮಾರ್ಟ್​​ಫೋನ್​ಗಳು
smartphones under 30000
Follow us
TV9 Web
| Updated By: Vinay Bhat

Updated on:Apr 25, 2022 | 6:47 AM

ಮೊಬೈಲ್ (Mobile) ವ್ಯಾಪಾರದಲ್ಲಿ ದೊಡ್ಡ ಮಾರುಕಟ್ಟೆಯನ್ನೇ ಹೊಂದಿರುವ ಭಾರತ ಅನೇಕ ಸ್ಮಾರ್ಟ್​ಫೋನ್ (Smartphone) ಬ್ರ್ಯಾಂಡ್​​ಗಳ ನೆಚ್ಚಿನ ತಾಣವಾಗಿದೆ. ಹೀಗಾಗಿ ದೇಶದ ಮಾರುಕಟ್ಟೆಗೆ ಕಡಿಮೆ ಎಂದರೂ ವಾರಕ್ಕೆ ಮೂರರಿಂದ ನಾಲ್ಕು ಹೊಸ ಫೋನ್​ಗಳು ಲಗ್ಗೆಯಿಡುತ್ತವೆ. ತಿಂಗಳಿಗೆ ಸುಮಾರು 15 ರಿಂದ 20 ಫೋನ್ ಬಿಡುಗಡೆ ಆಗುತ್ತವೆ. ಅದರಲ್ಲೂ ಭಾರತದಲ್ಲಿ ಬಜೆಟ್ ಬೆಲೆಯ (Budget Smartphone) ಅಂದರೆ ಕಡಿಮೆ ಬೆಲೆಯ ಸ್ಮಾರ್ಟ್​ಫೋನ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಇಲ್ಲಿ ಹೈ ರೇಂಜ್ ಫೋನ್​ಗಳು ಮಾರಾಟ ಆಗುವುದು ತೀರಾ ಕಡಿಮೆ. ಇದಕ್ಕಾಗಿ ಕಂಪನಿಗಳು ಕೂಡ ಭಾರತೀಯ ಪ್ರಜೆಗಳ ಅನುಗುಣಕ್ಕಾಗಿ 15 ರಿಂದ 20 ಸಾವಿರ ಬೆಲೆಗಳಿಗೆ ಆಕರ್ಷಕ ಫೀಚರ್​​ಗಳ ಫೋನನ್ನು ಅನಾವರಣ ಮಾಡುತ್ತಿದೆ. ಆದರೆ, ಇದರಲ್ಲಿ ಕ್ಲಿಕ್ ಆಗುವುದು ಬೆರಳಣಿಕೆಯಷ್ಟು ಮಾತ್ರ. ಈ ಪೈಕಿ ಇತ್ತೀಚೆಗಷ್ಟೆ 20,000 ರೂ. ಒಳಗೆ ಬಿಡುಗಡೆ ಆಗಿ ಸದ್ಯ ಭರ್ಜರಿ ಸೇಲ್ ಕಾಣುತ್ತಿರುವ 4 ಸ್ಮಾರ್ಟ್​ಫೋನ್​ ಪರಿಚಯ ನೋಡೋಣ.

ರಿಯಲ್‌ಮಿ 9 5G:

ಈ ಸ್ಮಾರ್ಟ್‌ಫೋನ್‌ ಫೀಚರ್ಸ್ ಬಗ್ಗೆ ನೋಡುವುದಾದರೆ ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್‌ ಡೈಮೆನ್ಸಿಟಿ 810 5G ಪ್ರೊಸೆಸರ್ ನೀಡಲಾಗಿದೆ. ಟ್ರಿಪಲ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಜೊತೆಗೆ ಎಐ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದಕ್ಕೆ ಅನುಕೂಲವಾಗುವಂತೆ ಯುಎಸ್‌ಬಿ ಟೈಪ್-ಸಿ ಪೋರ್ಟ್‌ನಲ್ಲಿ 18W ಕ್ವಿಕ್ ಚಾರ್ಜ್ ಬೆಂಬಲ ನೀಡಲಾಗಿದೆ.

ಭಾರತದಲ್ಲಿ ರಿಯಲ್‌ಮಿ 9 5G ಸ್ಮಾರ್ಟ್‌ಫೋನ್‌ ಒಟ್ಟು ಮೂರು ಮಾದರಿಯಲ್ಲಿ ಖರೀದಿಗೆ ಲಭ್ಯವಿದೆ. ಇದರ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ಮಾದರಿಗೆ 14,999 ರೂ. ಬೆಲೆ ಹೊಂದಿದೆ. 6GB + 128GB ರೂಪಾಂತರದ ಬೆಲೆ 17,499 ರೂ. ಆಗಿದೆ. ಅಂತೆಯೆ ರಿಯಲ್ ಮಿ 95G SE ಫೋನಿನ 6GB+128GB ಸ್ಟೋರೇಜ್ ಆಯ್ಕೆಗೆ 19,999 ರೂ. ಇದ್ದರೆ 8GB+128GB ಮಾದರಿಗೆ 22,999 ರೂ. ನಿಗದಿ ಮಾಡಲಾಗಿದೆ. ಇದನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ಮಿ.ಕಾಮ್‌, ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಸಬಹುದು.

ಐಕ್ಯೂ Z6 5G:

ಐಕ್ಯೂ Z6 5G ಸ್ಮಾರ್ಟ್‌ಫೋನ್‌ 1,080×2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 12 ನಲ್ಲಿ ಫನ್‌ಟಚ್‌OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್​ನಿಂದ ಕೂಡಿರುವ ಈ ಸ್ಮಾರ್ಟ್​ಫೋನ್​ನ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL JN1 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ 3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ಐಕ್ಯೂ Z6 5G ಸ್ಮಾರ್ಟ್‌ಫೋನ್‌ ಒಟ್ಟು ಮೂರು ಮಾದರಿಯಲ್ಲಿ ರಿಲೀಸ್ ಆಗಿದೆ. ಇದರ 4GB RAM ಮತ್ತು 128GB ಸ್ಟೋರೆಜ್ ರೂಪಾಂತರದ ಆಯ್ಕೆಗೆ 15,999 ರೂ.ಬೆಲೆ ಹೊಂದಿದೆ. 6GB RAM ಮತ್ತು 128GB ಸ್ಟೋರೆಜ್ ಮಾದರಿಗೆ 16,999 ರೂ. ಹಾಗೂ 8GB RAM ಮತ್ತು 128GB ಸ್ಟೋರೆಜ್ ಆಯ್ಕೆಯು 17,999 ರೂ. ಗೆ ಮಾರಾಟ ಆಗಲಿದೆ.

ಪೋಕೋ M4 ಪ್ರೊ:

ಪೋಕೋ M4 ಪ್ರೊ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ 6GB RAM ಮತ್ತು 64GB ಸ್ಟೋರೇಜ್ ರೂಪಾಂತರದ ಬೆಲೆ ಕೇವಲ 14,999 ರೂ.ಆಗಿದೆ. ಆದರೆ 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 16,499 ರೂ.  ಇದಲ್ಲದೆ 8GB RAM + 256GB ಸ್ಟೋರೇಜ್ ಮಾದರಿಯ ಬೆಲೆ 17,999 ರೂ. ನಿಗದಿ ಮಾಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ-ಯು ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಫೋನ್‌ 4GB RAM + 128GB ಸ್ಟೋರೇಜ್ ವೇರಿಯಂಟ್ 17,499 ರೂ. ಆಗಿದೆ. ಹಾಗೆಯೇ 6GB RAM + 128GB ಮಾದರಿಯ ಬೆಲೆಯು 18,499 ರೂ. ಆಗಿದೆ.

ಭಾರತದಲ್ಲಿ ಸಖತ್ ಟ್ರೆಂಡಿಂಗ್​​ನಲ್ಲಿರುವ ಸ್ಮಾರ್ಟ್​​ಫೋನ್​ಗಳು ಯಾವುವು ಗೊತ್ತೇ?: ಇಲ್ಲಿದೆ ನೋಡಿ

WhatsApp: ಮುಂದಿನ ಅಪ್ಡೇಟ್​​ಗೆ ವಾಟ್ಸ್​ಆ್ಯಪ್ ಗ್ರೂಪ್​ ಕಾಲ್​ನಲ್ಲಿ ಬರಲಿದೆ ಅಚ್ಚರಿಯ ಫೀಚರ್

Published On - 6:37 am, Mon, 25 April 22

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ