Cyber Crime: ಮತ್ತೊಂದು ಸೈಬರ್ ಕ್ರೈಮ್ ಪ್ರಕರಣ ದಾಖಲು: ಓಟಿಪಿ ಹಾಕಿ 1 ಲಕ್ಷ ರೂ. ಕಳೆದುಕೊಂಡ ಮಹಿಳೆ

OTP Scam: ಗುರುಗ್ರಾಮ ಮಹಿಳೆ ಬ್ಯಾಂಕ್ ಎಸ್​ಎಮ್​ಎಸ್ ಮೇಲೆ ಕ್ಲಿಕ್ ಮಾಡಿ 1 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ವರದಿ ಆಗಿದೆ. ಪಿಟಿಐ ಮಾಡಿರುವ ವರದಿಯ ಪ್ರಕಾರ, ಗುರುಗ್ರಾಮದಲ್ಲಿ ವಾಸಿಸುತ್ತಿರುವ ಮಾಧ್ವಿ ದತ್ತಾ ಎಂಬ ಮಹಿಳೆಗೆ ಜನವರಿ 21 ರಂದು ಇನ್​ಬಾಕ್ಸ್​ಗೆ ಒಂದು ಎಸ್​ಎಮ್​ಎಸ್ ಬಂದಿದೆ.

Cyber Crime: ಮತ್ತೊಂದು ಸೈಬರ್ ಕ್ರೈಮ್ ಪ್ರಕರಣ ದಾಖಲು: ಓಟಿಪಿ ಹಾಕಿ 1 ಲಕ್ಷ ರೂ. ಕಳೆದುಕೊಂಡ ಮಹಿಳೆ
ಸಾಂದರ್ಭಿಕ ಚಿತ್ರ
Follow us
Vinay Bhat
|

Updated on:Jan 30, 2023 | 2:22 PM

ವಿಶ್ವದಲ್ಲಿ ಸೈಬರ್ ಕ್ರೈಮ್ (Cyber Fraud) ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿದಿನ ಹೊಸ ಹೊಸ ಪ್ರಕರಣಗಳು ವರದಿ ಆಗುತ್ತಲೇ ಇದೆ. ಸೈಬರ್ ವಂಚಕರು ಮೋಸ ಮಾಡಲು ಒಂದಲ್ಲ ಒಂದು ಹೊಸ ಮಾರ್ಗಗಳನ್ನು ಕಂಡುಹಿಡಿಯುತ್ತಿದ್ದಾರೆ. ಅನಾಮಿಕರ ಮಾತು ನಂಬಿ ಒಟಿಪಿ (OTP) ನಂಬರ್ ಹೇಳುತ್ತಿದ್ದಂತೆ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗ ಮಾಯವಾದ ಸುದ್ದಿ ಹರಿದಾಡುತ್ತಲೇ ಇದೆ. ವಿದ್ಯುತ್ ಬಿಲ್, ಓಟಿಪಿ, ಕ್ರೆಡಿಟ್ ಕಾರ್ಡ್ ಸ್ಕ್ಯಾಮ್​, ಮಿಸ್ಡ್‌ಕಾಲ್‌ (Missed Call) ಕೊಡುವ ಮೂಲಕ ಫೋನ್‌ಗೆ ಸಿಮ್ ಸ್ವ್ಯಾಪ್ ಮಾಡಿ ಹಣ ದೋಚಿಕೊಳ್ಳುತ್ತಿದ್ದಾರೆ. ಇದೀಗ ಗುರುಗ್ರಾಮ ಮಹಿಳೆ ಬ್ಯಾಂಕ್ ಎಸ್​ಎಮ್​ಎಸ್ ಮೇಲೆ ಕ್ಲಿಕ್ ಮಾಡಿ 1 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ವರದಿ ಆಗಿದೆ.

ಪಿಟಿಐ ಮಾಡಿರುವ ವರದಿಯ ಪ್ರಕಾರ, ಗುರುಗ್ರಾಮದಲ್ಲಿ ವಾಸಿಸುತ್ತಿರುವ ಮಾಧ್ವಿ ದತ್ತಾ ಎಂಬ ಮಹಿಳೆಗೆ ಜನವರಿ 21 ರಂದು ಇನ್​ಬಾಕ್ಸ್​ಗೆ ಒಂದು ಎಸ್​ಎಮ್​ಎಸ್ ಬಂದಿದೆ. ”ನಿಮ್ಮ ಹೆಚ್​ಡಿಎಫ್​ಸಿ ಖಾತೆಯ ಅವದಿ ಇಂದಿಗೆ ಮುಕ್ತಾಯಗೊಳ್ಳುತ್ತದೆ, ತಕ್ಷಣವೆ ಇಲ್ಲಿ ಕ್ಲಿಕ್ ಮಾಡುವ ಮೂಲಕ ನಿಮ್ಮ ಮೊಬೈಲ್ ನಂಬರ್ ಮತ್ತು ಪಾನ್ ಕಾರ್ಡ್ ನಂಬರ್​ಗೆ ಲಿಂಕ್ ಮಾಡಿ”, ಎಂಬ ಸಂದೇಶ ಬಂದಿದೆ. ಇದು ಬ್ಯಾಂಕ್​ನಿಂದ ಬಂದ ಮೆಸೇಜ್ ಎಂದು ನಂಬಿದ ಮಹಿಳೆ ಲಿಂಕ್ ತೆರೆದ ತಕ್ಷಣ ಒಂದು ವೆಬ್ ಪೇಜ್ ಓಪನ್ ಆಗಿದೆ. ಅಲ್ಲಿರುವ ಮಾಹಿತಿಯನ್ನು ಭರ್ತಿ ಮಾಡಿದ್ದಾರೆ. ನಂತರ ಓಟಿಪಿ ಹಾಕುವಂತೆ ಸೂಚಿಸಲಾಗಿದೆ. ಮಹಿಳೆ ಓಟಿಪಿ ಹಾಕಿದ ತಕ್ಷಣ ಖಾತೆಯಿಂದ 1 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಿಳೆ, ”ನಾನು ಓಟಿಪಿ ಹಾಕಿದ ತಕ್ಷಣ 1 ಲಕ್ಷ ರೂಪಾಯಿ ನನ್ನ ಖಾತೆಯಿಂದ ಕಳೆದುಕೊಂಡಿದ್ದೇನೆ. ಕೂಡಲೆ ಸೈಬಲ್ ಸಹಾಯವಾಣಿ 1930 ಗೆ ಕರೆ ಮಾಡಿದೆ. ಆದರೆ, ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಬಳಿಕ ಸೈಬಲ್ ಠಾಣೆಗೆ ತೆರಳಿ ದೂರು ನೀಡಿದೆ,” ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
WhatsApp: ಗ್ರೂಪ್​ಗಳಲ್ಲಿ ಸದ್ದಿಲ್ಲದೆ ವಾಟ್ಸ್​ಆ್ಯಪ್ ಪರಿಚಯಿಸಿದೆ ವಿಶೇಷ ಫೀಚರ್: ತಕ್ಷಣವೇ ಅಪ್ಡೇಟ್ ಮಾಡಿ
Image
Best Smartphone: 20,000 ರೂ. ಒಳಗೆ ಸಿಗುತ್ತಿರುವ 108MP ಕ್ಯಾಮೆರಾದ ಬೆಸ್ಟ್ ಸ್ಮಾರ್ಟ್​​ಫೋನ್ಸ್
Image
Apple Logo: ಐಫೋನ್ ನ ಆ್ಯಪಲ್ ಲೋಗೋ ಹಿಂದಿದೆ ಇಂಟರೆಸ್ಟಿಂಗ್ ಸ್ಟೋರಿ, ಅದೇನು ಗೊತ್ತಾ? ಇಲ್ಲಿದೆ ನೋಡಿ
Image
Best Smartphones: 20,000 ರೂ. ಒಳಗೆ ಸಿಗುತ್ತಿರುವ ಬಿಗ್ ಬ್ಯಾಟರಿಯ ಬೆಸ್ಟ್ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

iPhone 14 Plus: ಐಫೋನ್ ಖರೀದಿಗೆ ಇದೇ ಬೆಸ್ಟ್ ಟೈಮ್: ಐಫೋನ್‌ 14 ಪ್ಲಸ್‌ ಮೇಲೆ ಬಂಪರ್ ಡಿಸ್ಕೌಂಟ್

ಇತ್ತೀಚೆಗಷ್ಟೆ ಮುಂಬೈ ಮೂಲದ ರಾಮ್​ಸಿಂಗ್ ರಜಪೂತ್ ಎಂಬ 29 ವರ್ಷದ ವ್ಯಕ್ತಿ ಕೂಡ ಸೈಬರ್ ವಂಚನೆಗೆ ಗುರಿಯಾಗಿದ್ದರು. ಕೋಟಕ್ ಮಹೀಂದ್ರ ಕ್ರೆಡಿಟ್ ಕಾರ್ಡ್​ನಲ್ಲಿ ಹಣವನ್ನು ಹೆಚ್ಚಿಸುವ ಆಮೀಷ ಒಡ್ಡಿ ಬಂದ ಕರೆಯಿಂದ ಇವರು 22,396 ರೂ. ಕಳೆದುಕೊಂಡಿದ್ದರು. ಜನವರಿ 15 ರಂದು ಪ್ರಿಯಾಂಕ ಧರ್ಮಾ ಎಂಬವರಿಂದ ರಾಮ್​ಸಿಂಗ್​ಗೆ ಕರೆಯೊಂದು ಬರುತ್ತದೆ. ನಿಮ್ಮ ಕ್ರೆಡಿಟ್ ಕಾರ್ಡ್ ಲಿಮಿಟ್ ಅನ್ನು ಹೆಚ್ಚಿಸಲಾಗುತ್ತದೆ ಎಂದು ಹೇಳುತ್ತಾರೆ. ಇದನ್ನು ನಂಬಿದ ರಾಮ್​ಸಿಂಗ್ ತನಗೆ ಬಂದ ಒಟಿಪಿ ಅನ್ನು ಕರೆ ಮಾಡಿದವರೊಂದಿಗೆ ಹಂಚಿಕೊಂಡಿದ್ದಾರೆ. ಇದಾದ ತಕ್ಷಣ ತನ್ನ ಖಾತೆಯಲ್ಲಿದ್ದ ಹಣವನ್ನು ರಾಮ್​ಸಿಂಗ್ ಕಳೆದುಕೊಂಡಿದ್ದಾರೆ.

ಆಗಸ್ಟ್ 2019 ರಿಂದ ಡಿಸೆಂಬರ್ 12, 2022 ರವರೆಗೆ ಭಾರತದಲ್ಲಿ ಸೈಬರ್ ವಂಚನೆಯ 6 ಲಕ್ಷಕ್ಕೂ ಅಧಿಕ ದೂರುಗಳು ದಾಖಲಾಗಿವೆ. 1 ಲಕ್ಷದ 11 ಸಾವಿರ ದೂರುಗಳಲ್ಲಿ 188 ಸಾವಿರ ಕೋಟಿ ರೂಪಾಯಿ ವಂಚನೆಯಿಂದ ಉಳಿಸಲಾಗಿದೆ. ಯಾರಾದರೂ ಸೈಬರ್ ವಂಚನೆ ಮೂಲಕ ಹಣ ಕಳೆದುಕೊಂಡರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯಾದ 1930ಕ್ಕೆ ಕರೆ ಮಾಡಿ ವಿಷಯ ತಿಳಿಸಿದರೆ ಸೈಬರ್ ಕ್ರೈಂ ವಿಭಾಗದ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ನಿಮ್ಮ ಮಾಹಿತಿಯನ್ನು ಆಧರಿಸಿ ನಿಮ್ಮ ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡುತ್ತಾರೆ. ಇದರಿಂದ ನಿಮ್ಮ ಖಾತೆಯಿಂದ ಬೇರೆಯವರಿಗೆ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:22 pm, Mon, 30 January 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ