Sharkbot Malware: ಗೂಗಲ್ ಪ್ಲೇ ಸ್ಟೋರ್​​ನಲ್ಲಿ ಅಪಾಯಕಾರಿ ವೈರಸ್ ಪತ್ತೆ: ಇನ್​ಸ್ಟಾಲ್ ಆಗಿದ್ದರೆ ತಕ್ಷಣ ಡಿಲೀಟ್ ಮಾಡಿ

ಶಾರ್ಕ್ ಬೋಟ್ (SharkBot) ಎಂಬ ಅಪಾಯಕಾರಿ ಮಾಲ್ವೇರ್ ಗೂಗಲ್ ಪ್ಲೇ ಸ್ಟೋರ್​ನಲ್ಲಿ ಕಂಡುಬಂದಿದ್ದು ಇದನ್ನು ಸಾವಿರಕ್ಕೂ ಅಧಿಕ ಮಂದಿ ಇನ್​ಸ್ಟಾಲ್ ಮಾಡಿದ್ದಾರಂತೆ. ಉಪಯೋಗಿಸುತ್ತಿದ್ದರೆ ತಕ್ಷಣವೇ ಡಿಲೀಟ್ ಮಾಡುವಂತೆ ಸೂಚಿಸಲಾಗಿದೆ.

Sharkbot Malware: ಗೂಗಲ್ ಪ್ಲೇ ಸ್ಟೋರ್​​ನಲ್ಲಿ ಅಪಾಯಕಾರಿ ವೈರಸ್ ಪತ್ತೆ: ಇನ್​ಸ್ಟಾಲ್ ಆಗಿದ್ದರೆ ತಕ್ಷಣ ಡಿಲೀಟ್ ಮಾಡಿ
ಗೂಗಲ್ ಪ್ಲೇ ಸ್ಟೋರ್Image Credit source: India Today
Follow us
TV9 Web
| Updated By: Vinay Bhat

Updated on:Nov 28, 2022 | 11:24 AM

ಆಂಡ್ರಾಯ್ಡ್ ಸ್ಮಾರ್ಟ್​ಫೋನುಗಳಲ್ಲಿ ಪ್ಲೇ ಸ್ಟೋರ್ (Play Store) ತೆರೆದರೆ ಸಾಕು ಸಾವಿರಾರು ಆ್ಯಪ್​ಗಳು ಇದರಲ್ಲಿ ಕಾಣಸಿಗುತ್ತದೆ. ಆಂಡ್ರಾಯ್ಡ್ (Android) ಗೂಗಲ್‌ ಪ್ಲೇ ಸ್ಟೋರ್‌ಗೆ ಡೆವಲಪರ್‌ಗಳು ಆ್ಯಪ್​ಗಳನ್ನು ತಯಾರಿಸಿ ಸೇರ್ಪಡೆಗೊಳಿಸುವುದು ತುಂಬಾ ಸುಲಭವಾಗಿರುವುದರಿಂದಾಗಿ, ಈ ಆ್ಯಪ್​​ಗಳ ರಾಶಿಯಲ್ಲಿ ಫೇಕ್ ಆ್ಯಪ್​​ (Fake App) ಸಹ ಸೇರಿಕೊಳ್ಳುತ್ತವೆ. ತಿಳಿಯದೆ ಈ ನಕಲಿ ಆ್ಯಪ್​ಗಳನ್ನು ನೀವು ಡೌನ್ಲೋಡ್ ಮಾಡಿ ಇನ್​ಸ್ಟಾಲ್ ಮಾಡಿಕೊಂಡರೆ ಅಪಾಯ ಕಟ್ಟಿಟ್ಟ ಬುತ್ತಿ. ಬಳಕೆದಾರರ ಖಾಸಗಿ ಫೋಟೋ, ವಿಡಿಯೋ, ಬ್ಯಾಂಕಿಂಗ್ ಮಾಹಿತಿಯನ್ನು ಕದಿಯುವುದು ಈ ಆ್ಯಪ್​ನ ಮುಖ್ಯ ಉದ್ದೇಶವಾಗಿದೆ. ಇದೀಗ ಅಂಥಹ ಅಪಾಯಕಾರಿ ಆ್ಯಪ್ ಪ್ಲೇ ಸ್ಟೋರ್​ನಲ್ಲಿ ಕಂಡು ಬಂದಿದೆ.

ಶಾರ್ಕ್ ಬೋಟ್ (SharkBot) ಎಂಬ ಅಪಾಯಕಾರಿ ಮಾಲ್ವೇರ್ ಗೂಗಲ್ ಪ್ಲೇ ಸ್ಟೋರ್​ನಲ್ಲಿ ಕಂಡುಬಂದಿದ್ದು ಇದನ್ನು ಸಾವಿರಕ್ಕೂ ಅಧಿಕ ಮಂದಿ ಇನ್​ಸ್ಟಾಲ್ ಮಾಡಿದ್ದಾರಂತೆ. Bitdefender ನಲ್ಲಿನ ಸೈಬರ್ ಭದ್ರತಾ ತಜ್ಞರ ಬ್ಲಾಗ್ ಪೋಸ್ಟ್​ನಲ್ಲಿ ಬಗ್ಗೆ ಮಾಹಿತಿ ನೀಡಲಾಗಿದೆ. ಇದು ಫೈಲ್ ಮಾನೇಜರ್ ರೀತಿ ಕಾಣಿಸುತ್ತದೆ ಎಂದಿದೆ. ಇನ್​​ಸ್ಟಾಲ್ ಮಾಡಿ ಉಪಯೋಗಿಸುತ್ತಿದ್ದರೆ ತಕ್ಷಣವೇ ಡಿಲೀಟ್ ಮಾಡುವಂತೆ ಸೂಚಿಸಲಾಗಿದೆ. ಸದ್ಯಕ್ಕೆ ಪ್ಲೇ ಸ್ಟೋರ್​ನಿಂದ ಈ ಡೇಂಜರಸ್ ಆ್ಯಪ್ ತೆಗೆದುಹಾಕಲಾಗಿದೆ. ಹೀಗಿದ್ದರರೂ ಥರ್ಡ್ ಪಾರ್ಟಿ ಅಪ್ಲಿಕೇಶನ್​ಗಳ ಮೂಲಕ ಚಾಲ್ತಿಯಲ್ಲಿದೆ ಎನ್ನಲಾಗಿದೆ.

ನಿಮ್ಮ ಫೋನ್‌ನಲ್ಲಿ ಯಾವುದೇ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವ ಮೊದಲು, ಕೆಲವೊಂದನ್ನು ಪರಿಶೀಲಿಸಿ. ಇಲ್ಲದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಕ್ಷಣಾರ್ಧದಲ್ಲಿ ಖಾಲಿಯಾಗಬಹುದು. ಇತ್ತೀಚೆಗಷ್ಟೆ ಭಾರತ ಸರ್ಕಾರದ ನೋಡಲ್ ಸೈಬರ್‌ ಸೆಕ್ಯುರಿಟಿ ಏಜೆನ್ಸಿ Cert-In ಇತ್ತೀಚೆಗೆ ಭಾರತದಲ್ಲಿ ಬ್ಯಾಂಕಿಂಗ್ ಬಳಕೆದಾರರನ್ನು ಗುರಿಯಾಗಿಸಿಕೊಂಡು SOVA ಆಂಡ್ರಾಯ್ಡ್ ಟ್ರೋಜನ್ ವಿರುದ್ಧ ಎಚ್ಚರಿಕೆ ನೀಡಿತ್ತು. ಜೊತೆಗೆ ನಕಲಿ ಆ್ಯಪ್ ಗುರುತಿಸುವ ಬಗ್ಗೆ ಮಾಹಿತಿ ನೀಡಿತ್ತು.

ಇದನ್ನೂ ಓದಿ
Image
Tech Tips: ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮುನ್ನ ಹೀಗೆ ಮಾಡಲು ಮರೆಯದಿರಿ
Image
Black Friday Sale: ಕೇವಲ 7999 ರೂ. ಗೆ ನಥಿಂಗ್ ಫೋನ್ (1) ಖರೀದಿಸಿ: ಇಲ್ಲಿದೆ ನೋಡಿ ಟ್ರಿಕ್
Image
Oppo Reno 9 Series: ಭಾರತಕ್ಕೆ ಬರುತ್ತಿದೆ ವಿದೇಶದಲ್ಲಿ ಧೂಳೆಬ್ಬಿಸುತ್ತಿರುವ ಒಪ್ಪೋ ರೆನೋ 9 ಸರಣಿ: ಬೆಲೆ ಎಷ್ಟು?
Image
Tech Tips: ನಿಮಗೆ ಇನ್​ಸ್ಟಾಗ್ರಾಮ್​ನಲ್ಲಿ ಫಾಲೋವರ್ಸ್ ಕಡಿಮೆಯಿದ್ದರೆ ಈ ಟ್ರಿಕ್ ಫಾಲೋ ಮಾಡಿ ನೋಡಿ

ನಮ್ಮ ಮೊಬೈಲ್​​ನ ನಿರ್ವಹಣೆಗೆ ಬೇಕಾದ ಸೆಕ್ಯುರಿಟಿ ಆ್ಯಪ್​​ಗಳ ರೂಪದಲ್ಲಿಯೇ ಫೇಕ್ ಆ್ಯಪ್ ಗಳ ಕೂಡ ಸೇರಿಕೊಳ್ಳುತ್ತವೆ. ಆ್ಯಂಟಿ ವೈರಸ್ ರೀತಿಯಲ್ಲಿ, ಕ್ಯಾಚೆ ಕ್ಲಿಯರಿಂಗ್ ರೂಪದಲ್ಲಿ. ಅಥವಾ ಗ್ಯಾಲರಿಯಾಗಿ ಫೇಕ್ ಆ್ಯಪ್​ಗಳು ಮೊಬೈಲ್ ಬಳಕೆದಾರರನ್ನು ವಂಚಿಸುತ್ತವೆ. ಇಂತಹ ವೈರಸ್ ಆ್ಯಪ್ ಗೇಮ್ಸ್ ಮತ್ತು ಶೈಕ್ಷಣಿಕ ರೂಪದಲ್ಲಿಯೂ ತಲೆಮರೆಸಿಕೊಂಡು ಕುಳಿತಿರುತ್ತವೆ.

ಹೆಚ್ಚಿನ ನಕಲಿ ಆ್ಯಪ್ ತಯಾರಕರು ತಮ್ಮ ಆ್ಯಪ್ ಅನ್ನು ಜಾಹಿತಾರುಗೊಳಿಸಿರುತ್ತಾರೆ. ಜಾಹಿರಾತು ಮೂಲಕ ಅಥವಾ ಪಾಪ್ ಅಪ್ ವಿಂಡೋಗಳ ಮೂಲಕ ಬೇರೆಯೇ ಹಲವು ಆ್ಯಪ್​ಗಳನ್ನು ಇನ್​ಸ್ಟಾಲ್ ಮಾಡುವಂತೆ ಬಳಕೆದಾರರನ್ನು ಪ್ರಚೋದಿಸುತ್ತಲೇ ಇರುತ್ತವೆ. ಇಂತಹುಗಳು ಬಹುತೇಕ ದುರುದ್ದೇಶಪೂರಿತ ಕಿರು ತಂತ್ರಾಂಶಗಳೇ ಆಗಿರುತ್ತವೆ.

ಸೆಕ್ಯುರಿಟಿ ತಂತ್ರಜ್ಞರು ಎಚ್ಚರಿಸಿದ ಪ್ರಕಾರ, ವೈರಸ್ ಕ್ಲೀನರ್, ವೈರಸ್ ಬೂಸ್ಟರ್, ಆಯಂಟಿ ವೈರಸ್, ಆಪ್ ಲಾಕ್, ಕ್ಲೀನರ್, ಆಯಂಟಿ ವೈರಸ್ ಫ್ರೀ, ವೈರಸ್ ರಿಮೂವರ್, ಗೇಮ್ ಬಿಲಿಯರ್ಡ್ಸ್, ಚಿಲ್ಡ್ರನ್ ಪೊಲೀಸ್, ಗೇಮ್ ಆಫ್ ಕಾರ್ಸ್ ಹೀಗೆಲ್ಲ ವಿಭಿನ್ನ ಹೆಸರುಗಳಲ್ಲಿರುವ ಆ್ಯಪ್ ಗಳು ನಕಲಿ ಎಂದು ತಜ್ಞರು ಎಚ್ಚರಿಸಿದ್ದಾರೆ. ಮೊದಲು ಆ್ಯಪ್ ನ ನಿಖರ ಹೆಸರು ಪರೀಕ್ಷಿಸಿ ಡೆವಲಪರ್ ಯಾರೆಂದು ನೋಡಿರಿ. ನಂತರ ಆ ಆ್ಯಪ್ಅನ್ನು ಎಷ್ಟು ಜನ ಡೌನ್ಲೋಡ್ ಮಾಡಿದ್ದಾರೆಂದು ನೋಡಿ, ಬಳಕೆದಾರ ರಿವ್ಯೂ ಓದಿ. ಹೆಚ್ಚು ಮಂದಿ ರೇಟಿಂಗ್ಸ್ ನೀಡಿದ್ದರೆ ಮತ್ತು ಅದರ ರೇಟಿಂಗ್ 4 ಕ್ಕಿಂತ ಮೇಲ್ಪಟ್ಟು ಇದ್ದರೆ ಆ ಆ್ಯಪ್ ಅನ್ನು ನೀವು ಇನ್​ಸ್ಟಾಲ್ ಮಾಡಿಕೊಳ್ಳಬಹುದು.

Published On - 11:24 am, Mon, 28 November 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್