Elon Musk: ಎಲಾನ್ ಮಸ್ಕ್ ಸ್ಟಾರ್ ಲಿಂಕ್ ಇಂಟರ್ನೆಟ್ ಪ್ಲಾನ್ ಖರೀದಿಸಬೇಡಿ: ಭಾರತ ಸರ್ಕಾರದಿಂದ ಎಚ್ಚರಿಕೆ

Starlink India: ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳನ್ನು ಸಾರ್ವಜನಿಕರಿಗೆ ಪ್ರಚಾರ ಮಾಡಲು 'ಸ್ಟಾರ್‌ಲಿಂಕ್ ಇಂಟರ್ನೆಟ್ ಸೇವೆಗಳು' ಇನ್ನೂ ಅನುಮತಿ ಹೊಂದಿಲ್ಲ ಎಂದು ಸರ್ಕಾರ ಹೇಳಿದೆ.

Elon Musk: ಎಲಾನ್ ಮಸ್ಕ್ ಸ್ಟಾರ್ ಲಿಂಕ್ ಇಂಟರ್ನೆಟ್ ಪ್ಲಾನ್ ಖರೀದಿಸಬೇಡಿ: ಭಾರತ ಸರ್ಕಾರದಿಂದ ಎಚ್ಚರಿಕೆ
Elon Musk
Follow us
TV9 Web
| Updated By: Vinay Bhat

Updated on: Nov 27, 2021 | 1:34 PM

ಒಂದು ಕಾಲದಲ್ಲಿ ದೇಶದ ಟೆಲಿಕಾಂ (Telecom) ಪ್ರಪಂಚವನ್ನು ಆಳುತ್ತಿದ್ದ ಏರ್ಟೆಲ್ (Airtel) ಕಂಪನಿ ಕಥೆಯನ್ನು ಅಂಬಾನಿ ಒಡೆತನದ ಜಿಯೋ ಮುಗಿಸಿದರೆ, ಇದೀಗ ಜಿಯೋವನ್ನು (JIO) ಮುಗಿಸಲು ವಿಶ್ವದ ನಂಬರ್ ಒನ್ ಶ್ರೀಮಂತ ಉದ್ಯಮಿ, ವಿಶ್ವ ಟೆಕ್ ಪ್ರಪಂಚದ ಪ್ರಸಕ್ತ ಅನಭಿಶಕ್ತ ದೊರೆ ಎಲಾನ್ ಮಸ್ಕ್ (Elon Musk) ಬರುತ್ತಿದ್ದಾರೆ ಎಂದೇ ನಂಬಲಾಗಿತ್ತು. ಆದರೆ, ಇದಕ್ಕೆ ಸದ್ಯ ಬ್ರೇಕ್ ಬಿದ್ದಿದೆ. ತಂತ್ರಜ್ಞಾನ ಉದ್ಯಮಿ, ಟೆಸ್ಲಾ (Tesla) ಮತ್ತು ಸ್ಪೇಸ್‌ ಎಕ್ಸ್ ಕಂಪೆನಿಗಳ ಮಾಲಿಕ ಎಲಾನ್ ಮಸ್ಕ್ ಒಡೆತನನದ, ಉಪಗ್ರಹಗಳ ಗುಚ್ಚದ ಮೂಲಕ ಕುಗ್ರಾಮ ಅಥವಾ ಕಾಡಿನಂತಹ ಪ್ರದೇಶದಲ್ಲೂ ಅತಿವೇಗದ ಇಂಟರ್ನೆಟ್‌ ಸೇವೆ ನೀಡುವ ಸ್ಟಾರ್‌ಲಿಂಕ್‌ ಕಂಪನಿ ಶೀಘ್ರದಲ್ಲೇ ಭಾರತದಲ್ಲೂ ತನ್ನ ಸೇವೆ ಆರಂಭಿಸಲಿದೆ ಎನ್ನಲಾಗಿತ್ತು. ಆದರೆ, ಸದ್ಯ ಭಾರತೀಯ ದೂರಸಂಪರ್ಕ ಇಲಾಖೆ (Department of Telecommunications) ಭಾರತೀಯ ನಾಗರೀಕರಿಗೆ ಸ್ಟಾರ್ ಲಿಂಕ್ ಇಂಟರ್ನೆಟ್ (Starlink Internet) ಪ್ಲಾನ್ ಖರೀದಿಸಬೇಡಿ ಎಂದು ಸೂಚಿಸಿದೆ.

ಭಾರತದಲ್ಲಿ ಸ್ಟಾರ್‌ಲಿಂಕ್‌ ಇಂಟರ್ನೆಟ್ ಸೇವೆ ಒದಗಿಸಲು ಇನ್ನೂ ಪರವಾನಗಿ ಸಿಕ್ಕಿಲ್ಲ. “ಭಾರತದಲ್ಲಿ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳನ್ನು ಸಾರ್ವಜನಿಕರಿಗೆ ಪ್ರಚಾರ ಮಾಡಲು ‘ಸ್ಟಾರ್‌ಲಿಂಕ್ ಇಂಟರ್ನೆಟ್ ಸೇವೆಗಳು’ ಇನ್ನೂ ಅನುಮತಿ ಹೊಂದಿಲ್ಲ” ಎಂದು ಸರ್ಕಾರ ಹೇಳಿದೆ. ಸ್ಟಾರ್‌ಲಿಂಕ್ ಮೊದಲು ದೂರಸಂಪರ್ಕ ಇಲಾಖೆಯಿಂದ ಅನುಮತಿಯನ್ನು ಪಡೆಯಬೇಕು. ನಂತರ ಮುಂದಿನ ಕಾರ್ಯ ನಡೆಯುತ್ತದೆ ಎಂದಿರುವ ಸರ್ಕಾರ, ಯಾವುದೇ ಕಾರಣಕ್ಕೂ ಸ್ಟಾರ್​ ಲಿಂಕ್ ಇಂಟರ್ನೆಟ್ ಅನ್ನು ಮುಂಗಡವಾಗಿ ಬುಕ್ ಮಾಡಬೇಡಿ ಎಂದು ಹೇಳಿದೆ.

ಈಗಾಗಲೇ ಆಸ್ಟ್ರೇಲಿಯಾ, ಕೆನಡಾ, ಚಿಲಿ, ಇಂಗ್ಲೆಂಡ್ ಮತ್ತು ಅಮೆರಿಕ ಸಹಿತ 14 ವಿವಿಧ ರಾಷ್ಟ್ರಗಳಲ್ಲಿ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆ ಒದಗಿಸುತ್ತಿದೆ. ಮಿನಿ ಉಪಗ್ರಹ ಬಳಸಿಕೊಂಡು, ಅದರ ಮೂಲಕ ಹೆಚ್ಚಿನ ವ್ಯಾಪ್ತಿಯನ್ನು ತಲುಪುವ ಯೋಜನೆಯನ್ನು ಸ್ಪೇಸ್‌ಎಕ್ಸ್ ಸಮೂಹದ ಸ್ಟಾರ್‌ಲಿಂಕ್ ಹೊಂದಿದೆ. ಈಗಾಗಲೇ ಭಾರತದಲ್ಲಿ, ಅದರಲ್ಲೂ ನಮ್ಮ ಬೆಂಗಳುರಿನಲ್ಲಿ ಟೆಸ್ಲಾ ಕಾರುಗಳ ಮಾರಾಟಕ್ಕೆ ಯೋಜನೆ ಹಾಕಿಕೊಂಡಿರುವ ಎಲಾನ್ ಮಸ್ಕ್ ಇದೀಗ ಭಾರತದಲ್ಲಿ ಅತಿವೇಗದ ಇಂಟರ್ನೆಟ್ ಸೇವೆ ನೀಡುವ ಸ್ಟಾರ್‌ಲಿಂಕ್‌ ಕಂಪನಿ ಆರಂಭಕ್ಕೆ ತಯಾರಿ ನಡೆಸಿದ್ದಾರೆ.

ಸಾಮಾನ್ಯ ಇಂಟರ್ನೆಟ್ ಸೇವೆ ನೀಡುವ ಟೆಲಿಕಾಂ ಕಂಪನಿಗಳು ತಲುಪದ ಕುಗ್ರಾಮ, ಕಾಡು ಅಥವಾ ಇನ್ನಿತರ ದುರ್ಗಮ ಪ್ರದೇಶಗಳಲ್ಲಿ ಉಪಗ್ರಹಗಳ ಗುಚ್ಚದ ಮೂಲಕ ಅಂತರಿಕ್ಷದಿಂದ ಅತಿವೇಗದ ಇಂಟರ್ನೆಟ್ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಅಮೆರಿಕ ಮುಂತಾದೆಡೆ ಸ್ಟಾರ್‌ಲಿಂಕ್‌ ಕಂಪನಿ ಪ್ರಾಯೋಗಿಕವಾಗಿ ಆರಂಭಿಸಿದ್ದು, ಈ ಸೇವೆಯನ್ನು ಜಗತ್ತಿನಾದ್ಯಂತ ವಿಸ್ತರಿಸಲು ಕಂಪೆನಿ ಉತ್ಸುಕವಾಗಿದೆ.

ಸ್ಟಾರ್ ಲಿಂಕ್ ಈಗಾಗಲೇ ವಿಶ್ವದಾದಂತ್ಯ ಸುಮಾರು ಲಕ್ಷ ಗ್ರಾಹಕರನ್ನ ಹೊಂದಿದೆ. ಆದರೆ ಸದ್ಯದ ಮಟ್ಟಿಗೆ ಇದು ವಿಧಿಸುತ್ತಿರುವ ಶುಲ್ಕ ಭಾರತೀಯ ಮಾರುಕಟ್ಟೆಯಲ್ಲಿ ಬಹಳ ಜನರಿಗೆ ಎಟುಕುವ ಸ್ಥಿತಿಯಲಿಲ್ಲ . ಇದರ ಸೇವೆ ಪಡೆಯಲು ಮೊದಲಿಗೆ 500 ಡಾಲರ್ ನೀಡಬೇಕಾಗುತ್ತದೆ. ಮತ್ತು ಮಾಸಿಕ 99 ಡಾಲರ್ ಹಣವನ್ನ ನೀಡಬೇಕಾಗುತ್ತದೆ. ಭಾರತೀಯ ರೂಪಾಯಿ ಲೆಕ್ಕದಲ್ಲಿ ಪ್ರಥಮವಾಗಿ 36ಸಾವಿರ ನಂತರ ಮಾಸಿಕ 7,400 ರೂಪಾಯಿ ನೀಡಬೇಕಾಗುತ್ತದೆ.

WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತದೆ ಒಂದಲ್ಲ ಎರಡಲ್ಲ ಬರೋಬ್ಬರಿ 8 ಹೊಸ ಫೀಚರ್ಸ್: ಯಾವುವು?

(Department of Telecommunications has warned not buy Elon Musk Starlink Internet Services In India)

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್