
ಈ ವರ್ಷದ ಎರಡನೇ ಕ್ವಾರ್ಟರ್ನಲ್ಲಿ ಪ್ರಸಿದ್ಧ ರಿಯಲ್ ಮಿ (Realme) ಸಂಸ್ಥೆ ತನ್ನ ಸ್ಮಾರ್ಟ್ ಫೋನ್ಗಳನ್ನು ಬಿಡುಗಡೆ ಮಾಡುತ್ತಿರುವ ಸಂಖ್ಯೆಯನ್ನು ಕೊಂಚ ಇಳಿಕೆ ಮಾಡಿದೆ. ಈ ಹಿಂದೆ ತಿಂಗಳಿಗೆ ಕನಿಷ್ಠ ಎರಡು ಮೊಬೈಲ್ಗಳನ್ನು ಅನಾವರಣ ಮಾಡುತ್ತಿದ್ದ ಕಂಪನಿ ಈಗೀಗ ಅಪರೂಪಕ್ಕೆ ಒಂದೊಂದು ಫೋನ್ಗಳನ್ನಷ್ಟೆ ರಿಲೀಸ್ ಮಾಡುತ್ತಿದೆ. ಕಳೆದ ತಿಂಗಳು ರಿಯಲ್ ಮಿ ಭಾರತದಲ್ಲಿ ರಿಯಲ್ ಮಿ 9i 5G ಬಜೆಟ್ ಬೆಲೆಯ ಫೋನನ್ನು ರಿಲೀಸ್ ಮಾಡಿತ್ತು. ಇದೀಗ ಈ ತಿಂಗಳು ಮತ್ತೊಂದು ಹೊಸ ಸ್ಮಾರ್ಟ್ಫೋನ್ (Smartphone) ಬಿಡುಗಡೆ ಮಾಡುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಇದೇ ಸೆಪ್ಟೆಂಬರ್ 6 ರಂದು ಭಾರತದಲ್ಲಿ ಹೊಸ ರಿಯಲ್ ಮಿ ಸಿ33 (Realme C33) ಸ್ಮಾರ್ಟ್ಫೋನ್ ಬಿಡುಗಡೆ ಆಗಲಿದೆ. ಇದುಕೂಡ ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ಬೊಂಬಾಟ್ ಬ್ಯಾಟರಿ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
ಭಾರತದಲ್ಲಿ ರಿಯಲ್ ಮಿ C33 ಸ್ಮಾರ್ಟ್ಫೋನ್ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಲಿದೆ. ಇದರ ಖಚಿತ ಬೆಲೆ ಬಹಿರಂಗವಾಗಿಲ್ಲವಾದರೂ 3GB RAM + 32GB ಸ್ಟೋರೇಜ್ ಆವೃತ್ತಿಗೆ 9,500ರೂ. ಹಾಗೂ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 10,500 ರೂ. ಇರಬಹುದೆಂದು ಅಂದಾಜಿಸಲಾಗಿದೆ.
ಈ ಸ್ಮಾರ್ಟ್ಫೋನ್ 6.6 ಇಂಚಿನ ಫುಲ್ HD+ ಡಿಸ್ಪ್ಲೇಯನ್ನು ಹೊಂದಿರಬಹುದು. ಈ ಡಿಸ್ಪ್ಲೇ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಪಡೆದುಕೊಂಡಿದ್ದು 90Hz ರಿಫ್ರೆಶ್ ರೇಟ್ ಇರಬಹುದೆಂದು ಹೇಳಲಾಗಿದೆ. ಮೀಡಿಯಾ ಟೆಕ್ ಹೀಲಿಯೊ ಪ್ರೊಸೆಸರ್ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದಿದೆ.
ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್ಅಪ್ ನೀಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ನಲ್ಲಿರುವುದು ಕಂಪನಿ ಬಹಿರಂಗ ಪಡಿಸಿದೆ. ಎರಡನೇ ಕ್ಯಾಮೆರಾ ಎಷ್ಟು ಮೆಗಾಫಿಕ್ಸೆಲ್ ಎಂಬುದು ಇನ್ನೂ ತಿಳಿದುಬಂದಿಲ್ಲ. 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಇರಬಹುದು.
ಇನ್ನು ರಿಯಲ್ಮಿ C33 ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಲೈಫ್ ಹೊಂದಿದ್ದು ಇದಕ್ಕೆ ಪೂರಕವಾಗಿ 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ. 37 ಗಂಟೆಗಳ ಕಾಲ ಸ್ಟ್ಯಾಂಡ್ ಬೈ ಟೈಮ್ ಬರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಜೊತೆಗೆ ಆಲ್ಟ್ರಾ ಸೇವಿಂಗ್ ಮೋಡ್ ಆಯ್ಕೆ ಇರಲಿದೆಯಂತೆ.