ಟೆಸ್ಲಾ ಸಿಇಒ ಎಲಾನ್ ಮಸ್ಕ್ (Elon Musk) ಟ್ವಿಟ್ಟರ್ ಅನ್ನು ತನ್ನ ತೆಕ್ಕೆಗೆ ಪಡೆದುಕೊಂಡ ಬಳಿಕ ಪ್ರಸಿದ್ಧ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ನಲ್ಲಿ ಒಂದಲ್ಲ ಒಂದು ಬದಲಾವಣೆ ತರುತ್ತಲೇ ಇದ್ದಾರೆ. ಇದೀಗ ಬಹುದೊಡ್ಡ ನಿರ್ಧಾರ ತೆಗೆದುಕೊಂಡಿದ್ದು ಶೀಘ್ರದಲ್ಲೇ ಟ್ವಿಟ್ಟರ್ನ (Twitter) ಹೊಸ ಲೋಗೋವನ್ನು ಲಾಂಚ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಎಲಾನ್ ಮಸ್ಕ್ ಟ್ವೀಟ್ ಮಾಡುವ ಮೂಲಕ ಟ್ವಿಟರ್ ಲೋಗೋವನ್ನು (Twitter Logo) ಬದಲಾಯಿಸುವ ಉದ್ದೇಶವನ್ನು ಪ್ರಕಟಿಸಿದ್ದಾರೆ.
“ಶೀಘ್ರದಲ್ಲೇ ನಾವು ಟ್ವಿಟ್ಟರ್ ಬ್ರ್ಯಾಂಡ್‌ಗೆ ಮತ್ತು ಎಲ್ಲಾ ಪಕ್ಷಿಗಳಿಗೆ ವಿದಾಯ ಹೇಳುತ್ತೇವೆ,” ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ಟ್ವಿಟರ್‌ನ ಲೋಗೋ ಪಕ್ಷಿ ಆಗಿದ್ದು ಸದ್ಯದಲ್ಲೇ ಇದು ಬದಲಾವಣೆ ಆಗಲಿದೆ. ಎಲಾನ್ ಮಸ್ಕ್ ಈರೀತಿ ಟ್ವೀಟ್ ಮಾಡಿದ ಬೆನ್ನಲ್ಲೇ ಇದಕ್ಕೆ ಸಾಕಷ್ಟು ಕಮೆಂಟ್ಗಳು ಬಂದಿದ್ದು, ಪರ-ವಿರೋಧದ ಚರ್ಚೆಗಳು ಆರಂಭವಾಗಿದೆ. ಅನೇಕರು ಟ್ವಿಟ್ಟರ್ ಲೋಗೋವನ್ನು ಬದಲಾಯಿಸ ಬೇಡಿ ಎಂದು ಹೇಳುತ್ತಿದ್ದಾರೆ.
Realme GT 2: 40,000 ರೂ. ವಿನ ಈ ಸ್ಮಾರ್ಟ್ಫೋನ್ ಬೆಲೆ ಈಗ ಕೇವಲ 27,999 ರೂ.
And soon we shall bid adieu to the twitter brand and, gradually, all the birds
— Elon Musk (@elonmusk) July 23, 2023
ಇದರ ಜೊತೆಗೆ ತನ್ನ ಮೆಚ್ಚುನ ‘ಎಕ್ಸ್’ ಆ್ಯಪ್ ಬಗ್ಗೆಯೂ ಟ್ವೀಟ್ ಮಾಡಿರುವ ಮಸ್ಕ್, ನಾಳೆಯೇ ನಾವು ಜಗತ್ತಿನಾದ್ಯಂತ ಲೈವ್ ಹೋಗಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಆ್ಯಪ್ ಸಾಕಷ್ಟು ವಿಶೇಷವಾಗಿದ್ದು, ಜನರು ತಮ್ಮ ಅನಿಸಿಕೆಗಳನ್ನು ವಿಶ್ವದ ಮುಂದೆ ತೆರೆದಿಟ್ಟುಕೊಳ್ಳಲು ಇರುವ ಒಂದು ಅತ್ಯುತ್ತಮ ವೇದಿಕೆ ಆಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.
— Elon Musk (@elonmusk) July 23, 2023
ಸಾಮಾನ್ಯವಾಗಿ ಎಲಾನ್ ಮಸ್ಕ್ ಅವರ ಪೋಸ್ಟ್ಗೆ ಟ್ವಿಟ್ಟರ್ ಬಳಕೆದಾರರಿಂದ ಮಿಶ್ರ ಪ್ರತಿಕ್ರಿಯೆಗಳು ಬರುತ್ತದೆ. ಅದು ಈ ಬಾರಿ ಕೂಡ ಮುಂದುವರೆದಿದೆ, ಕೆಲವರು ಮುಂಬರುವ ಬದಲಾವಣೆಯ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರೆ, ಇನ್ನು ಕೆಲವರು ಈ ತಪ್ಪನ್ನು ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಟ್ವಿಟ್ಟರ್ ಖರೀದಿಯಿಂದ ಹಿಂದಕ್ಕೆ ಸರಿಯುವ ತಮ್ಮ ಪ್ರಯತ್ನವನ್ನು ವಿಫಲಗೊಳಿಸಿದ್ದ ವಾಚ್ಟೆಲ್, ಲಿಪ್ಟನ್, ರೋಸೆನ್ ಅಂಡ್ ಕಾಟ್ಜ್ ಎಂಬ ಲಾ ಏಜೆನ್ಸಿ ವಿರುದ್ಧ ಎಲಾನ್ ಮಸ್ಕ್ ಮೊಕದ್ದಮೆ ಹಾಕಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಕ್ಯಾಲಿಫೋರ್ನಿಯಾ ಸುಪೀರಿಯರ್ ಕೋರ್ಟ್ನಲ್ಲಿ ಕಳೆದ ವಾರ ಎಕ್ಸ್ ಕಾರ್ಪ್ (X Corp) ಸಂಸ್ಥೆ ದೂರು ದಾಖಲಿಸಿದೆ. ಎಕ್ಸ್ ಕಾರ್ಪ್ ಎಂಬುದು ಎಲಾನ್ ಮಸ್ಕ್ ಮಾಲೀಕತ್ವದ ಕಂಪನಿ. ಟ್ವಿಟ್ಟರ್ ಖರೀದಿ ಒಪ್ಪಂದ ಪೂರ್ಣಗೊಳ್ಳುವಂತೆ ಮಾಡಲು ವಾಚ್ಟೆಲ್ ಸಂಸ್ಥೆ 90 ಮಿಲಿಯನ್ ಡಾಲರ್ನಷ್ಟು (740 ಕೋಟಿ ರೂ.) ದೊಡ್ಡ ಮೊತ್ತದ ಶುಲ್ಕವನ್ನು ಪಡೆದಿದೆ ಎಂಬುದು ಎಲಾನ್ ಮಸ್ಕ್ ಅವರ ಆರೋಪವಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ