ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎಮರ್ಜೆನ್ಸಿ ಅಲರ್ಟ್ ಸಿಸ್ಟಂನ (Emergency Alert System) ಭಾಗವಾಗಿ ಸೆಲ್ ಬ್ರಾಡ್ಕ್ಯಾಸ್ಟ್ ಸಿಸ್ಟಂ (Cell Broadcast System) ಅನ್ನು ರೂಪಿಸಲಾಗಿದೆ. ಈ ಸಿಸ್ಟಂ ಅನ್ನು ಜಾರಿಗೆ ತರುವ ಮುನ್ನ ದೇಶಾದ್ಯಂತ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅದರ ಭಾಗವಾಗಿ ಇವತ್ತು ಎಲ್ಲರ ಮೊಬೈಲ್ ನಂಬರ್ಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬಂದಿರಬಹುದು. ಇದು ಕೇವಲ ಸ್ಯಾಂಪಲ್ ಮೆಸೇಜ್ ಮಾತ್ರವೇ ಆಗಿರುತ್ತದೆ. ಯಾರು ಗಾಬರಿ ಆಗಬಾರದೆಂದು ಮೊನ್ನೆಯೇ ಸರ್ಕಾರ ಸಾರ್ವಜನಿಕರಿಗೆ ಮನವಿ ಮಾಡಿತ್ತು.
ಹಿಂದೆ ಇದರ ಪರೀಕ್ಷಾರ್ಥ ಪ್ರಯೋಗಗಳು ನಡೆದಿದ್ದವು. ಜುಲೈ 20, ಆಗಸ್ಟ್ 17 ಮತ್ತು ಸೆಪ್ಟೆಂಬರ್ 21ರಂದು ದೇಶದ ವಿವಿಧೆಡೆ ಟೆಸ್ಟ್ ಮೆಸೇಜ್ಗಳು ಬಂದಿದ್ದವು. ಆಗ ಸೀಮಿತ ಸಂಖ್ಯೆಯ ಜನರಿಗೆ ಮಾತ್ರ ಅಲರ್ಟ್ ಮೆಸೇಜ್ ನೀಡಲಾಗಿತ್ತು. ಈಗ ಬಹುತೇಕ ಎಲ್ಲರಿಗೂ ಅಲರ್ಟ್ ಮೆಸೇಜ್ ಬಂದಿರುತ್ತದೆ. ಕೆಲ ನಿಮಿಷಗಳ ಅಂತರದಲ್ಲಿ ಇಂಗ್ಲೀಷ್ ಮತ್ತು ಕನ್ನಡದಲ್ಲಿ ಮೆಸೇಜ್ ಕಳುಹಿಸಲಾಗಿದೆ. ಕನ್ನಡದಲ್ಲಿ ಮೆಸೇಜ್ ಈ ಕೆಳಕಂಡಂತಿರುತ್ತದೆ:
Emergency alert: Extreme
‘ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.’
ತಮ್ಮ ಮೊಬೈಲ್ಗೆ ಅಲರ್ಟ್ ಮೆಸೇಜ್ ಬಂದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಇದಕ್ಕೆ ಸಂಭಾವ್ಯ ಕಾರಣಗಳು ಇಲ್ಲಿವೆ:
ಇದನ್ನೂ ಓದಿ: ಐದು ವರ್ಷದೊಳಗೆ ಪಿಎಫ್ ಹಣ ಹಿಂಪಡೆದರೆ ತೆರಿಗೆ ಕಡಿತ; ಈ ಇಪಿಎಫ್ ನಿಯಮಗಳು ತಿಳಿದಿರಲಿ
ಇನ್ನಷ್ಟು ತಂತ್ರಜ್ಞಾನ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 1:05 pm, Thu, 12 October 23