Facebook and Instagram Down: ಫೇಸ್ಬುಕ್, ಇನ್ಸ್ಟಾಗ್ರಾಮ್ ಏಕಾಏಕಿ ಲಾಗೌಟ್: ಪಾಸ್​ವರ್ಡ್​ ಮರೆತವರ ಕಥೆ ಏನು?

| Updated By: ರಮೇಶ್ ಬಿ. ಜವಳಗೇರಾ

Updated on: Mar 05, 2024 | 9:53 PM

Facebook and Instagram Down: ಜನಪ್ರಿಯ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿದ್ದು, ಜಗತಿನಾದ್ಯಂತ ಏಕಾಏಕಿ ಖಾತೆಗಳು ಲಾಗೌಟ್ ಆಗಿವೆ. ಇದರಿಂದ ಬಳಕೆದಾರರ ಕಂಗಲಾಗಿದ್ದಾರೆ. ಇನ್ನು ಪಾಸ್​ವರ್ಡ್​ ಮರೆತವರು ಕಥೆ ಏನು?

Facebook and Instagram Down: ಫೇಸ್ಬುಕ್, ಇನ್ಸ್ಟಾಗ್ರಾಮ್ ಏಕಾಏಕಿ ಲಾಗೌಟ್: ಪಾಸ್​ವರ್ಡ್​ ಮರೆತವರ ಕಥೆ ಏನು?
ಫೇಸ್ಬುಕ್, ಇನ್ಸ್ಟಾಗ್ರಾಮ್
Follow us on

ಜನಪ್ರಿಯ ಜಾಲತಾಣಗಳಾದ ಫೇಸ್​ಬುಕ್, ಇನ್ಸ್ಟಾಗ್ರಾಮ್  (Facebook And Instagram) ಸರ್ವರ್ ಡೌನ್ ಆಗಿದ್ದು, ಜಗತಿನಾದ್ಯಂತ ಏಕಾಏಕಿ ಖಾತೆಗಳು ಲಾಗೌಟ್ ಆಗಿವೆ. ಹೌದು..ಇಂದು (ಮಾರ್ಚ್ 05) ರಾತ್ರಿ 9ರ ಸುಮಾರಿಗೆ ಏಕಾಏಕಿ ಫೇಸ್​ಬುಕ್​ ಹಾಗೂ ಇನ್ಸ್ಟಾಗ್ರಾಮ್ ಏಕಾಏಕಿ ತನ್ನಷ್ಟಕ್ಕೆ ತಾನೇ ಲಾಗೌಟ್ ಆಗಿವೆ. ​ಇದರಿಂದ ಬಳಕೆದಾರರು ಕಂಗಲಾಗಿದ್ದಾರೆ. ಇನ್ನು ಫೇಸ್ಬುಕ್​ ಪಾಸ್​ವರ್ಡ್​ ಮರೆತವರು ಪುನಃ  ಲಾಗಿನ್ ಆಗುವುದಕ್ಕೆ  ಪರದಾಡುವಂತಾಗಿದೆ.

ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿಲ್ಲ.ಏಕಾಏಕಿ ಖಾತೆಗಳು ಲಾಗೌಟ್ ಆಗಿರುವುದು ಏಕೆ? ಎನ್ನುವುದು ಬಳಕೆದಾರರ ಪ್ರಶ್ನೆಯಾಗಿದೆ. ತನ್ನಷ್ಟಕ್ಕೆ ತಾನೇ ಲಗೌಟ್ ಆಗಿದ್ದರಿಂದ ಪಾಸ್​ವರ್ಡ್​ ಮರೆತವರು ಮತ್ತು ಬೇರೆಯವರ ಕಡೆಯಿಂದ ಫೇಸ್ಬುಕ್ ಖಾತೆ ಸೃಷ್ಟಿಸಿಕೊಂಡವರಿಗೆ ಮತ್ತೆ ಲಾಗಿನ್ ಆಗುವುದು ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ. ಇದರಿಂದಾಗಿ ಸಾವಿರಾರು ಜನ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Cyber Crime: ನೀವು ಸಾರ್ವಜನಿಕ ಸ್ಥಳಗಳಲ್ಲಿ ಫೋನ್ ಚಾರ್ಜ್ ಮಾಡುತ್ತಿದ್ದೀರಾ?: ಆರ್‌ಬಿಐ ಎಚ್ಚರಿಕೆ

ಫೇಸ್‌ಬುಕ್‌ಗೆ ಏನಾಗಿದೆ? ಯಾಕೆ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳು ಏಕಾಏಕಿ ಲಾಗ್‌ಔಟ್‌ ಆಗಿವೆ? ಯಾಕೆ ಮತ್ತೆ ಲಾಗ್‌ಇನ್‌ ಆಗುತ್ತಿಲ್ಲ ಎಂಬ ಪ್ರಶ್ನೆಗಳನ್ನು ಎಕ್ಸ್‌ನಲ್ಲಿ ಜನ ಕೇಳುತ್ತಿದ್ದಾರೆ. ಇನ್ನು, ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಸರ್ವರ್‌ ಡೌನ್‌ ಆಗಿರುವ ಕುರಿತು ಬಗೆಬಗೆಯ ಟ್ರೋಲ್‌ಗಳು, ವಿಡಿಯೊಗಳನ್ನು ಟ್ವಿಟ್ಟರ್​ ಎಕ್ಸ್‌ನಲ್ಲಿ ಹರಿದಾಡುತ್ತಿವೆ. ಇನ್ನು ಯಾಕೆ ಈ ಸಮಸ್ಯೆ ಉಂಟಾಗಿದೆ ಎಂಬುದರ ಕುರಿತು ಫೇಸ್‌ಬುಕ್‌ ಅಥವಾ ಇನ್‌ಸ್ಟಾಗ್ರಾಂ ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಫೇಸ್ ಬುಕ್ ಒಂದು ಪ್ರಸಿದ್ಧ ಸಾಮಾಜಿಕ ಜಾಲತಾಣವಾಗಿದ್ದು, ಈ ವೇದಿಕೆಯಲ್ಲಿ ವಿಶ್ವದಾದ್ಯಂತ ಬಿಲಿಯನ್ ಗಟ್ಟಲೇ ಬಳಕೆದಾರರಿದ್ದಾರೆ. ಹಾಗೇ ಪ್ರತಿದಿನ ಸಾವಿರಾಕ್ಕೂ ಅಧಿಕ ಮಂದಿ ಸೇರ್ಪಡೆಗೊಂಡು ಸೈನ್ ಇನ್ ಆಗುತ್ತಾರೆ. ಫೇಸ್ ಬುಕ್ ನ್ನು ಪ್ರಮುಖವಾಗಿ ಹೊಸ ಸ್ನೇಹಿತರನ್ನು ಗಳಿಸಲು, ಈಗಿರುವ ಸ್ನೇಹಿತರ ಜೊತೆ ಯಾವಾಗಲೂ ಸಂಪರ್ಕದಲ್ಲಿರಲು, ಮೇಸೇಜ್ ಗಳನ್ನು ಹಂಚಿಕೊಳ್ಳಲು, ವೀಡಿಯೋ, ಚಿತ್ರಗಳು ಮತ್ತು ಇತರೆ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲು ಬಳಸಲಾಗುತ್ತೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Tue, 5 March 24