ಆಂಡ್ರಾಯ್ಡ್ ಸ್ಮಾರ್ಟ್ಫೋನುಗಳಲ್ಲಿ ಪ್ಲೇ ಸ್ಟೋರ್ (Play Store) ತೆರೆದರೆ ಸಾಕು ಸಾವಿರಾರು ಆ್ಯಪ್ಗಳು ಇದರಲ್ಲಿ ಕಾಣಸಿಗುತ್ತದೆ. ಆಂಡ್ರಾಯ್ಡ್ (Android) ಗೂಗಲ್ ಪ್ಲೇ ಸ್ಟೋರ್‌ಗೆ ಡೆವಲಪರ್‌ಗಳು ಆ್ಯಪ್ಗಳನ್ನು ತಯಾರಿಸಿ ಸೇರ್ಪಡೆಗೊಳಿಸುವುದು ತುಂಬಾ ಸುಲಭವಾಗಿರುವುದರಿಂದಾಗಿ, ಈ ಆ್ಯಪ್ಗಳ ರಾಶಿಯಲ್ಲಿ ಫೇಕ್ ಆ್ಯಪ್ (Fake App) ಕೂಡ ಸೇರಿಕೊಳ್ಳುತ್ತವೆ. ತಿಳಿಯದೆ ಈ ನಕಲಿ ಆ್ಯಪ್ಗಳನ್ನು ನೀವು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಂಡರೆ ಅಪಾಯ ಕಟ್ಟಿಟ್ಟ ಬುತ್ತಿ. ಬಳಕೆದಾರರ ಖಾಸಗಿ ಫೋಟೋ, ವಿಡಿಯೋ, ಬ್ಯಾಂಕಿಂಗ್ ಮಾಹಿತಿಯನ್ನು ಕದಿಯುವುದು ಈ ಆ್ಯಪ್ನ ಮುಖ್ಯ ಉದ್ದೇಶವಾಗಿದೆ. ಇದೀಗ ಅಂಥಹ ಅಪಾಯಕಾರಿ ಆ್ಯಪ್ ಪ್ಲೇ ಸ್ಟೋರ್ನಲ್ಲಿ ಕಂಡು ಬಂದಿದೆ.
ಫ್ಲೆಕ್ಪೆ (Fleckpe) ಎಂಬ ಅಪಾಯಕಾರಿ ಮಾಲ್ವೇರ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಕಂಡುಬಂದಿದ್ದು ಇದನ್ನು ಆರು ಲಕ್ಷಕ್ಕೂ ಅಧಿಕ ಮಂದಿ ಇನ್ಸ್ಟಾಲ್ ಮಾಡಿದ್ದಾರಂತೆ. ಸೈಬರ್ ಭದ್ರತಾ ತಜ್ಞರ ಬ್ಲಾಗ್ ಪೋಸ್ಟ್ನಲ್ಲಿ ಬಗ್ಗೆ ಮಾಹಿತಿ ನೀಡಲಾಗಿದೆ. ಇನ್ಸ್ಟಾಲ್ ಮಾಡಿ ಉಪಯೋಗಿಸುತ್ತಿದ್ದರೆ ತಕ್ಷಣವೇ ಡಿಲೀಟ್ ಮಾಡುವಂತೆ ಸೂಚಿಸಲಾಗಿದೆ. ನಿಮ್ಮ ಫೋನ್‌ನಲ್ಲಿ ಈ ನಕಲಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವ ಮೊದಲು, ಕೆಲವೊಂದನ್ನು ಪರಿಶೀಲಿಸಿ. ಇಲ್ಲದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಕ್ಷಣಾರ್ಧದಲ್ಲಿ ಖಾಲಿಯಾಗಬಹುದು. ಇತ್ತೀಚೆಗಷ್ಟೆ ಭಾರತ ಸರ್ಕಾರದ ನೋಡಲ್ ಸೈಬರ್ ಸೆಕ್ಯುರಿಟಿ ಏಜೆನ್ಸಿ Cert-In ಇತ್ತೀಚೆಗೆ ಭಾರತದಲ್ಲಿ ಬ್ಯಾಂಕಿಂಗ್ ಬಳಕೆದಾರರನ್ನು ಗುರಿಯಾಗಿಸಿಕೊಂಡು SOVA ಆಂಡ್ರಾಯ್ಡ್ ಟ್ರೋಜನ್ ವಿರುದ್ಧ ಎಚ್ಚರಿಕೆ ನೀಡಿತ್ತು. ಜೊತೆಗೆ ನಕಲಿ ಆ್ಯಪ್ ಗುರುತಿಸುವ ಬಗ್ಗೆ ಮಾಹಿತಿ ನೀಡಿತ್ತು.
ಸದ್ಯ ಈ 11 ಆ್ಯಪ್ಗಳ ಬಗ್ಗೆ ಎಚ್ಚರಿಕೆ ನೀಡಿರುವ ಸೈಬಲ್ ಸೆಕ್ಯುರಿಟಿ ಡೌನ್ಲೋಡ್ ಮಾಡಿರುವ ಬಳಕೆದಾರರಿಗೆ ತಕ್ಷಣವೇ ಡಿಲೀಟ್ ಮಾಡುವಂತೆ ಕೇಳಿಕೊಂಡಿದೆ. ಅದರಂತೆ ನೀವು ಜಾಗರೂಕರಾಗಿರಬೇಕಾದ 11 ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿ ಹೀಗಿದೆ. ಇವುಗಳು ನಿಮ್ಮ ವೈಯಕ್ತಿಕ ಮಾಹಿತಿ ಮತ್ತು ಹಣವನ್ನು ದೋಚಿಕೊಳ್ಳುತ್ತದೆ ಎಂದು ಹೇಳಲಾಗಿದೆ.
ಹೆಚ್ಚಾಗಿ ಮೊಬೈಲ್ನ ನಿರ್ವಹಣೆಗೆ ಬೇಕಾದ ಸೆಕ್ಯುರಿಟಿ ಆ್ಯಪ್ಗಳ ರೂಪದಲ್ಲಿಯೇ ಫೇಕ್ ಆ್ಯಪ್ ಗಳ ಕೂಡ ಸೇರಿಕೊಳ್ಳುತ್ತವೆ. ಆ್ಯಂಟಿ ವೈರಸ್ ರೀತಿಯಲ್ಲಿ, ಕ್ಯಾಚೆ ಕ್ಲಿಯರಿಂಗ್ ರೂಪದಲ್ಲಿ ಅಥವಾ ಗ್ಯಾಲರಿಯಾಗಿ ಫೇಕ್ ಆ್ಯಪ್ಗಳು ಮೊಬೈಲ್ ಬಳಕೆದಾರರನ್ನು ವಂಚಿಸುತ್ತವೆ. ಇಂತಹ ವೈರಸ್ ಆ್ಯಪ್ ಗೇಮ್ಸ್ ಮತ್ತು ಶೈಕ್ಷಣಿಕ ರೂಪದಲ್ಲಿಯೂ ತಲೆಮರೆಸಿಕೊಂಡು ಕುಳಿತಿರುತ್ತವೆ. ಹೆಚ್ಚಿನ ನಕಲಿ ಆ್ಯಪ್ ತಯಾರಕರು ತಮ್ಮ ಆ್ಯಪ್ ಅನ್ನು ಜಾಹಿತಾರುಗೊಳಿಸಿರುತ್ತಾರೆ. ಜಾಹಿರಾತು ಮೂಲಕ ಅಥವಾ ಪಾಪ್ ಅಪ್ ವಿಂಡೋಗಳ ಮೂಲಕ ಬೇರೆಯೇ ಹಲವು ಆ್ಯಪ್ಗಳನ್ನು ಇನ್ಸ್ಟಾಲ್ ಮಾಡುವಂತೆ ಬಳಕೆದಾರರನ್ನು ಪ್ರಚೋದಿಸುತ್ತಲೇ ಇರುತ್ತವೆ. ಇಂತಹುಗಳು ಬಹುತೇಕ ದುರುದ್ದೇಶಪೂರಿತ ಆಗಿರುತ್ತವೆ. ಹೀಗಾಗಿ ಇಂತಹ ನಕಲಿ ಆ್ಯಪ್ಗಳಿಂದ ಎಚ್ಚರವಾಗಿರಿ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ