AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sundar Pichai: ಚಿತ್ರ ನಿರ್ಮಾಪಕರಿಂದ ದೂರು: ಗೂಗಲ್ ಸಿಇಒ ಸುಂದರ್ ಪಿಚೈ ವಿರುದ್ಧ ಎಫ್‌ಐಆರ್ ದಾಖಲು

ಬಾಲಿವುಡ್ ನಿರ್ಮಾಪಕ ಸುನೀಲ್ ದರ್ಶನ್ ಅವರು ತಮ್ಮ ಚಿತ್ರವೊಂದರ ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಪಿಚೈ ಮತ್ತು ಗೂಗಲ್ ಸಂಸ್ಥೆಯ ಐದು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ.

Sundar Pichai: ಚಿತ್ರ ನಿರ್ಮಾಪಕರಿಂದ ದೂರು: ಗೂಗಲ್ ಸಿಇಒ ಸುಂದರ್ ಪಿಚೈ ವಿರುದ್ಧ ಎಫ್‌ಐಆರ್ ದಾಖಲು
Sundar Pichai
TV9 Web
| Updated By: Vinay Bhat|

Updated on:Jan 27, 2022 | 1:54 PM

Share

ಅನುಮತಿಯಿಲ್ಲದೇ ಸಿನಿಮಾ ಪ್ರಸಾರ ಮಾಡಿರುವ ಮತ್ತು ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ (Sundar Pichai) ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಾಲಿವುಡ್ ಚಿತ್ರ ತಯಾರಕ, ನಿರ್ದೇಶಕ ಮತ್ತು ನಿರ್ಮಾಪಕ ಸುನೀಲ್ ದರ್ಶನ್ ಅವರು ತಮ್ಮ ಚಿತ್ರವೊಂದರ ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಪಿಚೈ ಮತ್ತು ಗೂಗಲ್ ಸಂಸ್ಥೆಯ ಐದು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ. ಏಕ್ ಹಸೀನಾ ಥಿ ಏಕ್ ದೀವಾನಾ ಥಾ (Ek Hasina Thi Ek Deewana Tha) ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅನುಮತಿ ಇಲ್ಲದೇ ಗೂಗಲ್​ನಲ್ಲಿ ಅಪ್​ಲೋಡ್​ ಮಾಡಲಾಗಿದೆ ಎಂದು ಆರೋಪಿಸಿ ನಿರ್ದೇಶಕ ಸುನೀಲ್ ದರ್ಶನ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ನಿರ್ಮಾಪಕ ಸುನೀಲ್​ ದರ್ಶನ್​, “ನಾನು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿಲ್ಲ. ನಾನು ದಾಖಲೆ ಸಮೇತ ಸತ್ಯಗಳನ್ನು ಹಾಕಲು ಪ್ರಯತ್ನಿಸುತ್ತಿದ್ದೇನೆ. ಅದಕ್ಕಿಂತ ಹೊರತಾಗಿ ಬೇರೆ ಯಾವುದೇ ಉದ್ದೇಶ ಹೊಂದಿಲ್ಲ. ಚಲನಚಿತ್ರ ನಿರ್ಮಾಪಕ ಮತ್ತು ಹಕ್ಕುಸ್ವಾಮ್ಯ ಮಾಲೀಕರಾಗಿ, ನಾನು ಕೆಲವು ಹಕ್ಕುಗಳನ್ನು ಹೊಂದಿದ್ದೇನೆ. ಅವುಗಳನ್ನು ನಿರ್ದಯವಾಗಿ ಉಲ್ಲಂಘಿಸಿದಾಗ, ನಾನು ಏನು ಮಾಡಬೇಕು? ನಾನೊಬ್ಬ ಅಸಹಾಯಕ,” ಎಂದು ತಿಳಿಸಿದ್ದಾರೆ. ಸುನೀಲ್ ಅವರು ತಾವು 2017ರಲ್ಲಿ ನಿರ್ಮಿಸಿದ ಚಿತ್ರ `ಏಕ್ ಹಸೀನಾ ಥೀ ಏಕ್ ದಿವಾನಾ ಥಾ’ ಇದರ ಕಾಪಿರೈಟ್ ಅನ್ನು ಯಾರಿಗೂ ಮಾರಾಟ ಮಾಡದೇ ಇದ್ದರೂ ಅದನ್ನು ಯುಟ್ಯೂಬ್‌ನಲ್ಲಿ ಹಲವರು ಅಪ್‌ಲೋಡ್ ಮಾಡಿದ್ದಾರೆ. ಈ ಕುರಿತು ಯುಟ್ಯೂಬ್‌ಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ.

ಈ ರೀತಿ ಕಾನೂನುಬಾಹಿರವಾಗಿ ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ಪರಿಣಾಮ ಚಿತ್ರದ ಮಾರುಕಟ್ಟೆ ಮೌಲ್ಯ  ಬಹಳಷ್ಟು ಕಡಿಮೆಯಾಗಿದೆ. ಗೂಗಲ್‌ಗೆ ಈ ಹಿಂದೆ ದೂರು ನೀಡಿದ್ದರೂ ಪ್ರಯೋಜನವಾಗದೇ ಇದ್ದುದರಿಂದ ಈಗ ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಸುನೀಲ್ ಅವರ ವಕೀಲರು ಹೇಳಿದ್ದಾರೆ. ಈ ಪ್ರಕರಣವನ್ನು ಕಾಪಿರೈಟ್ ಕಾಯಿದೆ 1957 ಇದರ ಸೆಕ್ಷನ್ 51, 63 ಮತ್ತು 69 ಅನ್ವಯ ದಾಖಲಿಸಲಾಗಿದೆ.

ಸುಂದರ್ ಪಿಚೈಗೆ ಪದ್ಮ ಭೂಷಣ ಪ್ರಶಸ್ತಿ:

ಬುಧವಾರ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ವಿವಿಧ ಕ್ಷೇತ್ರಗಳ ಸಾಧಕರಿಗೆ ಭಾರತದ ಅತ್ಯುನ್ನತ ಪ್ರಶಸ್ತಿಯನ್ನು ಪ್ರಕಟಿಸಿದೆ. ಸುಮಾರು 128 ಸಾಧಕರಿಗೆ ಪದ್ಮಶ್ರೀ, ಪದ್ಮ ಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತಂತ್ರಜ್ಞಾನ ವಲಯದಲ್ಲಿ ಭಾರತೀಯ ಮೂಲದ ಗೂಗಲ್ ಸಿಇಒ ಸುಂದರ್ ಪಿಚೈ ಅವರಿಗೂ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಗಿತ್ತು. ಈ ಖುಷಿಯಲ್ಲಿರುವಾಗಲೇ ಬಾಲಿವುಡ್ ನಿರ್ದೇಶಕರೊಬ್ಬರು ಸುಂದರ್ ಪಿಚೈ ವಿರುದ್ಧ ದೂರು ದಾಖಲಿಸಿದ್ದಾರೆ.

Tata Play: ಟಾಟಾ ಸ್ಕೈ ಹೆಸರು ಬದಲಾವಣೆ: ಹೊಸ ಹೆಸರಿನೊಂದಿಗೆ ಬಂಪರ್ ಆಫರ್ ಘೋಷಿಸಿದ ಟಾಟಾ ಪ್ಲೇ

Published On - 1:49 pm, Thu, 27 January 22

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..