AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart Big Billion Days sale: ಶೇ.80 ರಷ್ಟು ಡಿಸ್ಕೌಂಟ್: ಮತ್ತೆ ಬರುತ್ತಿದೆ ಫ್ಲಿಪ್​​ಕಾರ್ಟ್​​ ಬಿಗ್​ ಸೇಲ್

Flipkart announces Big Billion Days sale: ಫ್ಲಿಪ್‌ಕಾರ್ಟ್ ಇತ್ತೀಚೆಗೆ ಆ್ಯಪಲ್‌ನ ಐಫೋನ್ 12 ಸರಣಿಯ ಮೇಲೆ ಭಾರೀ ರಿಯಾಯಿತಿಗಳನ್ನು ನೀಡಿತು.

Flipkart Big Billion Days sale: ಶೇ.80 ರಷ್ಟು ಡಿಸ್ಕೌಂಟ್: ಮತ್ತೆ ಬರುತ್ತಿದೆ ಫ್ಲಿಪ್​​ಕಾರ್ಟ್​​ ಬಿಗ್​ ಸೇಲ್
Flipkart
TV9 Web
| Edited By: |

Updated on: Sep 14, 2021 | 8:42 PM

Share

ವಾಲ್ಮಾರ್ಟ್ ಒಡೆತನದ ಶಾಪಿಂಗ್ ವೆಬ್​ಸೈಟ್ ಫ್ಲಿಪ್‌ಕಾರ್ಟ್ (Flipkart) ತನ್ನ ವಾರ್ಷಿಕ ಬಿಗ್ ಬಿಲಿಯನ್ ಡೇಸ್ ಸೇಲ್ 2021 ಅನ್ನು (Flipkart annual Big Billion Days sale 2021) ಘೋಷಿಸಿದೆ. ಈ ಬಾರಿ ಕೂಡ ಹಲವು ಉತ್ಪನ್ನಗಳ ಮೇಲೆ ಭಾರೀ ರಿಯಾಯಿತಿ ನೀಡುವುದಾಗಿ ತಿಳಿಸಿರುವ ಫ್ಲಿಪ್​ಕಾರ್ಟ್​ ಶೀಘ್ರದಲ್ಲೇ ಬಿಗ್ ಬಿಲಿಯನ್ ಡೇಸ್ (Flipkart Big Billion Days sale) ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದೆ. ಅದರಂತೆ ಮುಂದಿನ ಬಿಗ್ ಬಿಲಿಯನ್ ಡೇಸ್ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ವಸ್ತುಗಳು, ಫ್ಯಾಶನ್ ಮತ್ತು ಗೃಹ ಉತ್ಪನ್ನಗಳ ಮೇಲೆ ಭಾರೀ ರಿಯಾಯಿತಿ ದೊರೆಯಲಿದೆ.

ಇನ್ನು ಫ್ಲಿಪ್‌ಕಾರ್ಟ್ ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್‌ನೊಂದಿಗೆ ಪಾವತಿ ಪಾಲುದಾರಿಕೆ ಹೊಂದಿದ್ದು, ಪೇಟಿಎಂ ವಾಲೆಟ್‌ನಂತಹ ಯುಪಿಐ ಸೇವೆಗಳೊಂದಿಗೆ ಕಾರ್ಡ್ ಕ್ಯಾಶ್‌ಬ್ಯಾಕ್ ಕೊಡುಗೆಗಳನ್ನು ನೀಡಲಿದೆ. ಈ ಮೂಲಕ ಡಿಸ್ಕೌಂಟ್ ಜೊತೆಗೆ ಪಾವತಿ ಕೊಡುಗೆಗಳನ್ನು ಕೂಡ ಫ್ಲಿಪ್​ಕಾರ್ಟ್​ ನೀಡಲಿದೆ.

ಫ್ಲಿಪ್‌ಕಾರ್ಟ್ ಇತ್ತೀಚೆಗೆ ಆ್ಯಪಲ್‌ನ ಐಫೋನ್ 12 ಸರಣಿಯ ಮೇಲೆ ಭಾರೀ ರಿಯಾಯಿತಿಗಳನ್ನು ನೀಡಿತು. ಇನ್ನು ಶೀಘ್ರದಲ್ಲೇ ಐಫೋನ್ 13 ಕೂಡ ಬಿಡುಗಡೆ ಆಗಲಿದೆ. ಅದರೊಂದಿಗೆ ವಿವೋ, ಒಪ್ಪೋ ಮತ್ತು ಸ್ಯಾಮ್‌ಸಂಗ್‌ನಂತಹ ಬ್ರ್ಯಾಂಡ್‌ಗಳಲ್ಲಿ ಇಂತಹ ಕೊಡುಗೆಗಳನ್ನು ನಿರೀಕ್ಷಿಸಬಹುದು.

ಇನ್ನು ಎಲೆಕ್ಟ್ರಾನಿಕ್ಸ್ ಮತ್ತು ಲ್ಯಾಪ್‌ಟಾಪ್‌ಗಳು, ಹೆಲ್ತ್‌ಕೇರ್ ಸಾಧನಗಳು, ಸ್ಮಾರ್ಟ್ ವಾಚ್‌ಗಳು ಮತ್ತು ಪವರ್ ಬ್ಯಾಂಕ್‌ಗಳಂತಹ ಪರಿಕರಗಳ ಮೇಲೆ ಶೇ. 80 ರಷ್ಟು ರಿಯಾಯಿತಿಗಳನ್ನು ಪಡೆಯಬಹುದು. ಟಿವಿ ಮತ್ತು ಇತರ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಧರಿಸಬಹುದಾದ ವಸ್ತುಗಳು 60 ರಿಂದ 80 ಪ್ರತಿಶತದಷ್ಟು ರಿಯಾಯಿತಿಯೊಂದಿಗೆ ಖರೀದಿಗೆ ಲಭ್ಯವಿರಲಿದೆ ಎಂದು ಫ್ಲಿಪ್​ಕಾರ್ಟ್​ ತಿಳಿಸಿದೆ.

ಮನೆ ಮತ್ತು ಕಿಚನ್ ವಿಭಾಗಗಳಲ್ಲಿ 99 ರೂ. ನಿಂದ ವಸ್ತುಗಳ ಮಾರಾಟ ಇರಲಿದ್ದು, ಮನೆಗಳನ್ನು ಅಂದಗೊಳಿಸುವ ಕಿಟ್‌ಗಳು, ಆಟಿಕೆಗಳು, ಪೀಠೋಪಕರಣಗಳು ಮತ್ತು ಹಾಸಿಗೆಗಳು ಶೇಕಡಾ 85 ರಷ್ಟು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ ಎಂದು ಫ್ಲಿಪ್​ಕಾರ್ಟ್ ತಿಳಿಸಿದೆ. ಅಂದರೆ ಫ್ಲಿಪ್‌ಕಾರ್ಟ್ ತನ್ನ ವಾರ್ಷಿಕ ಬಿಗ್ ಬಿಲಿಯನ್ ಡೇಸ್ ಸೇಲ್ 2021 ರಲ್ಲಿ ಬಹುತೇಕ ವಸ್ತುಗಳ ಮೇಲೆ ಶೇ. 60 ರಿಂದ 80 ರಷ್ಟು ರಿಯಾಯಿತಿ ನೀಡಲಿದ್ದು, ಈ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯಲು ಮುಂದಾಗಿದೆ.

ಇದನ್ನೂ ಓದಿ: 16 ಸಿಕ್ಸರ್, 4 ಫೋರ್: ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದ ಜಸ್ಕರನ್

ಇದನ್ನೂ ಓದಿ: Rashid Khan: ಟಿ20 ವಿಶ್ವಕಪ್​ಗೆ ಅಫ್ಘಾನ್ ತಂಡ ಪ್ರಕಟ: ನಾಯಕತ್ವಕ್ಕೆ ರಶೀದ್ ಖಾನ್ ರಾಜೀನಾಮೆ

ಇದನ್ನೂ ಓದಿ: Crime News: ಯುವತಿಗೆ ಡ್ರಾಪ್ ಕೊಡಲು ಬೈಕ್ ನಿಲ್ಲಿಸಿದ ಯುವಕ: ಆಮೇಲೆ ಆಗಿದ್ದೇ ಬೇರೆ!

ಇದನ್ನೂ ಓದಿ: Crime News: ತಾಯಿಗೆ ಅನೈತಿಕ ಸಂಬಂಧ: ಅದನ್ನೇ ಬಂಡವಾಳ ಮಾಡಿಕೊಂಡ ಮಗಳು

(Flipkart announces Big Billion Days sale)

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!