Realme GT Neo 2: ಹೊಸ ಫೋನ್ ಬೇಕಿದ್ದರೆ ಇದನ್ನೇ ಖರೀದಿಸಿ: ರಿಯಲ್‌ಮಿ GT ನಿಯೋ 2 ಮೇಲೆ ಆಕರ್ಷಕ ಡಿಸ್ಕೌಂಟ್
Flipkart Big Bachat Dhamaal sale: ಫ್ಲಿಪ್‌ಕಾರ್ಟ್ ಬಿಗ್ ಬಚತ್ ಧಮಾಲ್ ಸೇಲ್‌ನಲ್ಲಿ ರಿಯಲ್‌ಮಿ GT ನಿಯೋ 2 ಫೋನ್‌ಗೆ ಭರ್ಜರಿ ರಿಯಾಯಿತಿಯನ್ನು ನೀಡಲಾಗಿದೆ. ಹಾಗಾದ್ರೆ ಈ ಫೋನ್ ಈಗ ಎಷ್ಟು ರೂಪಾಯಿಗೆ ಲಭ್ಯವಿದೆ ಎಂಬುದನ್ನು ನೋಡೋಣ.
ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ನಲ್ಲಿ (Flipkart) ಸ್ಮಾರ್ಟ್‌ಫೋನ್‌ಗಳಿಗೆ (Smartphone) ಭಾರಿ ಡಿಸ್ಕೌಂಟ್ ಮೇಳ ಹಮ್ಮಿಕೊಳ್ಳಲಾಗಿದೆ. ಅದುವೇ ಫ್ಲಿಪ್‌ಕಾರ್ಟ್ ಬಿಗ್ ಬಚತ್ ಧಮಾಲ್ ಸೇಲ್ (Flipkart Big Bachat Dhamaal sale). ಜನವರಿ 7ಕ್ಕೆ ಆರಂಭವಾಗಿರುವ ಆಫರ್‌ಗಳ ಮೇಳವು ಇಂದು ಜನವರಿ 9 ರಂದು ಕೊನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಭಾರಿ ಡಿಸ್ಕೌಂಟ್, ಎಕ್ಸ್‌ಚೇಂಜ್ ಆಫರ್, ನೊ-ಕಾಸ್ಟ್ ಇಎಂಐ ಮುಂತಾದ ಸೌಲಭ್ಯಗಳು ದೊರೆಯುತ್ತಿದೆ. ಈ ಸೇಲ್‌ನಲ್ಲಿ ಆಯ್ದ ಕೆಲವು ರಿಯಲ್ ಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ರಿಯಾಯಿತಿ ಘೋಷಿಸಿದೆ. ಈ ಪೈಕಿ ರಿಯಲ್ ಮಿ ಸಂಸ್ಥೆಯು ಕಳೆದ ವರ್ಷ ಬಿಡುಗಡೆ ಮಾಡಿದ ಪ್ರೀಮಿಯಂ ಫೋನ್ ರಿಯಲ್‌ಮಿ ಜಿಟಿ ನಿಯೋ 2 (Realme GT Neo 2) ಸ್ಮಾರ್ಟ್‌ಫೋನ್ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಹಾಗಾದ್ರೆ ಈ ಫೋನ್ ಈಗ ಎಷ್ಟು ರೂಪಾಯಿಗೆ ಲಭ್ಯವಿದೆ ಎಂಬುದನ್ನು ನೋಡೋಣ.
ಫ್ಲಿಪ್‌ಕಾರ್ಟ್ ಬಿಗ್ ಬಚತ್ ಧಮಾಲ್ ಸೇಲ್‌ನಲ್ಲಿ ರಿಯಲ್‌ಮಿ GT ನಿಯೋ 2 ಫೋನ್‌ಗೆ 3,000 ರೂ. ಗಳ ರಿಯಾಯಿತಿಯನ್ನು ನೀಡಲಾಗಿದೆ. ಇದರ 8GB RAM ಮತ್ತು 128GB ಇಂಟರ್ನಲ್ ಸ್ಟೋರೇಜ್‌ನ ವೇರಿಯಂಟ್ ಬಿಡುಗಡೆಯ ಬೆಲೆ 31,999 ರೂ. ಆಗಿದ್ದು, 28,999ರೂ. ಗಳಿಗೆ ಈಗ ಸಿಗುತ್ತಿದೆ. ಅಂತೆಯೆ 12GB RAM ಮತ್ತು 256GB ಸಂಗ್ರಹಣೆಯ ರೂಪಾಂತರದ ಬೆಲೆ 35,999 ರೂ. ಆಗಿದ್ದು, 32,999 ರೂ. ಗೆ ಸೇಲ್ ಕಾಣುತ್ತಿದೆ. ಈ ಫೋನ್ ಖರೀದಿಸಲು ಒದೊಂದು ಅತ್ಯುತ್ತಮ ಆಯ್ಕೆಯಾಗಿದೆ.
ರಿಯಲ್ ಮಿ ಜಿಟಿ ನಿಯೋ 2 ಸ್ಮಾರ್ಟ್‌ಫೋನ್ 1080 × 2400 ಪಿಕ್ಸೆಲ್ ರೆಸಲ್ಯೂಶನ್ ಪಡೆದಿರುವ 6.62-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು ಡಿಸಿ ಡಿಮ್ಮಿಂಗ್‌ನೊಂದಿಗೆ ಬರುತ್ತದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 65W ಸೂಪರ್ ಡಾರ್ಟ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 36 ನಿಮಿಷಗಳಲ್ಲಿ ಫೋನ್ ಅನ್ನು 0 ದಿಂದ 100% ಫುಲ್ ಚಾರ್ಜ್ ಮಾಡುತ್ತದೆ ಎಂದು ಹೇಳಲಾಗಿದೆ.
Best Smartphone: ಜನವರಿಯಲ್ಲಿ 25,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್ ಸ್ಮಾರ್ಟ್ಫೋನ್ಗಳು ಇಲ್ಲಿವೆ ನೋಡಿ
Published On - 3:24 pm, Sun, 9 January 22