AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲಿಪ್‌ಕಾರ್ಟ್​ನಲ್ಲಿ ಶುರುವಾಗಿದೆ ಬಿಗ್ ಬಚತ್ ಧಮಾಲ್ ಸೇಲ್: ಶೇ. 80 ರಷ್ಟು ಡಿಸ್ಕೌಂಟ್

Flipkart Big Bachat Dhamaal Sale 2023: ಫ್ಲಿಪ್‌ಕಾರ್ಟ್ ಬಿಗ್ ಬಚತ್ ಧಮಾಲ್ ಸೇಲ್​ನಲ್ಲಿ ಫ್ಯಾಷನ್, ಮೇಕಪ್ ಐಟಮ್, ಮನೆ-ಕಿಚನ್, ಅಲಂಕಾರ ಮತ್ತು ಪೀಠೋಪಕರಣಗಳು, ಮೊಬೈಲ್‌ಗಳು, ಎಲೆಕ್ಟ್ರಾನಿಕ್ಸ್, ಟಿವಿ ಉಪಕರಣಗಳ ಮೇಲೆ ದೊಡ್ಡ ರಿಯಾಯಿತಿಗಳನ್ನು ಘೋಷಿಸಲಾಗಿದೆ. ಈ ಮಾರಾಟದಲ್ಲಿ, ಗ್ರಾಹಕರು 1000 ಕ್ಕೂ ಹೆಚ್ಚು ಬ್ರಾಂಡ್‌ಗಳ ಪ್ರಾಡಕ್ಟ್ ಮೇಲೆ ರಿಯಾಯಿತಿಯನ್ನು ಆನಂದಿಸಬಹುದು.

ಫ್ಲಿಪ್‌ಕಾರ್ಟ್​ನಲ್ಲಿ ಶುರುವಾಗಿದೆ ಬಿಗ್ ಬಚತ್ ಧಮಾಲ್ ಸೇಲ್: ಶೇ. 80 ರಷ್ಟು ಡಿಸ್ಕೌಂಟ್
Flipkart Big Bachat Dhamaal Sale
Vinay Bhat
|

Updated on: Sep 02, 2023 | 1:19 PM

Share

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ತನ್ನ ಬಳಕೆದಾರರಿಗಾಗಿ ಒಂದಲ್ಲ ಒಂದು ಮೇಳವನ್ನು ಹಮ್ಮಿಕೊಳ್ಳುತ್ತಲೇ ಇರುತ್ತದೆ. ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಕರ್ಷಕ ಸೇಲ್ ನಡೆಸಿತ್ತು. ಇದೀಗ ದಿಢೀರ್ ಆಗಿ ಬಿಗ್ ಬಚತ್ ಧಮಾಲ್ ಮೇಳವನ್ನು (Flipkart Big Bachat Dhamaal Sale) ಆರಂಭಿಸಿದೆ. ಈಗಾಗಲೇ ಈ ಸೇಲ್ ಲೈವ್ ಆಗಿದ್ದು, ಸೆಪ್ಟೆಂಬರ್ 3 ರವರೆಗೆ ಚಾಲ್ತಿಯಲ್ಲಿರಲಿದೆ. ಮಾರಾಟದ ಸಮಯದಲ್ಲಿ, ವಿವಿಧ ವಿಭಾಗಗಳ ಅನೇಕ ಉತ್ಪನ್ನಗಳ ಮೇಲೆ ಭಾರಿ ರಿಯಾಯಿತಿಗಳನ್ನು ಘೋಷಿಸಲಾಗಿದೆ. ಕೆಲವು ಪ್ರಾಡಕ್ಟ್ ಮೇಲೆ ಶೇಕಡಾ 80 ರಷ್ಟು ಡಿಸ್ಕೌಂಟ್ ನೀಡಲಾಗಿದೆ.

ಫ್ಲಿಪ್‌ಕಾರ್ಟ್ ಬಿಗ್ ಬಚತ್ ಧಮಾಲ್ ಸೇಲ್​ನಲ್ಲಿ ಫ್ಯಾಷನ್, ಮೇಕಪ್ ಐಟಮ್, ಮನೆ-ಕಿಚನ್, ಅಲಂಕಾರ ಮತ್ತು ಪೀಠೋಪಕರಣಗಳು, ಮೊಬೈಲ್‌ಗಳು, ಎಲೆಕ್ಟ್ರಾನಿಕ್ಸ್, ಟಿವಿ ಉಪಕರಣಗಳ ಮೇಲೆ ದೊಡ್ಡ ರಿಯಾಯಿತಿಗಳನ್ನು ಘೋಷಿಸಲಾಗಿದೆ. ಈ ಮಾರಾಟದಲ್ಲಿ, ಗ್ರಾಹಕರು 1000 ಕ್ಕೂ ಹೆಚ್ಚು ಬ್ರಾಂಡ್‌ಗಳ ಪ್ರಾಡಕ್ಟ್ ಮೇಲೆ ರಿಯಾಯಿತಿಯನ್ನು ಆನಂದಿಸಬಹುದು. ಇದರ ಜೊತೆಗೆ ಆಯ್ದ ಬ್ಯಾಂಕ್ ಕಾರ್ಡ್‌ಗಳೊಂದಿಗೆ ಹೆಚ್ಚುವರಿ ಡಿಸ್ಕೌಂಟ್ ಕೂಡ ಲಭ್ಯವಿವೆ.

500 ರೂ. ಗಿಂತ ಕಡಿಮೆ ಬೆಲೆಗೆ ಹಲವು ವಸ್ತುಗಳು:

ಮಾರಾಟದ ಸಮಯದಲ್ಲಿ, ಗ್ರಾಹಕರು ತಮ್ಮ ಬಜೆಟ್‌ಗೆ ಅನುಗುಣವಾಗಿ ಶಾಪಿಂಗ್ ಮಾಡಲು ಅವಕಾಶವನ್ನು ನೀಡಲಾಗಿದೆ. ಇದಕ್ಕಾಗಿ ವಿಶೇಷವಾದ ಮೈಕ್ರೋಸೈಟ್ ಸ್ಥಾಪಿಸಲಾಗಿದ್ದು ವಿವಿಧ ಬೆಲೆ ಶ್ರೇಣಿಗಳ ಪ್ರಕಾರ ಉತ್ಪನ್ನಗಳನ್ನು ಫಿಲ್ಟರ್ ಮಾಡುವ ಆಯ್ಕೆಯನ್ನು ಹೊಂದಿದೆ. 499 ರೂ., 699ರೂ., 799 ರೂ. ಮತ್ತು 999 ರೂ. ಗಿಂತ ಕಡಿಮೆ ಬೆಲೆಗಳಿಗೆ ಫಿಲ್ಟರ್‌ಗಳಿವೆ. ಈ ಬೆಲೆ ಶ್ರೇಣಿಯಲ್ಲಿ, ಗೃಹಾಲಂಕಾರದಿಂದ ಡ್ರೆಸ್ ಮತ್ತು ಪರಿಕರಗಳವರೆಗೆ ಅನೇಕ ಉತ್ಪನ್ನಗಳನ್ನು ಖರೀದಿಸಲು ಅವಕಾಶವಿದೆ. ಇದರ ಜೊತೆಗೆ ಬ್ಯಾಕ್‌ಪ್ಯಾಕ್ ಮತ್ತು ಶೂಗಳು ಸಹ ನಿಮ್ಮದಾಗಿಸಬಹುದು.

ಬಹುನಿರೀಕ್ಷಿತ ಐಕ್ಯೂ Z8, ಐಕ್ಯೂ Z8x ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?, ಏನಿದೆ ಫೀಚರ್ಸ್

ಫ್ಲಿಪ್​ಕಾರ್ಟ್​ನ ಈ ಸೇಲ್​ನಲ್ಲಿ ಬಹತೇಕ ಎಲ್ಲ ವಿಭಾಗಗಳಲ್ಲಿ ಭಾರಿ ರಿಯಾಯಿತಿಗಳನ್ನು ನೀಡಲಾಗಿದೆ. ಗೃಹೋಪಯೋಗಿ ವಸ್ತುಗಳ ಮೇಲೆ ಶೇ. 70, ವಾಷಿಂಗ್ ಮೆಷಿನ್ ಮೇಲೆ ಶೇ. 60, ಪರ್ಸನಲ್ ಕೇರ್ ಉತ್ಪನ್ನಗಳ ಮೇಲೆ ಶೇ. 60, ಬಟ್ಟೆ ಮೇಲೆ ಶೇ. 60ರಿಂದ 70 ಮತ್ತು ದಿನಸಿ ವಸ್ತುಗಳ ಮೇಲೆ ಶೇ. 70ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅದೇ ಸಮಯದಲ್ಲಿ, ಕ್ರೀಡಾ ಫಿಟ್‌ನೆಸ್‌ನಲ್ಲಿ ಶೇಕಡಾ 80 ರಷ್ಟು ರಿಯಾಯಿತಿ ಲಭ್ಯವಿದೆ. ಸ್ಮಾರ್ಟ್ ಟಿವಿಗಳು, ಮಾನಿಟರ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳ ಮೇಲೆ ಶೇಕಡಾ 75 ರಷ್ಟು ಡಿಸ್ಕೌಂಟ್ ಸಹ ಪಡೆಯಬಹುದು. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಕೆದಾರರು ಕ್ಯಾಶ್‌ಬ್ಯಾಕ್ ಪ್ರಯೋಜನವನ್ನು ಕೂಡ ಪಡೆಯುತ್ತಾರೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
9ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಫಾಸ್ಟ್‌ಟ್ರ್ಯಾಕ್‌ ನೇಮಕಾತಿ: ಸರ್ಕಾರಿ ಹುದ್ದೆಗಳ ಭರ್ತಿಗೆ ಹೊಸ ದಾರಿ
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!
ಹಾಸನಕ್ಕೆ ಕಾಲಿಟ್ಟ ‘ರಾಪಿಡೋ’; ಆಟೋ ಚಾಲಕರ ಆಕ್ರೋಶ, ಬೈಕ್ ಸವಾರನ ಕಣ್ಣೀರು!