AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart Big Diwali Sale 2024: ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್ ಲೈವ್: ಈ 10 ಸ್ಮಾರ್ಟ್‌ಫೋನ್‌ಗಳ ಮೇಲೆ ಬಂಪರ್ ಡಿಸ್ಕೌಂಟ್

ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಮಾರಾಟವು ಅಕ್ಟೋಬರ್ 21 ರಿಂದ ಅಕ್ಟೋಬರ್ 31 ರವರೆಗೆ ನಡೆಯುತ್ತದೆ. ಈ ಮಾರಾಟದ ಸಮಯದಲ್ಲಿ, ನೀವು ಸ್ಮಾರ್ಟ್‌ಫೋನ್‌ಗಳ ಮೇಲೆ ಮಾತ್ರವಲ್ಲದೆ ಸ್ಮಾರ್ಟ್ ಟಿವಿಗಳು, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಪರಿಕರಗಳಂತಹ ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಮೇಲೆ ರಿಯಾಯಿತಿಗಳನ್ನು ಪಡೆಯುತ್ತೀರಿ.

Flipkart Big Diwali Sale 2024: ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್ ಲೈವ್: ಈ 10 ಸ್ಮಾರ್ಟ್‌ಫೋನ್‌ಗಳ ಮೇಲೆ ಬಂಪರ್ ಡಿಸ್ಕೌಂಟ್
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 21, 2024 | 5:54 PM

Share

ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್ ಇಂದಿನಿಂದ (ಅಕ್ಟೋಬರ್ 21) ಪ್ರಾರಂಭವಾಗಿದೆ. ಫ್ಲಿಪ್​ಕಾರ್ಟ್ ಪ್ಲಸ್ ಸದಸ್ಯರಿಗೆ ಆರಂಭಿಕ ಪ್ರವೇಶವು ಅಕ್ಟೋಬರ್ 20 ರಂದು ಪ್ರಾರಂಭವಾಗಿದೆ. ಈ ಮಾರಾಟವು ಇತ್ತೀಚಿನ ಬಿಗ್ ಬಿಲಿಯನ್ ಡೇಸ್ ಸೇಲ್‌ನಂತೆಯೇ ಸ್ಮಾರ್ಟ್‌ಫೋನ್‌ಗಳ ಮೇಲೆ ಅದ್ಭುತ ಕೊಡುಗೆಗಳನ್ನು ನೀಡುತ್ತಿದೆ. ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪಡೆದುಕೊಳ್ಳಲು ಇದು ಅಂತಿಮ ಅವಕಾಶ ಎಂದು ಫ್ಲಿಪ್‌ಕಾರ್ಟ್ ಹೇಳಿಕೊಂಡಿದೆ.

ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಮಾರಾಟವು ಅಕ್ಟೋಬರ್ 21 ರಿಂದ ಅಕ್ಟೋಬರ್ 31 ರವರೆಗೆ ನಡೆಯುತ್ತದೆ. ಈ ಮಾರಾಟದ ಸಮಯದಲ್ಲಿ, ನೀವು ಸ್ಮಾರ್ಟ್‌ಫೋನ್‌ಗಳ ಮೇಲೆ ಮಾತ್ರವಲ್ಲದೆ ಸ್ಮಾರ್ಟ್ ಟಿವಿಗಳು, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಪರಿಕರಗಳಂತಹ ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಮೇಲೆ ರಿಯಾಯಿತಿಗಳನ್ನು ಪಡೆಯುತ್ತೀರಿ.

ನೀವು SBI ಕಾರ್ಡ್‌ನೊಂದಿಗೆ ಶಾಪಿಂಗ್ ಮಾಡಿದರೆ, 10 ಪ್ರತಿಶತದಷ್ಟು ಕ್ಯಾಶ್‌ಬ್ಯಾಕ್ ಅಥವಾ ರಿಯಾಯಿತಿಗಳನ್ನು ಆನಂದಿಸಬಹುದು. ಜೊತೆಗೆ, ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಸುವುದರಿಂದ ಯಾವುದೇ ಖರೀದಿಯ ಮೇಲೆ ಹೆಚ್ಚುವರಿ 5 ಪ್ರತಿಶತ ಅನಿಯಮಿತ ಕ್ಯಾಶ್‌ಬ್ಯಾಕ್ ಆಫರ್ ನೀಡಲಾಗಿದೆ.

ಸ್ಮಾರ್ಟ್‌ಫೋನ್‌ಗಳ ಆಫರ್:

ಉತ್ತಮ ಬೆಲೆಯಲ್ಲಿ ಲಭ್ಯವಿರುವ ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಇಲ್ಲಿವೆ:

ಮೊಟೊರೊಲ G85 5G ಆರಂಭಿಕ ಬೆಲೆ ರೂ. 15,999 ಕ್ಕೆ ಲಭ್ಯವಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ S23 5G ರೂ. 37,999 ರಿಂದ ಲಭ್ಯವಿದೆ.

ರಿಯಲ್ ಮಿ 12x 5G ಬೆಲೆ ರೂ. 10,999, ಜೊತೆಗೆ ರೂ. 7,000 ರಿಯಾಯಿತಿ.

ಒಪ್ಪೋ K12x 5G ಬೆಲೆ ರೂ. 10,999 ಕ್ಕೆ, ರೂ. 6,000 ರಿಯಾಯಿತಿಯೊಂದಿಗೆ.

ಸಿಎಮ್​ಎಫ್ ಫೋನ್ 1 ರೂ. 12,499 ಕ್ಕೆ ಲಭ್ಯವಿದೆ, ರೂ 7,500 ಉಳಿತಾಯ ಮಾಡಬಹುದು.

ಪೊಕೊ F6 5G ಆರಂಭಿಕ ಬೆಲೆ ರೂ 22,999 ಕ್ಕೆ ಲಭ್ಯವಿದೆ, ಹಿಂದಿನ ಬೆಲೆ ರೂ 33,999 ಆಗಿತ್ತು.

ವಿವೋ T3 5G ಬೆಲೆ 15,999 ರೂ. ಗಳಾಗಿದ್ದು, 7,000 ರೂ. ಡಿಸ್ಕೌಂಟ್ ನೀಡಲಾಗಿದೆ.

ಸ್ಯಾಮ್​ಸಂಗ್ ಗ್ಯಾಲಕ್ಸಿ S23 FE ರೂ. 28,999 ರಿಂದ ಪ್ರಾರಂಭವಾಗುತ್ತದೆ.

ಗೂಗಲ್ ಪಿಕ್ಸೆಲ್ 8 ಬೆಲೆ 36,499 ರೂ. ಗಳು, ಮೂಲತಃ 75,999 ರಿಂದ ಪ್ರಾರಂಭವಾಗುತ್ತದೆ.

ರಿಯಲ್ ಮಿ P2 Pro 5G ರೂ. 18,999 ಕ್ಕೆ ಲಭ್ಯವಿದೆ, ರೂ. 7,000 ರಿಯಾಯಿತಿ ಇದೆ.

ಏತನ್ಮಧ್ಯೆ, ಅಮೆಜಾನ್ ಕೂಡ ಸೆಪ್ಟೆಂಬರ್ 27 ರಿಂದ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಅನ್ನು ದೀಪಾವಳಿಯ ವಿಶೇಷ ಮಾರಾಟವನ್ನು ಆಯೋಜಿಸುತ್ತಿದೆ. ಈ ಸೇಲ್​ನಲ್ಲಿ ಸ್ಯಾಮ್​ಸಂಗ್, ರಿಯಲ್ ಮಿ, ಒನ್​ಪ್ಲಸ್, ಐಕ್ಯೂ, ಮತ್ತು ಆ್ಯಪಲ್ ಸೇರಿದಂತೆ ವಿವಿಧ ಬ್ರಾಂಡ್‌ಗಳ ಸ್ಮಾರ್ಟ್‌ಫೋನ್‌ಗಳ ಮೇಲೆ ಗಣನೀಯ ರಿಯಾಯಿತಿಗಳನ್ನು ನೀಡಲಾಗಿದೆ. ಈ ಕೊಡುಗೆಗಳ ಜೊತೆಗೆ, ಗ್ರಾಹಕರು 10 ಪ್ರತಿಶತದವರೆಗೆ ಬ್ಯಾಂಕ್ ರಿಯಾಯಿತಿಗಳನ್ನು ಸಹ ಆನಂದಿಸಬಹುದು.

ಮತ್ತಷ್ಟು ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ