Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart Big Saving Days Sale: ಇಂದು ಕೊನೇ ದಿನ: ದುಬಾರಿ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಕಡಿಮೆಗೆ ಖರೀದಿಸಿ

ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ (Flipkart Big Saving Days Sale) ಹೆಸರಿನಲ್ಲಿ ಮಾರಾಟ ಸುಗ್ಗಿ ಭರ್ಜರಿ ನಡೆಯುತ್ತಿದ್ದು ಇಂದು ಕೊನೆಯ ದಿನವಾಗಿದೆ. ಮಾರ್ಚ್ 15 ರಂದು ಈ ಮೇಳ ಕೊನೆಯಾಗಲಿದೆ.

Flipkart Big Saving Days Sale: ಇಂದು ಕೊನೇ ದಿನ: ದುಬಾರಿ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಕಡಿಮೆಗೆ ಖರೀದಿಸಿ
flipkart big saving days sale
Follow us
Vinay Bhat
|

Updated on: Mar 15, 2023 | 6:55 AM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ (Flipkart)​ ಮೊನ್ನೆಯಷ್ಟೆ ಹೋಳಿ ಹಬ್ಬದ ಪ್ರಯುಕ್ತ ಸೇಲ್ ನಡೆಸಿ ಆಕರ್ಷಕ ಕೊಡುಗೆಗಳನ್ನು ನೀಡಿತ್ತು. ಇದೀಗ ಮತ್ತೊಂದು ಹೊಸ ಮೇಳ ಫ್ಲಿಪ್​ಕಾರ್ಟ್ ನಡೆಯುತ್ತಿದೆ. ಬಿಗ್ ಸೇವಿಂಗ್ ಡೇಸ್ (Flipkart Big Saving Days Sale) ಹೆಸರಿನಲ್ಲಿ ಮಾರಾಟ ಸುಗ್ಗಿ ಭರ್ಜರಿ ನಡೆಯುತ್ತಿದ್ದು ಇಂದು ಕೊನೆಯ ದಿನವಾಗಿದೆ. ಮಾರ್ಚ್ 15 ರಂದು ಈ ಮೇಳ ಕೊನೆಯಾಗಲಿದೆ. ಯುಗಾದಿ ಹಬ್ಬದ ಸಂಭ್ರಮಕ್ಕೂ ಮುನ್ನ ಫ್ಲಿಪ್‌ಕಾರ್ಟ್​ ಈ ಮೇಳ ನಡೆಸುತ್ತಿದ್ದು, ಮುಖ್ಯವಾಗಿ ಸ್ಮಾರ್ಟ್​ಫೋನ್​ಗಳ ಮೇಲೆ ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟವಾಗುತ್ತಿದೆ.

ಫ್ಲಿಪ್​ಕಾರ್ಟ್​ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್‌, ಲ್ಯಾಪ್‌ಟಾಪ್‌, ಸ್ಮಾರ್ಟ್‌ಟಿವಿ ಸೇರಿದಂತೆ ಹಲವು ಡಿವೈಸ್‌ಗಳ ಮೇಲೆ ಆಕರ್ಷಕ ಡಿಸ್ಕೌಂಟ್‌ ಪಡೆದುಕೊಳ್ಳಬಹುದು. ಬಳಕೆದಾರರು ICICI ಬ್ಯಾಂಕ್‌ನ ಕ್ರೆಡಿಟ್ ಕಾರ್ಡ್‌ನಲ್ಲಿ 10 ಪ್ರತಿಶತ ತ್ವರಿತ ರಿಯಾಯಿತಿ ಮತ್ತು EMI ಸೌಲಭ್ಯದ ಲಾಭವನ್ನು ನೀಡಲಾಗಿದೆ. ಮುಖ್ಯವಾಗಿ ಕಳೆದ ವರ್ಷ ಅನಾವರಣಗೊಂಡ ಆ್ಯಪಲ್ ಐಫೋನ್ 14 128GB ಮಾದರಿಯು ಶೇ. 17 ರಿಯಾಯಿತಿಯೊಂದಿಗೆ ಲಭ್ಯವಿದೆ. ಬಳಕೆದಾರರು ಈ ಫೋನ್ ಅನ್ನು ಸುಮಾರು 65,999 ರೂ. ಗೆ ಖರೀದಿಸಬಹುದು. ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದ್ದು 20,000 ರೂ. ವರೆಗೆ ಉಳಿತಾಯವಾಗಲಿದೆ. ಕಂಪನಿಯು ಈ ಫೋನ್ ಮೇಲೆ ಒಂದು ವರ್ಷದ ವಾರಂಟಿ ಮತ್ತು ಇನ್-ಬಾಕ್ಸ್ ಬಿಡಿಭಾಗಗಳ ಮೇಲೆ 6 ತಿಂಗಳ ವಾರಂಟಿಯನ್ನು ನೀಡುತ್ತಿದೆ.

IQoo Z7i: ಸದ್ದಿಲ್ಲದೆ ಮಾರುಕಟ್ಟೆಗೆ ದಿಢೀರ್ ಹೊಸ ಸ್ಮಾರ್ಟ್​ಫೋನ್ ಪರಿಚಯಿಸಿದ ಐಕ್ಯೂ: ಪ್ರೊಸೆಸರ್ ಕಂಡು ದಂಗಾದ ಟೆಕ್ ಪ್ರಿಯರು

ಇದನ್ನೂ ಓದಿ
Image
Poco X5 5G: 22 ನಿಮಿಷಗಳಲ್ಲಿ ಚಾರ್ಜ್ ಫುಲ್: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ X5 5G ಸ್ಮಾರ್ಟ್​ಫೋನ್ ಬಿಡುಗಡೆ
Image
Nokia C12: ₹5,999ಕ್ಕೆ ಹೊಸ ನೋಕಿಯಾ ಸ್ಮಾರ್ಟ್​ಫೋನ್ ಬಿಡುಗಡೆ
Image
Yellow iPhone 14: ಬಂಪರ್ ಆಫರ್​ನೊಂದಿಗೆ ಐಫೋನ್ 14, ಐಫೋನ್ 14 ಪ್ಲಸ್ ಹಳದಿ ಬಣ್ಣದಲ್ಲಿ ಬಿಡುಗಡೆ: ಬೆಲೆ ಎಷ್ಟು?
Image
Realme C33 2023: ಭಾರತದಲ್ಲಿ ಊಹಿಸಲಾಗದ ಬೆಲೆಗೆ ರಿಯಲ್ ಮಿಯಿಂದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

ಇನ್ನು ಕಳೆದ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿ ಹೊಸ ಅಲೆಯನ್ನೇ ಎಬ್ಬಿಸಿದ್ದ ನಥಿಂಗ್ ಫೋನ್ 1 ಕೂಡ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ಡಿಸ್ಕೌಂಟ್‌ನಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ನೀವು 28,499 ರೂ. ಬೆಲೆಯಲ್ಲಿ ಖರೀದಿಸಬಹುದು. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಈ ಸೇಲ್​ನಲ್ಲಿ ಪ್ಲಸ್ ಅಕೌಂಟ್ ಹೊಂದಿರುವ ಗ್ರಾಹಕರಿಗೆ ಉಚಿತ ಡೆಲಿವರಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ. ರೆಡ್ಮಿ ನೋಟ್ 12 ಪ್ರೋ+, ಗೂಗಲ್ ಪಿಕ್ಸೆಲ್ 7, ಮೊದಲಾದ ಸ್ಮಾರ್ಟ್​ಫೋನ್​ಗಳೂ ಕೂಡ ಭಾರೀ ರಿಯಾಯಿತಿಯಲ್ಲಿ ಫ್ಲಿಪ್​ಕಾರ್ಟ್​ನಲ್ಲಿ ಲಭ್ಯ ಇರಲಿವೆ. 60 ಸಾವಿರ ರೂ ಬೆಲೆಯ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್​​ಫೋನ್ ಫೆಸ್ಟಿವ್ ಸೇಲ್ ಆಫರ್​ನಲ್ಲಿ ಬ್ಯಾಂಕ್ ಆಫರ್ ಮೂಲಕ 50 ಸಾವಿರ ರೂಗಿಂತ ಅಗ್ಗದ ಬೆಲೆಗೆ ಖರೀದಿಸಬಹುದು.

ಫ್ಲಿಪ್‌ಕಾರ್ಟ್‌ನ ಟಾಪ್ ಡೀಲ್‌ಗಳು:

  • ಲೆನೋವಾ Tabs ಅನ್ನು 7,999 ರೂ. ಗೆ ಖರೀದಿಸುವ ಅವಕಾಶವಿದೆ.
  • ಸಂಗೀತ ಉಪಕರಣಗಳು ಇತ್ಯಾದಿಗಳ ಮೇಲೆ ಶೇಕಡಾ 80 ರಷ್ಟು ರಿಯಾಯಿತಿ ಲಭ್ಯವಿರುತ್ತದೆ.
  • ಏರ್ ಕೂಲರ್‌ಗಳ ಮೇಲೆ ಶೇಕಡಾ 45 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.
  • ಕಿಚನ್ ಎಲೆಕ್ಟ್ರಾನಿಕ್ಸ್ ಮೇಲೆ ಶೇ. 60 ವರೆಗೆ ರಿಯಾಯಿತಿ.
  • ಕೀಬೋರ್ಡ್ ಖರೀದಿಯಲ್ಲಿ ಶೇಕಡಾ 15 ರಷ್ಟು ಉಳಿತಾಯವಾಗಲಿದೆ.
  • ಫ್ಲಿಪ್‌ಕಾರ್ಟ್ ಮಾರಾಟದಲ್ಲಿ ನಥಿಂಗ್ ಫೋನ್ (1) ಕೇವಲ 28,499 ರೂ. ಗೆ ಲಭ್ಯವಿರುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ