AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್: ಈ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್

POCO Mobiles: ಫ್ಲಿಪ್​ಕಾರ್ಟ್​ ಬಿಗ್‌ ಸೇವಿಂಗ್‌ ಡೇಸ್‌ (Flipkart Big Saving Days sale) ಸೇಲ್​ಗೆ ಎಲ್ಲ ತಯಾರಿ ಮಾಡಿಕೊಂಡಿದೆ. ಇದೇ ಡಿಸೆಂಬರ್ 16 ರಂದು ಈ ಬಹುನಿರೀಕ್ಷಿತ ಸೇಲ್ ಲೈವ್ ಆಗಲಿದ್ದು, ಡಿಸೆಂಬರ್ 21 ರವರೆಗೆ ನಡೆಯಲಿದೆ.

Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್: ಈ ಸ್ಮಾರ್ಟ್​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್
Flipkart and Smartphones
TV9 Web
| Edited By: |

Updated on:Dec 13, 2022 | 2:44 PM

Share

ಪ್ರಸಿದ್ಧ ಇ ಕಾಮರ್ಸ್​ ತಾಣಗಳಲ್ಲಿ ಭರ್ಜರಿ ಮೇಳಗಳು ಆರಂಭವಾಗುತ್ತಿದೆ. ಅಮೇಜಾನ್ (Amazon) ಸದ್ಯದಲ್ಲೇ ಹೊಸ ಸೇಲ್ ಬಗ್ಗೆ ಘೋಷಣೆ ಮಾಡಲಿದ್ದರೆ ಇತ್ತ ಫ್ಲಿಪ್​ಕಾರ್ಟ್​ ಬಿಗ್‌ ಸೇವಿಂಗ್‌ ಡೇಸ್‌ (Flipkart Big Saving Days sale) ಸೇಲ್​ಗೆ ಎಲ್ಲ ತಯಾರಿ ಮಾಡಿಕೊಂಡಿದೆ. ಇದೇ ಡಿಸೆಂಬರ್ 16 ರಂದು ಈ ಬಹುನಿರೀಕ್ಷಿತ ಸೇಲ್ ಲೈವ್ ಆಗಲಿದ್ದು, ಡಿಸೆಂಬರ್ 21 ರವರೆಗೆ ನಡೆಯಲಿದೆ. ಮಾರಾಟದ ಸಮಯದಲ್ಲಿ, ಖರೀದಿದಾರರಿಗೆ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನ ಉತ್ಪನ್ನಗಳ ಮೇಲೆ ಬಿಗ್‌ ಆಫರ್‌ಗಳನ್ನು ನೀಡಲಾಗಿದೆ. ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆಯಲ್ಲಿದ್ದರೆ ಇದುವೇ ಬೆಸ್ಟ್​ ಟೈಮ್ ಎನ್ನಬಹುದು. ಯಾಕಂದ್ರೆ ಈ ಸೇಲ್​ನಲ್ಲಿ ಮೊಬೈಲ್​ಗಳ ಮೇಲೆ ಸೇರಿದಂತೆ ಹೆಚ್ಚುವರಿಯಾಗಿ ಹಲವಾರು ಉತ್ಪನ್ನಗಳ ಮೇಲೆ ತ್ವರಿತ ರಿಯಾಯಿತಿಗಳನ್ನು ಒದಗಿಸಲು ಫ್ಲಿಪ್​ಕಾರ್ಟ್ ಮುಂದಾಗಿದೆ. ಖರೀದಿದಾರರು ರಿಯಲ್ ಮಿ, ಒಪ್ಪೋ, ಸ್ಯಾಮ್​ಸಂಗ್, ಆ್ಯಪಲ್ ಕಂಪನಿ ಸೇರಿದಂತೆ ಅನೇಕ ಸ್ಮಾರ್ಟ್​ಫೋನ್​ಗಳು (Smartphone) ಊಹಿಸಲಾಗದ ರೀತಿಯ ಡಿಸ್ಕೌಂಟ್ ಪಡೆದುಕೊಳ್ಳಬಹುದು.

ಫ್ಲಿಪ್​ಕಾರ್ಟ್ ಬಿಗ್‌ ಸೇವಿಂಗ್‌ ಡೇಸ್​ನಲ್ಲಿ ಸ್ಮಾರ್ಟ್ ವಾಚ್‌ಗಳ ಮೇಲೂ ಭರ್ಜರಿ ರಿಯಾಯಿತಿಗಳನ್ನು ಘೋಷಿಸಿದೆ. ಟ್ರಿಮ್ಮರ್‌ಗಳು ಮತ್ತು ಶೇವರ್‌ಗಳ ಮೇಲೆ ಶೇಕಡಾ 70 ರಷ್ಟು ರಿಯಾಯಿತಿ ಮತ್ತು ಲ್ಯಾಪ್‌ಟಾಪ್‌ಗಳ ಮೇಲೆ ಶೇಕಡಾ 40 ರಷ್ಟು ರಿಯಾಯಿತಿ ನೀಡುವ ಸಾಧ್ಯತೆ ಇದೆ. ಒನ್​ಪ್ಲಸ್, ಬೋಟ್, ಜೆಬಿಎಲ್, ರಿಯಲ್ ಮಿ ಮತ್ತು ಹೆಚ್ಚಿನ ಬ್ರಾಂಡ್‌ಗಳಿಂದ ಪೋರ್ಟಬಲ್ ಸ್ಪೀಕರ್‌ಗಳು ಮತ್ತು ಹೆಡ್‌ಫೋನ್‌ಗಳು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ. ಸ್ಮಾರ್ಟ್​ಫೋನ್ ವಿಚಾರಕ್ಕೆ ಬರುವುದಾದರೆ ಪೋಕೋ ಕಂಪನಿಯ ಫೋನ್​ಗಳು ಅತಿ ಕಡಿಮೆ ಬೆಲೆಗೆ ಮಾರಾಟ ಆಗಲಿದೆ. ಇದರ ಡಿಸ್ಕೌಂಟ್ ಬೆಲೆ ಕೂಡ ಬಹಿರಂಗ ಆಗಿದೆ.

Redmi Note 12 Series: ಹೊಸ ವರ್ಷದಂದು ಭಾರತಕ್ಕೆ ಅಪ್ಪಳಿಸುತ್ತಿದೆ 200MP ಕ್ಯಾಮೆರಾದ ಹೊಸ ರೆಡ್ಮಿ ಸ್ಮಾರ್ಟ್​ಫೋನ್: ಬೆಲೆ ಎಷ್ಟು?

ಇದನ್ನೂ ಓದಿ
Image
ಮಿಸ್ಡ್​ ಕಾಲ್​ನಿಂದ 50 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
Image
ಅಣು ಸಮ್ಮಿಲನ ಕ್ರಿಯೆ ಪ್ರಯೋಗ ಯಶ್ ಕಂಡರೂ ಉಪಯೋಗವಿಲ್ಲ
Image
ಈಗ ವಿಮಾನ ಪ್ರಯಾಣ ತುಂಬಾ ಸುಲಭ: ಏನಿದು ಡಿಜಿಯಾತ್ರಾ ಸೇವೆ? ಬಳಸುವುದು ಹೇಗೆ?
Image
Tech Tips: ವಾಟ್ಸ್​ಆ್ಯಪ್​ನಲ್ಲಿ​ ಕನ್ನಡ ಭಾಷೆ ಬಳಸುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್

ಬಿಗ್ ಸೇವಿಂಗ್ ಡೇಸ್ ಸೇಲ್​ನಲ್ಲಿ Poco F4 5G ಸ್ಮಾರ್ಟ್​ಫೋನ್​ನ 6GB RAM ಮತ್ತು 128GB ROM ಆಯ್ಕೆಯ ಬೇಸ್ ಮಾಡೆಲ್‌ಗೆ 22,999 ರೂ. ರಿಯಾಯಿತಿ ಬೆಲೆಯಲ್ಲಿ ಲಭ್ಯವಿದೆ. ಇದರಲ್ಲಿ ಬ್ಯಾಂಕ್ ಆಫರ್ ಕೂಡ ಸೇರ್ಪಡೆಯಾಗಿದೆ. ಇದು ಕ್ವಾಲ್ಕಂ ಸ್ನಾಪ್​ಡ್ರಾಗನ್ 870 5G ಪ್ರೊಸೆಸರ್​ನಿಂದ ಚಾಲಿತವಾಗಿದೆ ಮತ್ತು 120 Hz ರಿಫ್ರೆಶ್ ದರದೊಂದಿಗೆ 6.67-ಇಂಚಿನ AMOLED ಡಿಸ್ ಪ್ಲೇಯನ್ನು ಹೊಂದಿದೆ.

ಎಲ್ಲಾ ಆಫರ್​ಗಳನ್ನು ಉಪಯೋಗಿಸಿ Poco X4 Pro 5G ಸ್ಮಾರ್ಟ್​ಫೋನನ್ನು ನೀವು 14,499 ರೂ. ರಿಯಾಯಿತಿ ದರದಲ್ಲಿ ಖರೀದಿಸಬಹುದು. ಇದು ಕ್ವಾಲ್ಕಂ ಸ್ನಾಪ್​ಡ್ರಾಗನ್ 695 ಪ್ರೊಸೆಸರ್​ನಿಂದ ಚಾಲಿತವಾಗಿದೆ. 120Hz ರಿಫ್ರೆಶ್ ದರದೊಂದಿಗೆ 6.67-ಇಂಚಿನ ಸೂಪರ್ AMOLED ಡಿಸ್ಪ್ಲೇಯನ್ನು ಹೊಂದಿದೆ. ಹಿಂಭಾಗದಲ್ಲಿ ಟ್ರಿಪಲ್-ಕ್ಯಾಮೆರಾ ಸೆಟಪ್ ನೀಡಲಾಗಿದ್ದು, ಇದರಲ್ಲಿ 64MP ಪ್ರಾಥಮಿಕ ಕ್ಯಾಮೆರಾ, 8MP ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್ ಮತ್ತು 2MP ಮ್ಯಾಕ್ರೋ ಕ್ಯಾಮೆರಾ ಇದೆ. ಸೆಲ್ಫಿಗಳಿಗಾಗಿ 16MP ಕ್ಯಾಮೆರಾ ನೀಡಲಾಗಿದೆ.

Poco M4 5G ಸ್ಮಾರ್ಟ್​ಫೋನ್ ಅನ್ನು ನೀವು ಆಫರ್​ನಲ್ಲಿ ಕೇವಲ 10,249 ರೂ. ಗೆ ಪಡೆದುಕೊಳ್ಳಬಹುದು. ಇದು MediaTek ಡೈಮೆನ್ಸಿಟಿ 700 Soc ಮತ್ತು 5,000mAh ಬ್ಯಾಟರಿಯಿಂದ ಚಾಲಿತವಾಗಿದೆ . 90Hz ರಿಫ್ರೆಶ್ ದರದ 6.58-ಇಂಚಿನ IPS LCD ಡಿಸ್ ಪ್ಲೇಯನ್ನು ಹೊಂದಿದೆ. ಇದು 2MP ಡೆಪ್ತ್ ಸೆನ್ಸಾರ್‌ನೊಂದಿಗೆ 50MP ಪ್ರಾಥಮಿಕ ಕ್ಯಾಮೆರಾ ಒಳಗೊಂಡಿದ್ದು, ಸೆಲ್ಫಿಗಳಿಗಾಗಿ 8MP ಕ್ಯಾಮೆರಾ ನೀಡಲಾಗಿದೆ.

ಪೊಕೊ C31 ಸ್ಮಾರ್ಟ್​ಫೋನ್​ನ 3GB RAM ಮತ್ತು 32GB ROM ಮಾದರಿಗೆ ಕೇವಲ 6,499 ರೂ. ನಿಗದಿ ಮಾಡಲಾಗಿದೆ. ಇದು MediaTek Helio G35 SoC ನಿಂದ ಚಾಲಿತವಾಗಿದೆ ಮತ್ತು 6.53-ಇಂಚಿನ IPS LCD ಡಿಸ್ ಪ್ಲೇ ಹೊಂದಿದೆ. 10W ವೈರ್ಡ್ ಚಾರ್ಜಿಂಗ್‌ನಿಂದ ಬೆಂಬಲಿತವಾದ 5,000mAh ಬ್ಯಾಟರಿಯನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Tue, 13 December 22

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ