Flipkart Big Saving Days sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌: ಸ್ಮಾರ್ಟ್​ಫೋನ್ ಖರೀದಿಸಲು ಇದೇ ಉತ್ತಮ ಸಮಯ

ಫ್ಲಿಪ್​ಕಾರ್ಟ್​ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ ಶುರುವಾಗಿದೆ. ಈ ಹೊಸ ವರ್ಷದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆಯಲ್ಲಿದ್ದರೆ ಇದುವೇ ಬೆಸ್ಟ್​ ಟೈಮ್ ಆಗಿದೆ. ಪ್ರಸಿದ್ಧ ಲ್ಯಾಪ್‌ಟಾಪ್‌ಗಳ ಮೇಲೆ 40% ರಿಯಾಯಿತಿ ಘೋಷಿಸಿದೆ.

Flipkart Big Saving Days sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌: ಸ್ಮಾರ್ಟ್​ಫೋನ್ ಖರೀದಿಸಲು ಇದೇ ಉತ್ತಮ ಸಮಯ
Flipkart Big Saving Days sale 2022
Edited By:

Updated on: Jan 17, 2022 | 3:41 PM

ಪ್ರಸಿದ್ಧ ಇ ಕಾಮರ್ಸ್​ ತಾಣಗಳಲ್ಲಿ ಭರ್ಜರಿ ಮೇಳಗಳು ಆರಂಭವಾಗಿದೆ. ಅತ್ತ ಅಮೇಜಾನ್​ನಲ್ಲಿ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ನಡೆಯುತ್ತಿದ್ದರೆ ಇತ್ತ ಫ್ಲಿಪ್​ಕಾರ್ಟ್​ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌ (Flipkart Big Saving Days sale) ಸೇಲ್‌ ಶುರುವಾಗಿದೆ. ಇಂದಿನಿಂದ ಈ ಸೇಲ್‌ ಆರಂಭವಾಗಿದ್ದು ಜನವರಿ 22 ರವರೆಗೆ ನಡೆಯಲಿದೆ. ಈ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಸ್ಮಾರ್ಟ್ ವಾಚ್, ಸ್ಮಾರ್ಟ್ ಟಿವಿಗಳು ಮತ್ತು ಇತರ ವಿಭಾಗಗಳಾದ್ಯಂತ ರಿಯಾಯಿತಿಗಳು, ಡೀಲ್‌ಗಳು ಮತ್ತು ಕೊಡುಗೆಗಳನ್ನು ನೀಡುತ್ತಿದೆ. ನೀವು ಈ ಹೊಸ ವರ್ಷದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆಯಲ್ಲಿದ್ದರೆ ಇದುವೇ ಬೆಸ್ಟ್​ ಟೈಮ್ ಎನ್ನಬಹುದು.  ಹೆಚ್ಚುವರಿಯಾಗಿ ಹಲವಾರು ಉತ್ಪನ್ನಗಳ ಮೇಲೆ ತ್ವರಿತ ರಿಯಾಯಿತಿಗಳನ್ನು ಒದಗಿಸಲು ಐಸಿಐಸಿಐ ಬ್ಯಾಂಕ್‌ನೊಂದಿಗೆ ಫ್ಲಿಪ್​ಕಾರ್ಟ್ ಒಪ್ಪಂದ ಮಾಡಿಕೊಂಡಿದೆ. ಪ್ರಮುಖವಾಗಿ ಈ ಬಾರಿ ಕೂಡ ಐಫೋನ್ 12 (iPhone 12) ಸರಣಿಯಲ್ಲಿ ಬಂಪರ್ ರಿಯಾಯಿತಿಯನ್ನು ನೀಡಲಾಗಿದೆ. ನೀವು ಐಫೋನ್ 12 ಮಿನಿ ಖರೀದಿಸಲು ಯೋಜಿಸುತ್ತಿದ್ದರೆ, ಈ ಸೇಲ್ ನಿಮಗೆ ಉಪಯುಕ್ತವಾಗಬಹುದು. ಬ್ಯಾಂಕ್ ಕೊಡುಗೆಗಳು ಮತ್ತು ವಿನಿಮಯ ಕೊಡುಗೆಗಳ ಲಾಭವನ್ನು ಪಡೆದರೆ, ಅರ್ಧಕ್ಕಿಂತ ಕಡಿಮೆ ಬೆಲೆಗೆ ಈ ಫೋನನ್ನು ಖದಿಸಬಹುದು.

ಐಫೋನ್ 12 ಮಿನಿ ಲಾಂಚಿಂಗ್ ಬೆಲೆ 59,900 ರೂ. ಆದರೆ ಫ್ಲಿಪ್‌ಕಾರ್ಟ್ ಮಾರಾಟದಲ್ಲಿ ಈ ಫೋನ್ ಕೇವಲ 41,999 ರೂ. ಗಳಿಗೆ ಲಭ್ಯವಿದೆ. ಅಂದರೆ ಫೋನ್ ಮೇಲೆ ಶೇ.29 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಇನ್ನು ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ ಶೇಕಡಾ 80 ರಷ್ಟು ರಿಯಾಯಿತಿಗಳನ್ನು ನೀಡಲಾಗಿದೆ. ಸ್ಮಾರ್ಟ್ ವಾಚ್‌ಗಳು ಮತ್ತು ಫಿಟ್‌ನೆಸ್ ಬ್ಯಾಂಡ್‌ಗಳು ಸೇರಿದಂತೆ ಸ್ಮಾರ್ಟ್ ವೇರಬಲ್‌ಗಳ ಮೇಲೆ 60% ರಷ್ಟು ರಿಯಾಯಿತಿ ಇದೆ.

ಪ್ರಸಿದ್ಧ ಲ್ಯಾಪ್‌ಟಾಪ್‌ಗಳ ಮೇಲೆ 40% ರಿಯಾಯಿತಿ ಘೋಷಿಸಿದೆ. ಇದಲ್ಲದೆ ಫ್ಲಿಪ್‌ಕಾರ್ಟ್ ಸ್ಮಾರ್ಟ್ ಟಿವಿಗಳು ಮತ್ತು ಗೃಹೋಪಯೋಗಿ ಉಪಕರಣಗಳ ಮೇಲೆ 75% ರಿಯಾಯಿತಿಗಳನ್ನು ನೀಡುತ್ತಿದೆ. ಬ್ಲೌಪುಂಕ್ಟ್, ಕೊಡಕ್, ಥಾಮ್ಸನ್‌ ಕಂಪನಿಗಳು ತಮ್ಮ ಆಂಡ್ರಾಯ್ಡ್ ಆಧಾರಿತ ಸ್ಮಾರ್ಟ್ LED ಟಿವಿಗಳ ಮೇಲೆ ರಿಯಾಯಿತಿಗಳನ್ನು ಪ್ರತ್ಯೇಕವಾಗಿ ಘೋಷಿಸಿವೆ.

ಇನ್ಫಿನಿಕ್ಸ್‌, ಶವೋಮಿ, ರಿಯಲ್ ಮಿ ಸೇರಿದಂತೆ ಅನೇಕ ಮೊಬೈಲ್ ಮಾರಾಟ ಸಂಸ್ಥೆ ತಮ್ಮ ಸ್ಮಾರ್ಟ್‌ಫೋನ್‌ಗಳ ಮೇಲೆ ಅನೇಕ ರಿಯಾಯಿತಿಗಳನ್ನು ಘೋಷಿಸಿವೆ. ಡೀಲ್ಸ್‌ ಮತ್ತು ಆಫರ್‌ಗಳ ಜೊತೆಗೆ, ಐಸಿಐಸಿಐ ಬ್ಯಾಂಕ್ ಕಾರ್ಡ್‌ಗಳು ಮತ್ತು ಇಎಂಐ ವಹಿವಾಟುಗಳನ್ನು ಬಳಸಿಕೊಂಡು ಖರೀದಿ ಮಾಡುವ ಗ್ರಾಹಕರು 10% ಇನ್ಸಟಂಟ್‌ ಡಿಸ್ಕೌಂಟ್‌ ನೀಡುತ್ತಿದೆ. ಅಲ್ಲದೆ ನೋ ಕಾಸ್ಟ್‌ EMI ಆಯ್ಕೆಗಳು ಕೂಡ ದೊರೆಯಲಿದೆ. ಆಕರ್ಷಕ ಸ್ಮಾರ್ಟ್​ಫೋನ್​ಗಳಾದ ರಿಯಲ್ ಮಿ 8i ರೂ. 11,999 ರ ರಿಯಾಯಿತಿ ಬೆಲೆಯಲ್ಲಿ ಲಭ್ಯವಿದ್ದರೆ, Realme GT Master ವಿನಿಮಯ ಅಥವಾ ಪ್ರಿಪೇಯ್ಡ್ ಆರ್ಡರ್‌ಗಳ ಮೇಲೆ 4,000 ರೂ. ರಿಯಾಯಿತಿಯೊಂದಿಗೆ 21,999 ರೂಗಳಲ್ಲಿ ಲಭ್ಯವಿದೆ.

Amazon Great Republic Day Sale: ಅಮೇಜಾನ್​ನಲ್ಲಿ ಲೈವ್ ಆಗಿದೆ ಗ್ರೇಟ್ ರಿಪಬ್ಲಿಕ್ ಡೇ ಸೇಲ್: ಆಫರ್​ಗಳ ಸುರಿಮಳೆ

Phone Storage Full: ಸ್ಮಾರ್ಟ್​ಫೋನ್​ನಲ್ಲಿ ಸ್ಟೋರೇಜ್ ಸ್ಪೇಸ್ ಉಳಿಸುವುದು ಹೇಗೆ?: ಈ ಟ್ರಿಕ್ ಫಾಲೋ ಮಾಡಿ