Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌ ಸೇಲ್: ಈ ಬಾರಿ ನೀಡಿರುವ ಡಿಸ್ಕೌಂಟ್ ಅಷ್ಟಿಟ್ಟಲ್ಲ

ಫ್ಲಿಪ್​ಕಾರ್ಟ್​ ಬಿಗ್‌ ಸೇವಿಂಗ್‌ ಡೇಸ್‌ (Flipkart Big Saving Days sale) ಸೇಲ್​ಗೆ ಎಲ್ಲ ತಯಾರಿ ಮಾಡಿಕೊಂಡಿದೆ. ಇದೇ ಮಾರ್ಚ್ 12 ರಂದು ಈ ಬಹುನಿರೀಕ್ಷಿತ ಸೇಲ್  ಲೈವ್ ಆಗಲಿದ್ದು, ಮಾರ್ಚ್‌ 17 ರವರೆಗೆ ನಡೆಯಲಿದೆ.

Flipkart Big Saving Days Sale: ಫ್ಲಿಪ್​ಕಾರ್ಟ್​ನಲ್ಲಿ ಬಿಗ್‌ ಸೇವಿಂಗ್‌ ಡೇಸ್‌ ಸೇಲ್: ಈ ಬಾರಿ ನೀಡಿರುವ ಡಿಸ್ಕೌಂಟ್ ಅಷ್ಟಿಟ್ಟಲ್ಲ
Flipkart Big Saving Days Sale
Follow us
TV9 Web
| Updated By: Vinay Bhat

Updated on: Mar 10, 2022 | 12:19 PM

ಪ್ರಸಿದ್ಧ ಇ ಕಾಮರ್ಸ್​ ತಾಣಗಳಲ್ಲಿ ಭರ್ಜರಿ ಮೇಳಗಳು ಆರಂಭವಾಗಿದೆ. ಅತ್ತ ಅಮೇಜಾನ್​ನಲ್ಲಿ (Amazon) ಅಮೆಜಾನ್‌ ಮಿ ಡೇಸ್‌ ಸೇಲ್ ನಡೆಯುತ್ತಿದ್ದರೆ ಇತ್ತ ಫ್ಲಿಪ್​ಕಾರ್ಟ್​ ಬಿಗ್‌ ಸೇವಿಂಗ್‌ ಡೇಸ್‌ (Flipkart Big Saving Days sale) ಸೇಲ್​ಗೆ ಎಲ್ಲ ತಯಾರಿ ಮಾಡಿಕೊಂಡಿದೆ. ಇದೇ ಮಾರ್ಚ್ 12 ರಂದು ಈ ಬಹುನಿರೀಕ್ಷಿತ ಸೇಲ್  ಲೈವ್ ಆಗಲಿದ್ದು, ಮಾರ್ಚ್‌ 17 ರವರೆಗೆ ನಡೆಯಲಿದೆ. ಮಾರಾಟದ ಸಮಯದಲ್ಲಿ, ಖರೀದಿದಾರರಿಗೆ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನ ಉತ್ಪನ್ನಗಳ ಮೇಲೆ ಬಿಗ್‌ ಆಫರ್‌ಗಳನ್ನು ನೀಡಲಾಗಿದೆ. ನೀವು ಹೊಸ ಸ್ಮಾರ್ಟ್‌ಫೋನ್ ಖರೀದಿಸುವ ಯೋಚನೆಯಲ್ಲಿದ್ದರೆ ಇದುವೇ ಬೆಸ್ಟ್​ ಟೈಮ್ ಎನ್ನಬಹುದು. ಯಾಕಂದ್ರೆ ಈ ಸೇಲ್​ನಲ್ಲಿ ಮೊಬೈಲ್​ಗಳ ಮೇಲೆ ಸೇರಿದಂತೆ ಹೆಚ್ಚುವರಿಯಾಗಿ ಹಲವಾರು ಉತ್ಪನ್ನಗಳ ಮೇಲೆ ತ್ವರಿತ ರಿಯಾಯಿತಿಗಳನ್ನು ಒದಗಿಸಲು ಫ್ಲಿಪ್​ಕಾರ್ಟ್ ಮುಂದಾಗಿದೆ. ಖರೀದಿದಾರರು ರಿಯಲ್ ಮಿ, ಒಪ್ಪೋ, ಸ್ಯಾಮ್​ಸಂಗ್, ಆ್ಯಪಲ್ ಕಂಪನಿ ಸೇರಿದಂತೆ ಅನೇಕ ಸ್ಮಾರ್ಟ್​ಫೋನ್​ಗಳು (Smartphone) ಊಹಿಸಲಾಗದ ರೀತಿಯ ಡಿಸ್ಕೌಂಟ್ ಪಡೆದುಕೊಳ್ಳಬಹುದು.

ಫ್ಲಿಪ್​ಕಾರ್ಟ್ ಬಿಗ್‌ ಸೇವಿಂಗ್‌ ಡೇಸ್​ನಲ್ಲಿ ಸ್ಮಾರ್ಟ್ ವಾಚ್‌ಗಳ ಮೇಲೆ ಶೇಕಡಾ 60 ರಷ್ಟು ರಿಯಾಯಿತಿಗಳನ್ನು ಘೋಷಿಸಿದೆ. ಟ್ರಿಮ್ಮರ್‌ಗಳು ಮತ್ತು ಶೇವರ್‌ಗಳ ಮೇಲೆ ಶೇಕಡಾ 70 ರಷ್ಟು ರಿಯಾಯಿತಿ ಮತ್ತು ಲ್ಯಾಪ್‌ಟಾಪ್‌ಗಳ ಮೇಲೆ ಶೇಕಡಾ 40 ರಷ್ಟು ರಿಯಾಯಿತಿ ನೀಡಿದೆ. ಒನ್​ಪ್ಲಸ್, ಬೋಟ್, ಜೆಬಿಎಲ್, ರಿಯಲ್ ಮಿ ಮತ್ತು ಹೆಚ್ಚಿನ ಬ್ರಾಂಡ್‌ಗಳಿಂದ ಪೋರ್ಟಬಲ್ ಸ್ಪೀಕರ್‌ಗಳು ಮತ್ತು ಹೆಡ್‌ಫೋನ್‌ಗಳು 80 ಪ್ರತಿಶತದಷ್ಟು ರಿಯಾಯಿತಿಯಲ್ಲಿ ಲಭ್ಯವಿರುತ್ತವೆ. ತಮ್ಮ ಹೋಳಿ ಶಾಪಿಂಗ್ ಅಗತ್ಯಗಳನ್ನು ಪೂರೈಸಲು, ಬಳಕೆದಾರರು ಹೋಳಿ ಹಬ್ಬಕ್ಕೆ ಬಟ್ಟೆಗಳನ್ನು 80 ಪ್ರತಿಶತದಷ್ಟು ರಿಯಾಯಿತಿಯಲ್ಲಿ ಖರೀದಿಸಬಹುದು. ಜೊತೆಗೆ ಮನೆ ಮತ್ತು ಅಡುಗೆಗೆ ಅಗತ್ಯ ವಸ್ತುಗಳ ಬೆಲೆ 99 ರೂ. ನಿಂದ ಪ್ರಾರಂಭವಾಗುತ್ತವೆ.

ಸ್ಮಾರ್ಟ್​ಫೋನ್ ವಿಚಾರಕ್ಕೆ ಬರುವುದಾದರೆ, ಮೋಟೋರೊಲಾ ಎಡ್ಜ್‌ 20 ಪ್ರೊ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಸೇವಿಂಗ್‌ ಡೇಸ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ 32,999 ರೂ. ಗಳಿಗೆ ಲಭ್ಯವಾಗಲಿದೆ. ಈ ಫೋನ್‌ನ ಮೂಲ ಬೆಲೆ 36,999 ರೂ. ಆಗಿದೆ. ಇದಲ್ಲದೆ ಬ್ಯಾಂಕ್ ಆಫರ್‌ ಮೂಲಕ 32,249ರೂ. ಗಳಿಗೆ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870SoC ಪ್ರೊಸೆಸರ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.9 ಲೆನ್ಸ್ ಹೊಂದಿದೆ. ಜೊತೆಗೆ 4,500mAh ಬ್ಯಾಟರಿಯನ್ನು ಒದಗಿಸಿದ್ದು, 30W ಟರ್ಬೊಪವರ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಇದರ ಜೊತೆಗೆ ಮೋಟೋರೊಲಾ ಎಡ್ಜ್‌ 20 ಫೋನ್‌ ಡಿಸ್ಕೌಂಟ್‌ನಲ್ಲಿ 25,999 ರೂ. ಗಳಿಗೆ ದೊರೆಯಲಿದೆ. ಈ ಫೋನ್‌ನ ಮೂಲ ಬೆಲೆ 29,999 ರೂ. ಆಗಿದೆ. ಇದಲ್ಲದೆ ಬ್ಯಾಂಕ್‌ ಆಫರ್‌ ಮೂಲಕ ಈ ಸ್ಮಾರ್ಟ್‌ಫೋನ್‌ 25,249 ರೂ. ಗಳಿಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ.

Redmi Note 11 Pro Series: ಭಾರತದಲ್ಲಿ ಬಿಡುಗಡೆ ಆಗಿದೆ ಕಡಿಮೆ ಬೆಲೆಯ 108MP ಕ್ಯಾಮೆರಾದ ಹೊಸ ಫೋನ್: ಹೇಗಿದೆ?, ಯಾವುದು?

Instagram: ಸದ್ದಿಲ್ಲದೇ ಬಳಕೆದಾರರಿಗೆ ಶಾಕ್ ಕೊಟ್ಟ ಇನ್​ಸ್ಟಾಗ್ರಾಂ; ತನ್ನದೇ ಎರಡು ಆಪ್ ಡಿಲೀಟ್!

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್