ಫ್ಲಿಪ್‌ಕಾರ್ಟ್ ದಸರಾ ಸೇಲ್ ಕೊನೇ ದಿನ: ಈ ಸ್ಮಾರ್ಟ್‌ಫೋನ್‌ಗಳು ಇದಕ್ಕಿಂತ ಕಡಿಮೆ ಬೆಲೆಗೆ ಸಿಗಲ್ಲ
Flipkart Dussehra Sale 2023: ಫ್ಲಿಪ್‌ಕಾರ್ಟ್ ದಸರಾ ಸೇಲ್ 2023 ರ ಕೊನೆಯ ದಿನ. ಇಂದು ಪ್ರಮುಖ ಬ್ರಾಂಡ್‌ಗಳಾದ ಸ್ಯಾಮ್‌ಸಂಗ್, ರಿಯಲ್ ಮಿ, ಮೋಟೋರೊಲ ಸೇರಿದಂತೆ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಕಡಿಮೆ ಬೆಲೆಗೆ ಖರೀದಿಸಬಹುದು. 20,000 ರೂ. ಒಳಗೆ ಖರೀದಿಸಬಹುದಾದ ಕೆಲವು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಇಲ್ಲಿದೆ ನೋಡಿ.
ಭಾರತದ ಅತಿದೊಡ್ಡ ಇ-ಕಾಮರ್ಸ್ ಸೈಟ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಪ್ರಸ್ತುತ ಹಬ್ಬದ ಕಾರಣ ಆಕರ್ಷಕ ರಿಯಾಯಿತಿಗಳನ್ನು ನೀಡುತ್ತಿದೆ. ಅಕ್ಟೋಬರ್ 22 ರಂದು ಪ್ರಾರಂಭವಾಗಿದ್ದ ಫ್ಲಿಪ್‌ಕಾರ್ಟ್ ದಸರಾ ಸೇಲ್ 2023 (Flipkart Dussehra Sale 2023) ಅಕ್ಟೋಬರ್ 29 ಇಂದು ಕೊನೆಗೊಳ್ಳಲಿದೆ. ಈ ಮಾರಾಟದ ಸಮಯದಲ್ಲಿ, ಫ್ಲಿಪ್‌ಕಾರ್ಟ್ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಪಿಸಿಗಳು, ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಟಿವಿಗಳಂತಹ ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಅನೇಕ ಉತ್ಪನ್ನಗಳ ಮೇಲೆ ಬಂಪರ್ ಕೊಡುಗೆಗಳನ್ನು ಘೋಷಿಸಿದೆ. ಪ್ರಮುಖ ಬ್ರಾಂಡ್‌ಗಳಾದ ಸ್ಯಾಮ್‌ಸಂಗ್, ರಿಯಲ್ ಮಿ, ಮೋಟೋರೊಲ ಸೇರಿದಂತೆ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಕಡಿಮೆ ಬೆಲೆಗೆ ಖರೀದಿಸಬಹುದು.
ಫ್ಲಿಪ್‌ಕಾರ್ಟ್ ದಸರಾ ಸೇಲ್ 2023 ರ ಕೊನೆಯ ದಿನ 20,000 ರೂ. ಒಳಗೆ ಖರೀದಿಸಬಹುದಾದ ಕೆಲವು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಇಲ್ಲಿದೆ ನೋಡಿ:
ಈ ವರ್ಷದ ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾದ ಮೋಟೋ G84 5G, 6.55-ಇಂಚಿನ ಪೂರ್ಣ-HD+ (2400 x 1080 ಪಿಕ್ಸೆಲ್‌ಗಳು) 120Hz ಪೋಲ್ಇಡಿ ಡಿಸ್‌ಪ್ಲೇಯೊಂದಿಗೆ ಬರುತ್ತದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 695 SoC ನಿಂದ ಚಾಲಿತವಾಗಿದೆ ಮತ್ತು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಫೋನ್‌ನ 12GB + 256GB ರೂಪಾಂತರವು ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ರೂ. 18,999ಕ್ಕೆ ಸೇಲ್ ಆಗುತ್ತಿದೆ. ಇದರ ಮೂಲಬೆಲೆ 22,999 ರೂ.
ಪೋಕೋ X5 ಪ್ರೊ 5G ಫೋನ್ 6.67-ಇಂಚಿನ Xfinity AMOLED 120Hz ಡಿಸ್ಪ್ಲೇ, ಆಕ್ಟಾ-ಕೋರ್ ಸ್ನಾಪ್ಡ್ರಾಗನ್ 778G SoC ಮತ್ತು 67W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯೊಂದಿಗೆ ಬರುತ್ತದೆ. ಇ ಫೋನ್ 108-ಮೆಗಾಪಿಕ್ಸೆಲ್ ISOCELL HM2 ಪ್ರಾಥಮಿಕ ಸಂವೇದಕ, ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ನೊಂದಿಗೆ 8-ಮೆಗಾಪಿಕ್ಸೆಲ್ ಸಂವೇದಕ ಮತ್ತು ಹಿಂಭಾಗದಲ್ಲಿ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹಾಗೂ 16-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಸಂವೇದಕವನ್ನು ಹೊಂದಿದೆ. ಇದರ 6GB + 128GB ರೂಪಾಂತರವು ಫ್ಲಿಪ್‌ಕಾರ್ಟ್‌ನಲ್ಲಿ 18,499 ರೂ. ಗೆ ಮಾರಾಟ ಕಾಣುತ್ತಿದೆ.
ಮೈಸೂರಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ರೋಬಾಟ್ ನರ್ಸ್: ಹೇಗೆ ಕೆಲಸ ಮಾಡುತ್ತೆ? ಇಲ್ಲಿದೆ ವಿವರ
ವಿವೋ T2 5G ಈ ವರ್ಷದ ಏಪ್ರಿಲ್‌ನಲ್ಲಿ 6nm ಕ್ವಾಲ್ಕಮ್ ಸ್ನಾಪ್ಡ್ರಾಗನ್ 695 SoC ಮತ್ತು 44W ಫಾಸ್ಟ್ ಚಾರ್ಜಿಂಗ್, 4,500mAh ಬ್ಯಾಟರಿಯೊಂದಿಗೆ ದೇಶದಲ್ಲಿ ಬಿಡುಗಡೆಯಾಗಿತ್ತು. ಈ ಹ್ಯಾಂಡ್‌ಸೆಟ್ 6.38-ಇಂಚಿನ AMOLED (1,080 x 2,400 ಪಿಕ್ಸೆಲ್‌ಗಳು) 90Hz ಡಿಸ್‌ಪ್ಲೇ ಮತ್ತು 64-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕವನ್ನು 2-ಮೆಗಾಪಿಕ್ಸೆಲ್ ಬೊಕೆ ಲೆನ್ಸ್ ಮತ್ತು 16-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್‌ನ 6GB + 128GB ಆಯ್ಕೆಯನ್ನು ಮಾರಾಟದ ಸಮಯದಲ್ಲಿ ರೂ. 17,999ರೂ. ಗೆ ಖರೀದಿಸಬಹುದು.
ಆಗಸ್ಟ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾದ ರಿಯಲ್ ಮಿ 11 5G ಫೋಣ್ 6.72-ಇಂಚಿನ ಪೂರ್ಣ-HD+ (1,080×2,400 ಪಿಕ್ಸೆಲ್‌ಗಳು) ಸ್ಯಾಮ್‌ಸಂಗ್ AMOLED 120Hz ಡಿಸ್ಪ್ಲೇ ಮತ್ತು 108-ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL HM6 ಪ್ರಾಥಮಿಕ ಹಿಂಬದಿ ಸಂವೇದಕದೊಂದಿಗೆ ಬರುತ್ತದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6100+ SoC ನಿಂದ ಚಾಲಿತವಾಗಿದೆ ಮತ್ತು 67W ವೈರ್ಡ್ SuperVOOC ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ ಇದೆ. ಈ ಫೋನ್‌ನ 8GB + 128GB ರೂಪಾಂತರವನ್ನು ಫ್ಲಿಪ್‌ಕಾರ್ಟ್ ಮಾರಾಟದಲ್ಲಿ 16,999 ರೂ. ಗೆ ನಿಮ್ಮದಾಗಿಸಬಹುದು.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಆಗಸ್ಟ್‌ನಲ್ಲಿ ದೇಶದಲ್ಲಿ ಬಿಡುಗಡೆ ಮಾಡಲಾಯಿತು. ಈ ಹ್ಯಾಂಡ್‌ಸೆಟ್ ಆಕ್ಟಾ-ಕೋರ್ ಎಕ್ಸಿನೊಸ್ 1280 SoC ಮತ್ತು ದೊಡ್ಡ 6,000mAh ಬ್ಯಾಟರಿಯನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ 6.46-ಇಂಚಿನ ಪೂರ್ಣ-HD+ (2340 x 1080 ಪಿಕ್ಸೆಲ್‌ಗಳು) sAMOLED 120Hz ಡಿಸ್‌ಪ್ಲೇಯೊಂದಿಗೆ ಬರುತ್ತದೆ. ಇದು 50-ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆನ್ಸಾರ್ ಮತ್ತು 13-ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದರ 6GB + 128GB ಇದೀಗ 16,499 ರೂ. ಗೆ ಸೇಲ್ ಆಗುತ್ತಿದೆ.
ರಿಯಲ್ ಮಿ 11x 5G ಫೋನಿನ 6GB + 128GB ರೂಪಾಂತರವು ಈಗ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 13,999 ರೂ. ಗೆ ಲಭ್ಯವಿದೆ. ಇದು 6.72-ಇಂಚಿನ ಪೂರ್ಣ-HD+ (1,080×2,400 ಪಿಕ್ಸೆಲ್‌ಗಳು) AMOLED 120Hz ಡಿಸ್ಪ್ಲೇ, 64-ಮೆಗಾಪಿಕ್ಸೆಲ್ ಡ್ಯುಯಲ್ ರಿಯರ್ ಕ್ಯಾಮೆರಾ ಮತ್ತು 8-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್ 6nm ಮೀಡಿಯಾಟೆಕ್ ಡೈಮೆನ್ಸಿಟಿ 6100+ SoC ನಿಂದ ಚಾಲಿತವಾಗಿದೆ. 33W ವೈರ್ಡ್ SUPERVOOC ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿ ನೀಡಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ