Flipkart: ಫ್ಲಿಪ್​ಕಾರ್ಟ್​ನಲ್ಲಿ ಎಲೆಕ್ಟ್ರಾನಿಕ್ ಸೇಲ್: ಸ್ಮಾರ್ಟ್​ಫೋನ್, ಸ್ಮಾರ್ಟ್​ ಟಿವಿ ಖರೀದಿಗೆ ಇದೇ ಬೆಸ್ಟ್ ಟೈಮ್

Flipkart Electronics Sale 2022: ಫ್ಲಿಪ್​ಕಾರ್ಟ್ (Flipkart) ಸದ್ಯ ಎಲೆಕ್ಟ್ರಾನಿಕ್ ಸೇಲ್ ಹಮ್ಮಿಕೊಂಡಿದೆ. ಈ ಸೇಲ್‌ನಲ್ಲಿ ಐಫೋನ್ SE ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದನ್ನು ನೀವು ಕೇವಲ 27,999 ರೂ. ಗಳಿಗೆ ಖರೀದಿಸಬಹುದಾಗಿದೆ.

Flipkart: ಫ್ಲಿಪ್​ಕಾರ್ಟ್​ನಲ್ಲಿ ಎಲೆಕ್ಟ್ರಾನಿಕ್ ಸೇಲ್: ಸ್ಮಾರ್ಟ್​ಫೋನ್, ಸ್ಮಾರ್ಟ್​ ಟಿವಿ ಖರೀದಿಗೆ ಇದೇ ಬೆಸ್ಟ್ ಟೈಮ್
Flipkart Electronics Sale 2022
Follow us
TV9 Web
| Updated By: Vinay Bhat

Updated on:Jan 28, 2022 | 2:10 PM

ಗ್ರಾಹಕರಿಗೆ ಭರ್ಜರಿ ರಿಯಾಯಿತಿ ದರದಲ್ಲಿ ಸದಾ ಒಂದಲ್ಲ ಒಂದು ಮೇಳವನ್ನು ಆಯೋಜಿಸುತ್ತಿರುವ ಪ್ರಸಿದ್ಧ ಇ ಕಾಮರ್ಸ್​ ತಾಣ ಫ್ಲಿಪ್​ಕಾರ್ಟ್ (Flipkart) ಸದ್ಯ ಎಲೆಕ್ಟ್ರಾನಿಕ್ ಸೇಲ್ (Electronics Sale) ಹಮ್ಮಿಕೊಂಡಿದೆ. ಈಗಾಗಲೇ ಈ ಮೇಳ ಪ್ರಾರಂಭವಾಗಿದ್ದು ಸ್ಮಾರ್ಟ್​ಟಿವಿ, ಸ್ಮಾರ್ಟ್​ಫೋನ್ ಸೇರಿದಂತೆ ಅನೇಕ ಪ್ರೊಡಕ್ಟ್​ಗಳ ಮೇಲೆ ಬಂಪರ್ ರಿಯಾಯಿತಿ ನೀಡಲಾಗಿದೆ. ಜನವರಿ 31ರವರೆಗೆ ಈ ಮೇಳ ನಡೆಯುತ್ತಿದ್ದು, ಗ್ರಾಹಕರು ಎಕ್ಸ್‌ಚೇಂಜ್‌ ಆಫರ್‌ ಮತ್ತು ಬ್ಯಾಂಕ್ ಕಾರ್ಡ್ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ನೋ ಕಾಸ್ಟ್‌ ಈಎಂಐ ಆಯ್ಕೆಯನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಪ್ರಮುಖವಾಗಿ ಐಫೋನ್​ಗಳ ಮೇಲೆ ಊಹಿಸಲಾಗದಷ್ಟು ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ರಿಯಲ್ ಮಿ, ಸ್ಯಾಮ್​ಸಂಗ್, ರೆಡ್ಮಿ ಹಾಗೂ ಶವೋಮಿ (Xiaomi) ಸ್ಮಾರ್ಟ್​ಫೋನ್​ಗಳ ಮೇಲೂ ಅತ್ಯುತ್ತಮ ಡಿಸ್ಕೌಂಟ್ ನೀಡಲಾಗಿದೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಆಫರ್​ನಲ್ಲಿ ಪಡೆದುಕೊಳ್ಳಬಹುದಾದ ಪ್ರಮುಖ ಪ್ರಾಡಕ್ಟ್​ಗಳ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ.

ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್‌ ಸೇಲ್‌ನಲ್ಲಿ ಐಫೋನ್ SE ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ಇದನ್ನು ನೀವು ಕೇವಲ 27,999 ರೂ. ಗಳಿಗೆ ಖರೀದಿಸಬಹುದಾಗಿದೆ. ಐಫೋನ್ SE 4.7 ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಪ್ರೊಸೆಸರ್‌ಗೆ ಪೂರಕವಾಗಿ ಐಒಎಸ್‌ 13 ಬೆಂಬಲ ನೀಡಲಿದೆ. ಇದು 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ.

ಐಫೋನ್ 11 ಕೂಡ ಭರ್ಜರಿ ಡಿಸ್ಕೌಂಟ್​ನಲ್ಲಿ ಮಾರಾಟವಾಗುತ್ತಿದೆ. ಇದನ್ನು ನೀವು ಕೇವಲ 46,499 ರೂ. ಗಳಿಗೆ ಖರೀದಿಸಬಹುದಾಗಿದೆ. ಜೊತೆಗೆ 18,850 ರೂ. ವರೆಗೆ ಎಕ್ಸ್‌ಚೇಂಜ್ ಆಫರ್‌ ಸಹ ನೀಡಲಾಗಿದೆ. ಈ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ವೇಗದ ಚಿಪ್‌ಸೆಟ್‌ ಬೆಂಬಲದೊಂದಿಗೆ A13 ಬಯೋನಿಕ್ ಪ್ರೊಸೆಸರ್‌ ಪಡೆದುಕೊಂಡಿದ್ದು, ಎರಡು ಕ್ಯಾಮೆರಾಗಳು 12 ಮೆಗಾ ಪಿಕ್ಸಲ್ ಸೆನ್ಸಾರ್‌ ಬೆಂಬಲವನ್ನು ಪಡೆದಿವೆ.

ವಿಶೇಷವಾಗಿ ಈ ಸೇಲ್ ನಲ್ಲಿ TCLನ  50-ಇಂಚಿನ ಸ್ಮಾರ್ಟ್ ಟಿವಿಯನ್ನು 62,990 ರೂ. ಬದಲಿಗೆ ಕೇವಲ 32,328 ರೂ. ಗಳಿಗೆ ಖರೀದಿಸಬಹುದು. TCL P615 126cm (50 inch) Ultra HD (4K) LED Smart TV (50P615)   ಮಾರುಕಟ್ಟೆಯಲ್ಲಿ 62,990 ರೂ. ಗೆ ಸಿಗುತ್ತಿದೆ. ಫ್ಲಿಪ್‌ಕಾರ್ಟ್ ಎಲೆಕ್ಟ್ರಾನಿಕ್ಸ್ ಸೇಲ್ ನಲ್ಲಿ  ಇದರ ಮೇಲೆ  44% ರಿಯಾಯಿತಿ ನೀಡಲಾಗುತ್ತಿದೆ. ಈ ರಿಯಾಯಿತಿಯ ನಂತರ ಟಿವಿಯ ಬೆಲೆ 34,990 ರೂ.ಗೆ ಇಳಿಯಲಿದೆ. ಇಷ್ಟೇ ಅಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಈ ಟಿವಿಗೆ ಪಾವತಿ ಮಾಡಿದರೆ 5% ಕ್ಯಾಶ್‌ಬ್ಯಾಕ್ ಅಂದರೆ 1,662 ರೂ. ಗೆ ಪಡೆಯಬಹುದು. ಇದರ ನಂತರ ಸ್ಮಾರ್ಟ್ ಟಿವಿಯನ್ನು 33,328 ರೂ. ಗೆ ಖರೀದಿಸಬಹುದು.

ಇದಲ್ಲದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್‌ ಕೂಡ ಫ್ಲಿಪ್‌ಕಾರ್ಟ್‌ ಎಲೆಕ್ಟ್ರಾನಿಕ್ಸ್ ಸೇಲ್ ಈವೆಂಟ್‌ನಲ್ಲಿ ಭಾರೀ ರಿಯಾಯಿತಿಯನ್ನು ಪಡೆದುಕೊಂಡಿದೆ. 20,999 ರೂ.ಬೆಲೆಯ ಈ ಸ್ಮಾರ್ಟ್‌ಫೋನ್‌ ನಿಮಗೆ ಇದೀಗ 15,999 ರೂ. ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಮೇಲೆ ನಿಮಗೆ ಬರೋಬ್ಬರಿ 5,000 ರೂ.ಗಳ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಅಂತೆಯೆ ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊರೊಲಾ ಎಡ್ಜ್‌ 20 ಫ್ಯೂಷನ್‌ 5G ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 20,499 ರೂ. ಗೆ ಮಾರಾಟವಾಗುತ್ತಿದೆ. ಈ ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Google Maps: ಗೂಗಲ್ ಮ್ಯಾಪ್ ಪರಿಚಯಿಸಿದೆ ಭರ್ಜರಿ ಫೀಚರ್: ಹೊಸ ಅಪ್ಡೇಟ್​ ಕಂಡು ದಂಗಾದ ಬಳಕೆದಾರರು

Published On - 2:09 pm, Fri, 28 January 22

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ