Nothing Phone (1): ಹೊಸ ಸ್ಮಾರ್ಟ್​ಫೋನ್ ಮೇಲೆ ಕಣ್ಣಿಟ್ಟಿದ್ದರೆ ಇಲ್ಲಿ ಗಮನಿಸಿ: ನಥಿಂಗ್ ಫೋನ್ (1) ಮೇಲೆ ಬಂಪರ್ ಡಿಸ್ಕೌಂಟ್

Flipkart Offer: ನಥಿಂಗ್ ಫೋನ್ (1) ಇದೀಗ ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಆಗುತ್ತಿದೆ. ನೀವು ಮಧ್ಯಮ ಬೆಲೆಗೆ ಒಂದು ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ಗಳುಳ್ಳ ಫೋನನ್ನ ಹುಡುಕುತ್ತಿದ್ದರೆ ಇದಕ್ಕಿಂತ ಉತ್ತಮ ಆಯ್ಕೆ ಬೇರೆ ಸಿಗುವುದಿಲ್ಲ.

Nothing Phone (1): ಹೊಸ ಸ್ಮಾರ್ಟ್​ಫೋನ್ ಮೇಲೆ ಕಣ್ಣಿಟ್ಟಿದ್ದರೆ ಇಲ್ಲಿ ಗಮನಿಸಿ: ನಥಿಂಗ್ ಫೋನ್ (1) ಮೇಲೆ ಬಂಪರ್ ಡಿಸ್ಕೌಂಟ್
Nothing Phone 1
Follow us
| Updated By: Vinay Bhat

Updated on: Nov 01, 2022 | 6:05 AM

ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್ ​ಫೋನ್ ನಥಿಂಗ್ ಫೋನ್​ (1) ಗೆ (Nothing Phone 1) ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಿದ್ದರೂ ಈ ಫೋನ್ ಭರ್ಜರಿ ಸೇಲ್ ಕಾಣುತ್ತಿದೆ. ಬಿಡುಗಡೆ ಆದ ಒಂದೇ ತಿಂಗಳಲ್ಲಿ ಇದರ ಬೆಲೆ ಕೂಡ ಹೆಚ್ಚಳ ಮಾಡಿತ್ತು. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ (Flipkart) ಸೇಲ್ ಕಾಣುವ ಈ ಫೋನ್ ಅನೇಕ ಬಾರಿ ಔಟ್ ಆಫ್ ಸ್ಟಾಕ್​ನಲ್ಲಿ ಕೂಡ ಕಾಣಿಸಿಕೊಂಡಿದೆ. ಇದರ ನಡುವೆ ನಥಿಂಗ್ ಫೋನ್ (1) ಇದೀಗ ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಆಗುತ್ತಿದೆ. ನೀವು ಮಧ್ಯಮ ಬೆಲೆಗೆ ಒಂದು ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ಗಳುಳ್ಳ ಫೋನನ್ನ ಹುಡುಕುತ್ತಿದ್ದರೆ ಇದಕ್ಕಿಂತ ಉತ್ತಮ ಆಯ್ಕೆ ಬೇರೆ ಸಿಗುವುದಿಲ್ಲ. ಹಾಗಾದ್ರೆ ಈ ಫೋನ್ ಈಗ ಎಷ್ಟು ಬೆಲೆಗೆ ಮಾರಾಟ ಆಗುತ್ತಿದೆ?, ಫೀಚರ್​ಗಳು ಏನೇನಿದೆ ಎಂಬುದನ್ನು ನೋಡೋಣ.

ಭಾರತದಲ್ಲಿ ನಥಿಂಗ್ ಫೋನ್ (1) 8GB RAM + 128GB ಸ್ಟೋರೇಜ್ ಆಯ್ಕೆಗೆ ಮೂಲಬೆಲೆ 33,999ರೂ.. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ 36,999ರೂ., 12GB RAM + 256GB ಸ್ಟೋರೇಜ್ ಆಯ್ಕೆಗೆ 39,999ರೂ. ಇದೆ. ಆದರೀಗ ಫ್ಲಿಪ್​ಕಾರ್ಟ್​ನಲ್ಲಿ ಆಫರ್ ನೀಡಲಾಗಿದ್ದು ಬೆಲೆ ಕಡಿತಗೊಂಡು 8GB RAM + 128GB ಸ್ಟೋರೇಜ್ ಆಯ್ಕೆಯ ಫೋನನ್ನು ಕೇವಲ 26,999 ರೂ. ಗೆ ಮಾರಾಟ ಮಾಡುತ್ತಿದೆ. ಇದರ ಜೊತೆಗೆ ಸಿಟಿ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಇದ್ದರೆ ಇನ್ನಷ್ಟು ರಿಯಾಯತಿ ಪಡೆದುಕೊಳ್ಳಬಹುದು.

ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 6.55 ಇಂಚಿನ ಫುಲ್‌ ಹೆಚ್‌ ಡಿ ಪ್ಲಸ್‌ ಡಿಸ್‌ ಪ್ಲೇ ಹೊಂದಿದೆ. ಈ ಡಿಸ್‌ ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ನೀಡಲಾಗಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.

ಇದನ್ನೂ ಓದಿ
Image
WhatsApp New Feature: ಇನ್ಮುಂದೆ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಿ: ವಾಟ್ಸ್​​ಆ್ಯಪ್​ನಲ್ಲಿ ಅಚ್ಚರಿಯ ಆಯ್ಕೆ
Image
Twitter Verification: ಟ್ವಿಟರ್​ನಲ್ಲಿ ಮಹತ್ವದ ಬದಲಾವಣೆ: ಬ್ಲೂಟಿಕ್ ಬೇಕಾದಲ್ಲಿ ಹಣ ಪಾವತಿಸಬೇಕು
Image
Tech Tips: ಒಂದು ಸಿಮ್​ ಅನ್ನು ಎಷ್ಟು ಬಾರಿ ಪೋರ್ಟ್ ಮಾಡಬಹುದು ಗೊತ್ತೆ?: ಟ್ರಾಯ್ ನಿಯಮ ಏನಿದೆ?
Image
Moto E40: ಬಜೆಟ್ ಸ್ಮಾರ್ಟ್​ಫೋನ್ ಬೇಕಿದ್ದರೆ ಇಲ್ಲಿದೆ ಬಂಪರ್ ಆಫರ್: ಮೋಟೋ E40 ಬೆಲೆ ಕೇವಲ 8,599 ರೂ.

ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ ನೊಂದಿಗೆ ಬರುತ್ತದೆ. ಈ ಫೋನ್ ​ನಲ್ಲಿರುವ ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ ಸಂಗ್‌ JN1 ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್ ಆಫ್ ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಆದರೆ, ನಥಿಂಗ್‌ ಫೋನ್‌ (1) ನೊಂದಿಗೆ ಚಾರ್ಜರ್‌ ನೀಡಲಾಗಿಲ್ಲ ಕೇವಲ ಟೈಪ್‌ ಸಿ ಚಾರ್ಜಿಂಗ್ ಕೇಬಲ್‌ ಲಭ್ಯ ಮಾಡಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ