AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pixel 7: ಹೊಚ್ಚ ಹೊಸ ಗೂಗಲ್‌ ಪಿಕ್ಸಲ್‌ 7 ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್: ಈ ಆಫರ್ ಮಿಸ್ ಮಾಡ್ಬೇಡಿ

Flipkart Offer: ಇತ್ತೀಚೆಗಷ್ಟೆ ಬಿಡುಗಡೆ ಆಗಿ ಯಶಸ್ಸು ಸಾಧಿಸುತ್ತಿರುವ ಗೂಗಲ್ ಪಿಕ್ಸೆಲ್ 7 (Google Pixel 7) ಸ್ಮಾರ್ಟ್​ಫೋನ್ ಆಕರ್ಷಕ ರಿಯಾಯಿತಿ ದರದಲ್ಲಿ ಸೇಲ್ ಆಗುತ್ತಿದೆ. ಕೇವಲ 40,000 ರೂ. ಒಳಗೆ ಈ ಸ್ಮಾರ್ಟ್​ಫೋನ್ ಅನ್ನು ನಿಮ್ಮದಾಗಿಸಬಹುದು.

Google Pixel 7: ಹೊಚ್ಚ ಹೊಸ ಗೂಗಲ್‌ ಪಿಕ್ಸಲ್‌ 7 ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್: ಈ ಆಫರ್ ಮಿಸ್ ಮಾಡ್ಬೇಡಿ
google pixel 7
TV9 Web
| Edited By: |

Updated on: Nov 13, 2022 | 1:30 PM

Share

ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್​ನಲ್ಲಿ (Flipkart) ಯಾವುದೇ ಮೇಳ ಆಯೋಜಿಸಿಲ್ಲವಾದರೂ ಸ್ಮಾರ್ಟ್​ಫೋನ್​ಗಳು ಬಂಪರ್ ಡಿಸ್ಕೌಂಟ್​ಗೆ ಮಾರಾಟ ಆಗುತ್ತಿದೆ. ಮುಖ್ಯವಾಗಿ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಯಶಸ್ಸು ಸಾಧಿಸುತ್ತಿರುವ ಗೂಗಲ್ ಪಿಕ್ಸೆಲ್ 7 (Google Pixel 7) ಸ್ಮಾರ್ಟ್​ಫೋನ್ ಆಕರ್ಷಕ ರಿಯಾಯಿತಿ ದರದಲ್ಲಿ ಸೇಲ್ ಆಗುತ್ತಿದೆ. ಕೇವಲ 40,000 ರೂ. ಒಳಗೆ ಈ ಸ್ಮಾರ್ಟ್​ಫೋನ್ ಅನ್ನು ನಿಮ್ಮದಾಗಿಸಬಹುದು. ಗೂಗಲ್‌ ಪಿಕ್ಸಲ್‌ 7 ಆಕರ್ಷಕ ಫೀಚರ್​ಗಳೊಂದಿಗೆ ಗ್ರಾಹಕರನ್ನು ಸೆಳೆದಿದೆ. ಈ ಫೋನ್ ತನ್ನ ಕ್ಯಾಮೆರಾ ಮೂಲಕವೇ ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿತ್ತು. ಹಾಗಾದರೆ ಗೂಗಲ್‌ ಪಿಕ್ಸಲ್‌ 7 ಈಗ ಎಷ್ಟು ರೂಪಾಯಿಗೆ ಮಾರಾಟ ಆಗುತ್ತಿದೆ?, ಇದರ ವಿಶೇಷತೆ ಏನೇನು ಎಂಬುದನ್ನು ನೋಡೋಣ.

ಗೂಗಲ್‌ ಪಿಕ್ಸಲ್‌ 7 ಸ್ಮಾರ್ಟ್​ಫೋನ್​ನ ಮೂಲಬೆಲೆ 59,999 ರೂ. ಆದರೀಗ ಫ್ಲಿಪ್‌ಕಾರ್ಟ್​ನಲ್ಲಿ ಆಯ್ದ ಕೆಲ ಬ್ಯಾಂಕ್‌ಗಳಿಂದ ಆಕರ್ಷಕ ರಿಯಾಯಿತಿ ಕೊಡುಗೆಗಳು ಸಿಗಲಿವೆ. ಖರೀದಿದಾರರು ಹೆಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್‌ ಮೂಲಕ ಖರೀದಿಸಿದರೆ 7,000 ರೂ. ವರೆಗೂ ಕ್ಯಾಶ್‌ಬ್ಯಾಕ್‌ ಪಡೆಯಬಹುದು. ಹಾಗೆಯೇ 19,000 ರೂ. ವರೆಗೆ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ. ನಿಮ್ಮ ಹಳೆಯ ಫೋನ್ ಕನಿಷ್ಠ 12,000 ರೂ. ಗೆ ಮಾರಾಟ ಆದರೂ 40,000 ರೂ. ಒಳಗೆ ಗೂಗಲ್‌ ಪಿಕ್ಸಲ್‌ 7 ಸ್ಮಾರ್ಟ್​ಫೋನ್​ ಅನ್ನು ನಿಮ್ಮದಾಗಿಸಬಹುದು.

ಇನ್ನು ಈ ಸ್ಮಾರ್ಟ್‌ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಇದು 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಇದನ್ನೂ ಓದಿ
Image
Tech Tips: ನೀವು WhatsApp Web ಉಪಯೋಗಿಸುತ್ತೀರಾ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ ನೋಡಿ
Image
Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್, ಆನ್​ಲೈನ್​ ಟಿಕೆಟ್ ಬುಕಿಂಗ್ ವಿಧಾನ ಇಲ್ಲಿದೆ ನೋಡಿ
Image
Cyber Fraud: ವಿದ್ಯುತ್ ಬಿಲ್ ಬಾಕಿ ಹೆಸರಲ್ಲಿ ನಡೆಯುತ್ತಿದೆ ಬಹುದೊಡ್ಡ ವಂಚನೆ: ನಿಮಗೂ ಕರೆ ಬರಬಹುದು ಎಚ್ಚರ
Image
ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌

ಇದರಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನೀಡಲಾಗಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಜೊತೆಗೆ ಕ್ಯಾಮೆರಾ ಮೂಲಕ ವಿಡಿಯೋ ರೆಕಾರ್ಡ್‌ ಮಾಡುವಾಗ ಬ್ಲರ್‌ ಎಫೆಕ್ಟ್‌ ನೀಡುವ ‘ಸಿನಿಮ್ಯಾಟಿಕ್ ಬ್ಲರ್’ ಫೀಚರ್ಸ್‌ ಪಡೆದುಕೊಂಡಿರುವುದು ವಿಶೇಷ.

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನಲ್ಲಿ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಅನ್ನು ಆಕ್ಟಿವ್‌ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಜೊತೆಗೆ ಇತ್ತೀಚೆಗಿನ ಎಲ್ಲ ಆಯ್ಕೆ ನೀಡಲಾಗಿದೆ.

Follow Us
TV9 Web
TV9 Web

TV9 Kannada

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!