Google Pixel 6a: 38,899 ರೂ. ಡಿಸ್ಕೌಂಟ್: ಕೇವಲ 5,100 ರೂ. ಗೆ ಖರೀದಿಸಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್

| Updated By: Vinay Bhat

Updated on: Dec 29, 2022 | 11:44 AM

Flipkart Year End Sale: ಫ್ಲಿಪ್​ಕಾರ್ಟ್ ಈಯರ್ ಎಂಡ್ ಸೇಲ್​ನಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ 29,999 ರೂ. ಗೆ ಸೇಲ್ ಆಗುತ್ತಿದೆ. ಈ ಫೋನ್ ಮೇಲೆ 14,000 ರೂ. ಗಳ ರಿಯಯಿತಿ ನೀಡಲಾಗಿದೆ.

Google Pixel 6a: 38,899 ರೂ. ಡಿಸ್ಕೌಂಟ್: ಕೇವಲ 5,100 ರೂ. ಗೆ ಖರೀದಿಸಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್
Google Pixel 6a
Follow us on

ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ (Flipkart) ನಲ್ಲಿ ಈಯರ್ ಎಂಡ್ ಸೇಲ್ (Year End Sale) ನಡೆಯುತ್ತಿದೆ. ಈ ಮೇಳದಲ್ಲಿ ಸ್ಮಾರ್ಟ್​ಫೋನ್​ಗಳು ಸೇರಿದಂತೆ ಲ್ಯಾಪ್​ಟಾಪ್, ಬಟ್ಟೆಗಳು ಬಹುತೇಕ ಎಲ್ಲ ಎಲೆಕ್ಟ್ರಾನ್ ವಸ್ತುಗಳು ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಆಗುತ್ತಿದೆ. ಆ್ಯಪಲ್, ಸ್ಯಾಮ್​ಸಂಗ್, ಗೂಗಲ್, ರಿಯಲ್ ಮಿ, ಒನ್​ಪ್ಲಸ್ ಸೇರಿದಂತೆ ಅನೇಕ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳ ಮೇಲೆ ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟ ಆಗುತ್ತಿದೆ. ಮುಖ್ಯವಾಗಿ ಗೂಗಲ್ ಕಂಪನಿಯ ಗೂಗಲ್ ಪಿಕ್ಸೆಲ್ 6ಎ (Google Pixel 6a) ಸ್ಮಾರ್ಟ್​ಫೋನ್ ಊಹಿಸಲಾಗದ ದರಕ್ಕೆ ಸೇಲ್ ಆಗುತ್ತಿದೆ. 43,999 ರೂ. ಗೆ ಅನಾವರಣಗೊಂಡ ಈ ಫೋನನ್ನು ಇದೀಗ ಕೇವಲ 5,100 ರೂ. ಗೆ ನಿಮ್ಮದಾಗಿಸಬಹುದು.

ಫ್ಲಿಪ್​ಕಾರ್ಟ್ ಈಯರ್ ಎಂಡ್ ಸೇಲ್​ನಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ 29,999 ರೂ. ಗೆ ಸೇಲ್ ಆಗುತ್ತಿದೆ. ಈ ಫೋನ್ ಮೇಲೆ 14,000 ರೂ. ಗಳ ರಿಯಯಿತಿ ನೀಡಲಾಗಿದೆ. ಇದರ ಜೊತೆಗೆ ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್​ದಾರರು 5,000 ರೂ. ಗಳ ಮೇಲಿನ ಆರ್ಡರ್​ಗೆ 3,000 ರೂ. ವರೆಗಿನ ಡಿಸ್ಕೌಂಟ್ ಪಡೆಯಬಹುದು. ಇಷ್ಟೇ ಅಲ್ಲದೆ 21,900 ರೂ. ವರೆಗೆದಿನ ಎಕ್ಸ್​ಚೇಂಜ್ ಆಫರ್ ಕೂಡ ಘೋಷಿಸಲಾಗಿದೆ. ಹೀಗೆ ಎಲ್ಲ ಬ್ಯಾಂಕ್ ಆಫರ್ ಮತ್ತು ಎಕ್ಸ್​ಚೇಂಜ್ ಆಫರ್ ಮೂಲಕ ಗೂಗಲ್ ಪಿಕ್ಸೆಲ್ 6ಎ ಸ್ಮಾರ್ಟ್​ಫೋನನ್ನು ನೀವು 5,100 ರೂ. ಗೆ ಪಡೆಯಬಹುದು.

ಏನು ಫೀಚರ್ಸ್:

ಇದನ್ನೂ ಓದಿ
Twitter Down: ಭಾರತ ಸೇರಿದಂತೆ ವಿಶ್ವದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ
Call Before You Dig: 5G ಚಾಲನೆಗೆ ಮುನ್ನ CBUD ಆಪ್ ಕಡ್ಡಾಯವಾಗಿ ಬಳಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ
Tech Tips: ವಾಟ್ಸ್​ಆ್ಯಪ್​ನಲ್ಲಿ ಹೆಚ್ಚುತ್ತಿದೆ ಸ್ಕ್ಯಾಮ್: ಫೇಕ್ ಮೆಸೇಜ್​ಗಳನ್ನು ಈಗ ನೀವೇ ಕಂಡುಹಿಡಿಯಿರಿ
Twitter Data: ಸುಂದರ್ ಪಿಚೈ, ಸಲ್ಮಾನ್ ಖಾನ್ ಸೇರಿ 40 ಕೋಟಿ ಟ್ವಿಟರ್ ಬಳಕೆದಾರರ ವೈಯಕ್ತಿಕ ವಿವರ ಡಾರ್ಕ್​ವೆಬ್​ನಲ್ಲಿ ಮಾರಾಟಕ್ಕೆ; ವರದಿ

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ–ಕೋರ್ ಗೂಗಲ್ ಟೆನ್ಸರ್ GS101 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ.

Tech Tips: ಪೇಟಿಯಂ ಆ್ಯಪ್ ಮೂಲಕ ರೈಲು ಎಲ್ಲಿದೆ ಎಂದು ಟ್ರ್ಯಾಕ್ ಮಾಡುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ ಕೂಡ 12.2 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ–ವೈಡ್–ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಫೋನ್‌ನ ರಿಯರ್‌ ಕ್ಯಾಮೆರಾ 30fps ನಲ್ಲಿ 4K ವಿಡಿಯೋ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಸೆಲ್ಫಿ ಕ್ಯಾಮೆರಾ ಅಂದರೆ ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 4,306mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್‌ ಹೊಂದಿದೆ. ಬ್ಯಾಟರಿಗೆ ತಕ್ಕಂತೆ ಫಾಸ್ಟ್ ಚಾರ್ಜರ್ ಆಯ್ಕೆ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:43 am, Thu, 29 December 22