Flipkart’s Big Billion Days sale: ಕೇವಲ 30,000 ರೂ. ಒಳಗೆ ಸಿಗುತ್ತಿದೆ ನಥಿಂಗ್ ಫೋನ್, ಗೂಗಲ್ ಪಿಕ್ಸೆಲ್ ಫೋನ್: ಈ ಆಫರ್ ಮತ್ತೆ ಬರಲ್ಲ
ಗೂಗಲ್ ಪಿಕ್ಸೆಲ್ 6a (Google Pixel 6a) ಹಾಗೂ ನಥಿಂಗ್ ಫೋನ್ 1 (Nothing Phone 1) ಸ್ಮಾರ್ಟ್‌ಫೋನ್ ಮೇಲೆ ಬಂಪರ್ ಡಿಸ್ಕೌಂಟ್ ಘೋಷಿಸಲಾಗಿದೆ. ಕೇವಲ 30,000 ರೂ. ಒಳಗೆ ಈ ಸ್ಮಾರ್ಟ್‌ಫೋನ್ ಬಿಗ್ ಬಿಲಿಯನ್ ಡೇಸ್ ಸೇಲ್ನಲ್ಲಿ ಖರೀದಿಗೆ ಲಭ್ಯವಾಗುತ್ತಿದೆ.
ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ (Flipkart) ಬಿಗ್ ಬಿಲಿಯನ್ ಡೇಸ್ ಸೇಲ್ 2022 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಸೇಲ್ ಸೆಪ್ಟೆಂಬರ್ 23 ರಂ ದು ಲೈವ್ ಆಗಲಿದ್ದು, ಸೆಪ್ಟೆಂಬರ್ 30 ರವರೆಗೆ ನಡೆಯಲಿದೆ. ಆದರೆ, ಫ್ಲಿಪ್‌ಕಾರ್ಟ್ ಪ್ಲಸ್ ಬಳಕೆದಾರರಿಗೆ ಒಂದು ದಿನ ಮುಂಚಿತವಾಗಿ ಅಂದರೆ ಇಂದೇ ಸೇಲ್ ಪ್ರಾರಂಭವಾಗಿದೆ. ಈ ಸೇಲ್ನಲ್ಲಿ ಅಚ್ಚರಿ ಎಂಬಂತೆ ಇತ್ತೀಚೆಗಷ್ಟೆ ಬಿಡುಗಡೆ ಆದ ಗೂಗಲ್ ಪಿಕ್ಸೆಲ್ 6a (Google Pixel 6a) ಹಾಗೂ ನಥಿಂಗ್ ಫೋನ್ 1 (Nothing Phone 1) ಸ್ಮಾರ್ಟ್‌ಫೋನ್ ಮೇಲೆ ಬಂಪರ್ ಡಿಸ್ಕೌಂಟ್ ಘೋಷಿಸಲಾಗಿದೆ. ಕೇವಲ 30,000 ರೂ. ಒಳಗೆ ಈ ಸ್ಮಾರ್ಟ್‌ಫೋನ್ ಬಿಗ್ ಬಿಲಿಯನ್ ಡೇಸ್ ಸೇಲ್ನಲ್ಲಿ ಖರೀದಿಗೆ ಲಭ್ಯವಾಗುತ್ತಿದೆ.
ಭಾರತದಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 6GB +128GB ಸ್ಟೋರೇಜ್ ಆಯ್ಕೆಯೊಂದಿಗೆ 43,999 ರೂ. ಗೆ ಬಿಡುಗಡೆ ಆಗಿತ್ತು. ಬಿಗ್ ಬಿಲಿಯನ್ ಡೇಸ್ ಸೇಲ್ನಲ್ಲಿ ಈ ಫೋನನ್ನು ನೀವು ಕೇವಲ 27,699 ರೂ. ಗೆ ನಿಮ್ಮದಾಗಿಸಬಹುದು. ಅಂತೆಯೆ ನಥಿಂಗ್ ಫೋನ್ 1 6GB +128GB ಸ್ಟೋರೇಜ್ ಆಯ್ಕೆ 37,999 ರೂ. ರಿಲೀಸ್ ಆಗಿತ್ತು. ಇದನ್ನು ನೀವು 28,999 ರೂ. ಗೆ ಖರೀದಿಸಬಹುದು. ಇದೀಗ ಫ್ಲಿಪ್ಕಾರ್ಟ್ನಲ್ಲಿ ಐಸಿಐಸಿಐ ಮತ್ತು ಹೆಚ್ಡಿಎಫ್ಸಿ ಬ್ಯಾಂಕ್ ಕಾರ್ಡ್ ಮೂಲಕ ಈ ಫೋನನ್ನು ಖರೀದಿಸಿದರೆ ಶೇ. 10 ರಷ್ಟು ಡಿಸ್ಕೌಂಟ್ ಸಿಗಲಿದೆ.
ಏನು ವಿಶೇಷತೆ?:
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ–ಕೋರ್ ಗೂಗಲ್ ಟೆನ್ಸರ್ GS101 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ ಕೂಡ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ–ವೈಡ್–ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 4,306mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್ ಹೊಂದಿದೆ. ಬ್ಯಾಟರಿಗೆ ತಕ್ಕಂತೆ ಫಾಸ್ಟ್ ಚಾರ್ಜರ್ ಆಯ್ಕೆ ಕೂಡ ನೀಡಲಾಗಿದೆ.
ಇನ್ನು ನಥಿಂಗ್ ಫೋನ್ (1) 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ JN1 ಸೆನ್ಸಾರ್ ಹೊಂದಿದೆ. 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಬೆಂಬಲಿಸಲಿದೆ.