Galaxy A73: 108MP ಕ್ಯಾಮೆರಾದ ಹೊಸ ಸ್ಯಾಮ್​ಸಂಗ್ ಗ್ಯಾಲಕ್ಸಿ A73 5G ಫೋನ್ ಖರೀದಿಸಬಹುದೇ?

Samsung Galaxy A73 5G Review: ಬರೋಬ್ಬರಿ 108 ಮೆಗಾಪಿಕ್ಸೆಲ್ (108MP Camera Phone) ಪ್ರೈಮರಿ ಕ್ಯಾಮೆರಾದ ಹೊಸ ಸ್ಯಾಮ್​ಸಂಗ್ ಗ್ಯಾಲಕ್ಸಿ A73 5G ಫೋನ್ ಖರೀದಿಸಬಹುದೇ?, ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ

Galaxy A73: 108MP ಕ್ಯಾಮೆರಾದ ಹೊಸ ಸ್ಯಾಮ್​ಸಂಗ್ ಗ್ಯಾಲಕ್ಸಿ A73 5G ಫೋನ್ ಖರೀದಿಸಬಹುದೇ?
Samsung Galaxy A73 5G
Follow us
TV9 Web
| Updated By: Vinay Bhat

Updated on: Apr 10, 2022 | 6:35 AM

ಗ್ಯಾಲಕ್ಸಿ A ಸರಣಿಯಲ್ಲಿ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಸಾಧಿಸಿರುವ ಪ್ರಸಿದ್ಧ ಸ್ಯಾಮ್​ಸಂಗ್ ಕಂಪನಿ (Samsung) ಇತ್ತೀಚೆಗಷ್ಟೆ ಇದೇ ಗ್ಯಾಲಕ್ಸಿ A ಸರಣಿಯಲ್ಲಿ ಮತ್ತೆ ಎರಡು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿತ್ತು. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎ73 5ಜಿ ಮತ್ತು ಗ್ಯಾಲಕ್ಸಿ ಎ33 5ಜಿ (Galaxy A73 5G and Galaxy A33 5G) ಸ್ಮಾರ್ಟ್​​ಫೋನ್ ಆಗಿವೆ. ಈ ಪೈಕಿ ಗ್ಯಾಲಕ್ಸಿ A73 5G ಫೋನ್‌ ಇದೀಗ ಖರೀದಿಗೆ ಸಿಗುತ್ತಿದೆ. ಬರೋಬ್ಬರಿ 108 ಮೆಗಾಪಿಕ್ಸೆಲ್ (108MP Camera Phone) ಪ್ರೈಮರಿ ಕ್ಯಾಮೆರಾದ ಈ ಫೋನ್ ಸ್ಯಾಮ್​ಸಂಗ್ ಲೈವ್ ಈವೆಂಟ್​ನಲ್ಲಿ ಸೇಲ್ ಆಗುತ್ತಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಗ್ಯಾಲಕ್ಸಿ A73 5G ಡಸ್ಟ್‌ ಆಂಡ್‌ ವಾಟರ್‌ ಪ್ರೂಫ್‌ಗಾಗಿ IP67-ರೇಟಿಂಗ್‌ ಅನ್ನು ಹೊಂದಿವೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಹಾಗಾದ್ರೆ ಈ ಫೋನಿನ ಇತರೆ ವಿಶೇಷತೆ ಏನು?, ಬೆಲೆ ಎಷ್ಟು ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 8GB RAM ಮತ್ತು 128GB ಮಾದರಿಗೆ 41,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 256GB ರೂಪಾಂತರದ ಬೆಲೆ 44,999 ರೂ. ಆಗಿದೆ. ಇದು ಅವೆಸಮ್‌ ಗ್ರೆಯ್, ಅವೆಸಮ್‌ ಮಿಂಟ್ ಮತ್ತು ಅವೆಸಮ್‌ ವೈಟ್ ಕಲರ್ ಆಯ್ಕೆಗಳಲ್ಲಿ ಮಾರಾಟ ಆಗುತ್ತಿದೆ.

ಏನು ವಿಶೇಷತೆ?:

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು 120Hz ರಿಫ್ರೆಶ್ ರೇಟ್​​ನಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI 4.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ನಾಲ್ಕು ವರ್ಷಗಳವರೆಗೆ ಆಂಡ್ರಾಯ್ಡ್‌ OS ಅಪ್‌ಗ್ರೇಡ್‌ಗಳು ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ.

ಇದರ ಪ್ರಮುಖ ಹೈಲೇಟ್ ಕ್ಯಾಮೆರಾ ಆಗಿದ್ದು, ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 25W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈಯನ್ನು ಬೆಂಬಲಿಸಲಿದೆ.

ಖರೀದಿಸಬಹುದೇ?:

ಈಗ 108 ಮೆಗಾಫಿಕ್ಸೆಲ್​ನ ಸ್ಮಾರ್ಟ್​​ಫೋನ್​ಗಳು ಭಾರತಕ್ಕೆ ಒಂದರ ಹಿಂದೆ ಒಂದರಂತೆ ಕಾಲಿಡುತ್ತಿದೆ. ಮೊನ್ನೆಯಷ್ಟೆ ರಿಯಲ್ ಮಿ ತನ್ನ 108MP ನಲ್ಲಿ ರಿಯಲ್ ಮಿ 9 ಫೋನನ್ನು ಕೇವಲ 17,999 ರೂ. ಗೆ ಪರಿಚಯಿಸಿತ್ತು. ಅಲ್ಲದೆ 25,000 ರೂ. ಒಳಗೆ 108 ಮೆಗಾಫಿಕ್ಸೆಲ್​ನ ಆಕರ್ಷಕ ಫೋನ್​ಗಳು ಮಾರುಕಟ್ಟೆಯಲ್ಲಿವೆ. ಹೀಗಾಗಿ ನೀವು ಕ್ಯಾಮೆರಾಕ್ಕೆಂದು ಸ್ಯಾಮ್‌ಸಂಗ್‌ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಖರೀದಿ ಮಾಡಿದರೆ ಇದು ಉತ್ತಮ ಆಯ್ಕೆಯಲ್ಲ. ಇದರಲ್ಲಿರುವ ಉತ್ತಮ ಪ್ರೊಸೆಸರ್ ಜೊತೆಗೆ ಗುಣಮಟ್ಟದ ಡಿಸ್ ಪ್ಲೇ ನಿಮಗೆ ಹೊಸ ಅನುಭವ ನೀಡುತ್ತದೆ.

Air Coolers below Rs 5,000: ಈ ಬೇಸಿಗೆಯಲ್ಲಿ ಕೇವಲ 5,000 ರೂ. ಒಳಗೆ ಬೆಸ್ಟ್ ಕೂಲರ್ ಖರೀದಿಸಿ ಕೂಲ್ ಆಗಿರಿ

Mi Fan Festival 2022: ಶವೋಮಿಯಿಂದ ಎಂಐ ಫ್ಯಾನ್ ಫೆಸ್ಟಿವಲ್ 2022: ಆಫರ್, ಡಿಸ್ಕೌಂಟ್ ಬಗ್ಗೆ ಇಲ್ಲಿದೆ ಮಾಹಿತಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ