Vivo Y15s: ಬಜೆಟ್ ಪ್ರಿಯರು ಫುಲ್ ಶಾಕ್: ಅತಿ ಕಡಿಮೆ ಬೆಲೆಗೆ ವಿವೋದಿಂದ ಹೊಸ ಸ್ಮಾರ್ಟ್​ಫೋನ್ ರಿಲೀಸ್

| Updated By: Vinay Bhat

Updated on: Feb 19, 2022 | 7:28 AM

Vivo Y15s Price: ವಾರಗಳ ಹಿಂದೆಯಷ್ಟೆ ಬಜೆಟ್ ಪ್ರಿಯರನ್ನು ಗುರಿಯಾಗಿಸಿಕೊಂಡು ಬಿಡುಗಡೆ ಮಾಡಿದ್ದ ವಿವೋ T1 5G ಸ್ಮಾರ್ಟ್‌ಫೋನ್‌ ತನ್ನ ಸೇಲ್ ಪ್ರಾರಂಭಿಸಿದ ಬೆನ್ನಲ್ಲೇ ಇದೀಗ, ಮತ್ತೊಂದು ಹೊಸ ವಿವೋ ವೈ15ಎಸ್​​ 2021 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

Vivo Y15s: ಬಜೆಟ್ ಪ್ರಿಯರು ಫುಲ್ ಶಾಕ್: ಅತಿ ಕಡಿಮೆ ಬೆಲೆಗೆ ವಿವೋದಿಂದ ಹೊಸ ಸ್ಮಾರ್ಟ್​ಫೋನ್ ರಿಲೀಸ್
Vivo Y15s
Follow us on

ಕಳೆದ ತಿಂಗಳು ಹೊಸ ವರ್ಷದ ಪ್ರಯುಕ್ತ ಜನವರಿಯಲ್ಲಿ ಭಾರತದಲ್ಲಿ ಬರೋಬ್ಬರಿ ಐದು ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಪ್ರಸಿದ್ಧ ವಿವೋ (Vivo) ಕಂಪನಿ ಫೆಬ್ರವರಿ ತಿಂಗಳ ಎರಡನೇ ಫೋನ್ ಅನಾವರಣ ಮಾಡಿದೆ. ವಾರಗಳ ಹಿಂದೆಯಷ್ಟೆ ಬಜೆಟ್ ಪ್ರಿಯರನ್ನು ಗುರಿಯಾಗಿಸಿಕೊಂಡು ಬಿಡುಗಡೆ ಮಾಡಿದ್ದ ವಿವೋ T1 5G ಸ್ಮಾರ್ಟ್‌ಫೋನ್‌ ತನ್ನ ಸೇಲ್ ಪ್ರಾರಂಭಿಸಿದ ಬೆನ್ನಲ್ಲೇ ಇದೀಗ, ಮತ್ತೊಂದು ಹೊಸ ವಿವೋ ವೈ15ಎಸ್​​ 2021 (Vivo Y15s) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ (Smartphone) ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ವಿಶೇಷ ಎಂದರೆ ಇದುಕೂಡ ಬಜೆಟ್ ಬೆಲೆಯ ಫೋನ್ ಆಗಿದೆ.

ಭಾರತದಲ್ಲಿ ವಿವೋ Y15s ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 3GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕಾಗಿ ಕೇವಲ 10,990 ರೂ. ನಿಗದಿ ಮಾಡಲಾಗಿದೆ. ಇದು ಮಿಸ್ಟಿಕ್ ಬ್ಲೂ ಮತ್ತು ವೇವ್ ಗ್ರೀನ್ ಬಣ್ಣಗಳಲ್ಲಿ ಮಾರಾಟ ಆಗಲಿದೆ. ಈ ಫೋನ್‌ ವಿವೋ ಇಂಡಿಯಾ ಇ-ಸ್ಟೋರ್ ಮತ್ತು ದೇಶದ ವಿವಿಧ ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಸಿಗುತ್ತದೆ.

ಇನ್ನು ಈ ಫೋನಿನ ವಿಶೇಷತೆಗಳ ಬಗ್ಗೆ ನೋಡುವುದಾದರೆ, ವಿವೋ Y15s ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. 3GB RAM ಜೊತೆಗೆ ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 (Go ಆವೃತ್ತಿ) ನಲ್ಲಿ ಫನ್‌ಟಚ್‌ OS 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮೆರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ನೀಡಲಾಗಿದೆ. ಇದು f/2.0 ಲೆನ್ಸ್‌ನೊಂದಿಗೆ ಬರುತ್ತದೆ.

ವಿವೋ Y15s ಸ್ಮಾರ್ಟ್‌ಫೋನ್‌ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ Wi-Fi, ಬ್ಲೂಟೂತ್ v5.0, GPS/ A-GPS, FM ರೇಡಿಯೋ, ಮೈಕ್ರೋ-USB ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿರುತ್ತದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅಳವಡಿಸಲಾಗಿದೆ.

WhatsApp: ಇದೀಗ ವಾಟ್ಸ್​ಆ್ಯಪ್​ನಲ್ಲಿ ಆಡಿಯೋ ಅಥವಾ ವಿಡಿಯೋ ಕಾಲ್ ರೆಕಾರ್ಡ್ ಮಾಡಿ: ಹೇಗೆ ಗೊತ್ತೇ?