Google Pixel 6a
ಸರ್ಚ್ ಇಂಜಿನ್ ದೈತ್ಯ ಗೂಗಲ್ (Google) ತನ್ನ ವಾರ್ಷಿಕ ಸಮ್ಮೆಳನ ಗೂಗಲ್ I/O ನಲ್ಲಿ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 6ಎ (Google Pixel 6a) ಸ್ಮಾರ್ಟ್‌ಪೋನನ್ನು ಬಿಡುಗಡೆ ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಕಳೆದ ಪಿಕ್ಸೆಲ್ 6 ಮತ್ತು ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ಗಳಿಗೆ (Smartphone) ಹೋಲಿಸಿದರೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಆದರೆ, ಇದು ಭಾರತದಲ್ಲಿ ಅನಾವರಣಗೊಳ್ಳುವ ಬಗ್ಗೆ ಕಂಪನಿ ಬಹಿರಂಗ ಪಡಿಸಿರಲಿಲ್ಲ. ಇದೀಗ ಗೂಗಲ್ ಪಿಕ್ಸೆಲ್ 6a ಬಿಡುಗಡೆ ಕಾರ್ಯಕ್ರಮವು ಭಾರತದಲ್ಲಿ ಇದೇ ಜುಲೈ ತಿಂಗಳಿನಲ್ಲಿ ಏರ್ಪಡಲಿದೆ ಎಂದು ಹೇಳಲಾಗಿದೆ. ಅಲ್ಲದೆ 15ನೇ ತಾರೀಖಿನಂದು ದೇಶದಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬಿಡುಗಡೆ ಕಾರ್ಯಕ್ರಮದ ಜರುಗಲಿದೆಯಂತೆ.
- ಜಾಗತೀಕ ಮಾರುಕಟ್ಟೆಯಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬೆಲೆ $449 ಆಗಿದೆ. ಭಾರತೀಯ ರೂಪಾಯಿಗಳ ಬೆಲೆಯಲ್ಲಿ ಇದರ ಬೆಲೆ ಸರಿಸುಮಾರು 34,800 ರೂ. ಗಳಾಗಬಹುದು ಎಂದು ಅಂದಾಜಿಸಬಹುದು.
- ಈ ಸ್ಮಾರ್ಟ್‌ಫೋನ್ ಚಾಕ್, ಚಾರ್ಕೋಲ್ ಮತ್ತು ಸೇಜ್ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಜುಲೈ 21 ರಿಂದ ಯುಎಸ್‌ನಲ್ಲಿ ಫ್ರೀ ಆರ್ಡರ್‌ಗೆ ಲಭ್ಯವಿರುತ್ತದೆ ಎಂದು ಕಂಪನಿ ತಿಳಿಸಿದೆ.
- ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಮತ್ತು 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
- ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ. 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.
- ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
- ಈ ಫೋನ್‌ನ ರಿಯರ್ ಕ್ಯಾಮೆರಾ 30fps ನಲ್ಲಿ 4K ವಿಡಿಯೋ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಸೆಲ್ಫಿ ಕ್ಯಾಮೆರಾ ಅಂದರೆ ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.
- ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 4,410mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ