Kannada News Technology Google launched the Pixel 6a at its IO 2022 developer keynote event Check specs top features and price
Google Pixel 6a: ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬಿಡುಗಡೆ: ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ
I/O 2022 developer keynote event: ಗೂಗಲ್ I/O ನಲ್ಲಿ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 6ಎ (Google Pixel 6a) ಸ್ಮಾರ್ಟ್‌ಪೋನನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಪಿಕ್ಸೆಲ್ 6 ಮತ್ತು ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. 4,410mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ.
Google Pixel 6a
Follow us on
ಸರ್ಚ್ ಇಂಜಿನ್ ದೈತ್ಯ ಗೂಗಲ್ ತನ್ನ ವಾರ್ಷಿಕ ಸಮ್ಮೆಳನ ಗೂಗಲ್I/O ನಲ್ಲಿ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 6ಎ (Google Pixel 6a) ಸ್ಮಾರ್ಟ್‌ಪೋನನ್ನು ಬಿಡುಗಡೆ ಮಾಡಿದೆ. ಈ ಮೂಲಕ ಗೂಗಲ್ ಪಿಕ್ಸೆಲ್ 6 ಸರಣಿಗೆ ಇದೀಗ ಹೊಸದಾಗಿ 6a ಸ್ಮಾರ್ಟ್‌ಫೋನ್ ಸೇರಿಕೊಂಡಿದೆ. ಇದು ವಿಶೇಷವಾಗಿ ಕಂಪನಿಯ ಇನ್-ಹೌಸ್ ಟೆನ್ಸರ್ ಪ್ರೊಸೆಸರ್ ಮತ್ತು ಟೈಟಾನ್ ಎಂ2 ಸೆಕ್ಯುರಿಟಿ ಕೊಪ್ರೊಸೆಸರ್‌ನಿಂದ ಚಾಲಿತವಾಗಿದೆ. ಮಾತ್ರವಲ್ಲದೇ, ಕಳೆದ ಪಿಕ್ಸೆಲ್ 6 ಮತ್ತು ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. 4,410mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ. ಅಲ್ಲದೆ 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ನೀಡುವ ಬ್ಯಾಟರಿ ಸೇವ್ ಮೋಡ್ ಅನ್ನು ಒಳಗೊಂಡಿದೆ. ಇದರ ಜೊತೆಗೆ ಗೂಗಲ್ ಪಿಕ್ಸೆಲ್ ಟ್ಯಾಬ್ಲೆಟ್ (Google Pixel Tablet) ಮೊದಲ ನೋಟವನ್ನೂ ಇದೇ ವೇಳೆ ಅನಾವರಣಗೊಳಿಸಲಾಗಿದೆ. ಹಾಗಾದ್ರೆ ಈ ಫೋನಿನ ವಿಶೇಷತೆ ಏನು ಎಂಬುದನ್ನು ನೋಡೋಣ.
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ ಬೆಲೆ $449 ಆಗಿದೆ. ಭಾರತೀಯ ರೂಪಾಯಿಗಳ ಬೆಲೆಯಲ್ಲಿ ಇದರ ಬೆಲೆ ಸರಿಸುಮಾರು 34,800 ರೂ.ಗಳಾಗಬಹುದು ಎಂದು ಅಂದಾಜಿಸಬಹುದು. ಆದರೆ, ಇದೀಗ ಭಾರತದ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನಿನ ಬೆಲೆ ಮತ್ತು ಲಭ್ಯತೆಯನ್ನು ಗೂಗಲ್ ಪ್ರಕಟಿಸಿಲ್ಲ.
ಈ ಸ್ಮಾರ್ಟ್‌ಫೋನ್ ಚಾಕ್, ಚಾರ್ಕೋಲ್ ಮತ್ತು ಸೇಜ್ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಜುಲೈ 21 ರಿಂದ ಯುಎಸ್‌ನಲ್ಲಿ ಫ್ರೀ ಆರ್ಡರ್‌ಗೆ ಲಭ್ಯವಿರುತ್ತದೆ ಎಂದು ಕಂಪನಿ ತಿಳಿಸಿದೆ.
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 6.1 ಇಂಚಿನ ಫುಲ್ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಮತ್ತು 60Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ. 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ.
ಇದನ್ನೂ ಓದಿ
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಈ ಫೋನ್‌ನ ರಿಯರ್ ಕ್ಯಾಮೆರಾ 30fps ನಲ್ಲಿ 4K ವಿಡಿಯೋ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಸೆಲ್ಫಿ ಕ್ಯಾಮೆರಾ ಅಂದರೆ ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.
ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್‌ಫೋನ್ 4,410mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ.