Google Pay: ಗೂಗಲ್ ಪೇಯಿಂದ ಎಚ್ಚರಿಕೆ: ಈ ಅಪ್ಲಿಕೇಷನ್ ಬಳಸುತ್ತಿದ್ದರೆ ತಕ್ಷಣ ಡಿಲೀಟ್ ಮಾಡಿ

Google Pay Alert Message: ಇಂದು ಸೈಬರ್ ಭದ್ರತೆ ಎಷ್ಟೇ ಬಲಿಷ್ಠವಾಗಿದ್ದರೂ ಬಳಕೆದಾರರು ಮಾಡುವ ಸಣ್ಣಪುಟ್ಟ ತಪ್ಪುಗಳು ಅಪರಾಧಿಗಳಿಗೆ ವರದಾನವಾಗಿ ಪರಿಣಮಿಸುತ್ತದೆ. ಈ ಹಿನ್ನಲೆಯಲ್ಲಿ ವಿಶ್ವದ ಅತ್ಯುತ್ತಮ UPI ಆ್ಯಪ್​ಗಳಲ್ಲಿ ಒಂದಾದ ಗೂಗಲ್ ಪೇ ತನ್ನ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

Google Pay: ಗೂಗಲ್ ಪೇಯಿಂದ ಎಚ್ಚರಿಕೆ: ಈ ಅಪ್ಲಿಕೇಷನ್ ಬಳಸುತ್ತಿದ್ದರೆ ತಕ್ಷಣ ಡಿಲೀಟ್ ಮಾಡಿ
Google Pay
Follow us
Vinay Bhat
|

Updated on: Nov 25, 2023 | 12:43 PM

ಗೂಗಲ್ ಪೇ (Google Pay) ದೇಶದ ಅತ್ಯಂತ ಜನಪ್ರಿಯ ಯುಪಿಐ ಪಾವತಿ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಭಾರತದಲ್ಲಿನ ಮಾರುಕಟ್ಟೆ ಷೇರಿಗೆ ಸಂಬಂಧಿಸಿದಂತೆ ಈ ಅಪ್ಲಿಕೇಶನ್ ಟಾಪ್ ಐದರಲ್ಲಿ ಹೆಚ್ಚು ಬಳಸಿದ ಯುಪಿಐ ಅಪ್ಲಿಕೇಶನ್‌ಗಳಲ್ಲಿ ಸ್ಥಾನ ಪಡೆದಿದೆ. ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಫೋನ್ ಸಂಖ್ಯೆಯನ್ನು ನಮೋದಿಸಿ ಇದರ ಮೂಲಕ ಸುಲಭವಾಗಿ ವಹಿವಾಟುಗಳನ್ನು ನಡೆಸುತ್ತಿದ್ದಾರೆ. ಇದರ ನಡುವೆ ಆನ್‌ಲೈನ್ ವಂಚನೆಗಳೂ ಹೆಚ್ಚುತ್ತಿವೆ. ಸೈಬರ್ ಭದ್ರತೆ ಎಷ್ಟೇ ಬಲಿಷ್ಠವಾಗಿದ್ದರೂ ಬಳಕೆದಾರರು ಮಾಡುವ ಸಣ್ಣಪುಟ್ಟ ತಪ್ಪುಗಳು ಅಪರಾಧಿಗಳಿಗೆ ವರದಾನವಾಗಿ ಪರಿಣಮಿಸುತ್ತದೆ. ಈ ಹಿನ್ನಲೆಯಲ್ಲಿ ವಿಶ್ವದ ಅತ್ಯುತ್ತಮ UPI ಆ್ಯಪ್​ಗಳಲ್ಲಿ ಒಂದಾದ ಗೂಗಲ್ ಪೇ ತನ್ನ ಬಳಕೆದಾರರಿಗೆ ಎಚ್ಚರಿಕೆಯನ್ನು ನೀಡಿದೆ.

ಯುಪಿಐ ಪಾವತಿ ಸಮಯದಲ್ಲಿ ಕೆಲವು ಆ್ಯಪ್‌ಗಳನ್ನು ಬಳಸಬಾರದು ಎಂದು ಗೂಗಲ್ ಪೇ ಹೇಳಿದೆ. ಈ ಆ್ಯಪ್‌ಗಳು ನಿಮ್ಮ ಫೋನ್‌ನಲ್ಲಿದ್ದರೆ, ಖಾತೆಗಳನ್ನು ಹ್ಯಾಕ್ ಮಾಡುವ ಅಪಾಯವಿದೆ ಎಂದಿದೆ. UPI ವಹಿವಾಟುಗಳಿಗಾಗಿ ಗೂಗಲ್ ಪೇ ಅತ್ಯಂತ ವಿಶ್ವಾಸಾರ್ಹ ಮತ್ತು ಸುರಕ್ಷಿತ ಅಪ್ಲಿಕೇಶನ್‌ಗಳಲ್ಲಿ ಒಂದಾಗಿದೆ. ಅದಕ್ಕಾಗಿಯೇ ಇದು ಜನಪ್ರಿಯವಾಗಿದೆ. ಬಳಕೆದಾರರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲು ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ವಂಚನೆಯನ್ನು ತಡೆಯುವ ಕೆಲಸ ಮಾಡುತ್ತಿದೆ. ನೈಜ ಸಮಯದಲ್ಲಿ ಮೋಸದ ವಹಿವಾಟುಗಳನ್ನು ಪತ್ತೆಹಚ್ಚಲು ಇದು ಸಹಾಯ ಮಾಡುತ್ತದೆ.

Cyber Crime: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಈ ಸ್ಕ್ಯಾಮ್​ಗಳ ಬಗ್ಗೆ ಎಚ್ಚರದಿಂದಿರಿ

ಇದನ್ನೂ ಓದಿ
Image
ಭಾರತಕ್ಕೆ ಬಂತು ಸ್ಯಾಮ್​ಸಂಗ್​ನ ಬಜೆಟ್ ಬೆಲೆಯ ಬಂಪರ್ ಸ್ಮಾರ್ಟ್​ಫೋನ್
Image
AI ಅನ್ನು ಅಭಿವೃದ್ಧಿಪಡಿಸಲು ಭಾರತೀಯ ಸರ್ಕಾರಕ್ಕೆ ಸಹಾಯ ಮಾಡಲಿರುವ ಗೂಗಲ್
Image
ವಾರದಲ್ಲಿ 3 ದಿನ ಕೆಲಸ ಸಾಧ್ಯ, ಉದ್ಯೋಗವೇ ಜೀವನದ ಉದ್ದೇಶವಲ್ಲ: ಬಿಲ್ ಗೇಟ್ಸ್
Image
ಅದ್ಭುತ ಕ್ಯಾಮೆರಾ, ಫಾಸ್ಟ್ ಚಾರ್ಜರ್: ಒಪ್ಪೋ ರೆನೋ 11 ಸರಣಿ ಫೋನ್ ಬಿಡುಗಡೆ

ಆದಾಗ್ಯೂ, ತಮ್ಮ ಫೋನ್‌ಗಳಲ್ಲಿ ಸ್ಕ್ರೀನ್ ಹಂಚಿಕೆ (ಸ್ಕ್ರೀನ್ ಶೇರಿಂಗ್) ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸಿದಾಗ ಗೂಗಲ್ ಪೇ ಬಳಸಬಾರದು ಎಂಬ ಎಚ್ಚರಿಕೆ ಸಂದೇಶವನ್ನು ಕಳುಹಿಸಿದೆ. ಗೂಗಲ್ ಪೇ ಅನ್ನು ಬಳಸುವಾಗ ನೀವು ಯಾವುದೇ ಸಂದರ್ಭಗಳಲ್ಲಿ AnyDesk, TeamViewer ನಂತಹ ಯಾವುದೇ ಸ್ಕ್ರೀನ್ ಹಂಚಿಕೆ ಅಪ್ಲಿಕೇಶನ್ ಅನ್ನು ಬಳಸಬಾರದು ಎಂದು ಹೇಳಿದೆ.

ಆಫೀಸು ಕೆಲಸದ ಸಂಧರ್ಭ ಏನಾದರು ತೊಂದರೆ ಆಯಿತು ಎಂದಾದರೆ, ರಿಮೋಟ್ ಕಂಟ್ರೊಲ್ ತೆಗೆದುಕೊಳ್ಳಲು ಸ್ಕ್ರೀನ್ ಹಂಚಿಕೆ ಅಪ್ಲಿಕೇಶನ್‌ಗಳು ಉಪಯುಕ್ತವಾಗಿವೆ. ಆದರೆ ಕೆಲವು ಕಂಪನಿಗಳು ಇದರಿಂದ ಬಳಕೆದಾರರನ್ನು ಮೋಸಗೊಳಿಸಬಹುದು. ಬಳಕೆದಾರರು ಬ್ಯಾಂಕಿಂಗ್ ವಹಿವಾಟು ಮಾಡುವಾಗ ಬ್ಯಾಂಕಿಂಗ್ ಮಾಹಿತಿಯನ್ನು ಕದಿಯುವ ಸಾಧ್ಯತೆಯಿದೆ. ಈ ಬಗ್ಗೆ ಎಚ್ಚರಿಕೆಯಿಂದಿರಿ ಎಂದು ಗೂಗಲ್ ಹೇಳಿದೆ.

”ಗೂಗಲ್ ಪೇ ಯಾವುದೇ ಕಾರಣಕ್ಕೂ ಥರ್ಡ್ ಪಾರ್ಟಿ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಅಥವಾ ಇನ್‌ಸ್ಟಾಲ್ ಮಾಡಲು ನಿಮ್ಮನ್ನು ಕೇಳುವುದಿಲ್ಲ. ನೀವು ಈಗಾಗಲೇ ಈ ಸ್ಕ್ರೀನ್ ಹಂಚಿಕೆ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿದ್ದರೆ, ನೀವು ಗೂಗಲ್ ಪೇ ಅನ್ನು ಬಳಸುವ ಮೊದಲು ಅವುಗಳನ್ನು ಕ್ಲೋಸ್ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಿ. ಗೂಗಲ್ ಪೇನ ಪ್ರತಿನಿಧಿಯಾಗಿರುವ ಯಾರಾದರೂ ನಿಮ್ಮನ್ನು ಫೋನ್ ಮೂಲಕ ಸಂಪರ್ಕಿಸಲು ಅಥವಾ ನೇರವಾಗಿ ಈ ರೀತಿಯ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಸಲಹೆ ತಕ್ಷಣವೇ ಅವುಗಳನ್ನು ಅನ್‌ಇನ್‌ಸ್ಟಾಲ್ ಮಾಡಿ,” ಎಂದು ಗೂಗಲ್ ಪೇ ಹೇಳಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ