AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pixel 6 series: ಬೊಂಬಾಟ್ ಕ್ಯಾಮೆರಾ, ಭರ್ಜರಿ ಬ್ಯಾಟರಿ: ಗೂಗಲ್ ಪಿಕ್ಸೆಲ್ 6 ಸರಣಿ ಸ್ಮಾರ್ಟ್​ಫೋನ್ ಇಂದು ಬಿಡುಗಡೆ

Pixel 6, Pixel 6 Pro Phones to Launch Today: ಗೂಗಲ್‌ ಪಿಕ್ಸಲ್ 6 ಫೋನ್‌ ಸರಣಿಯು ಗೂಗಲ್‌ ಪಿಕ್ಸಲ್ 6 ಮತ್ತು ಗೂಗಲ್ ಪಿಕ್ಸಲ್ 6 ಪ್ರೊ ಸ್ಮಾರ್ಟ್​ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗಗೊಂಡಿಲ್ಲ. ಬಿಡುಗಡೆ ಕಾರ್ಯಕ್ರಮವು (ಭಾರತೀಯ ಕಾಲಮಾನ) ರಾತ್ರಿ 10:30ಕ್ಕೆ ಆರಂಭವಾಗಲಿದೆ.

Google Pixel 6 series: ಬೊಂಬಾಟ್ ಕ್ಯಾಮೆರಾ, ಭರ್ಜರಿ ಬ್ಯಾಟರಿ: ಗೂಗಲ್ ಪಿಕ್ಸೆಲ್ 6 ಸರಣಿ ಸ್ಮಾರ್ಟ್​ಫೋನ್ ಇಂದು ಬಿಡುಗಡೆ
Pixel 6, Pixel 6 Pro Phones
TV9 Web
| Updated By: Vinay Bhat|

Updated on:Oct 19, 2021 | 2:06 PM

Share

ಗೂಗಲ್ (Google) ಸಂಸ್ಥೆಯ ಬಹುನಿರೀಕ್ಷಿತ ಗೂಗಲ್ ಪಿಕ್ಸಲ್ 6 ಸರಣಿಯ (Google Pixel 6 series) ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿವೆ. ಗೂಗಲ್‌ ಪಿಕ್ಸಲ್ 6 ಫೋನ್‌ ಸರಣಿಯು ಗೂಗಲ್‌ ಪಿಕ್ಸಲ್ 6 ಮತ್ತು ಗೂಗಲ್ ಪಿಕ್ಸಲ್ 6 ಪ್ರೊ (Google Pixel 6 and Google Pixel 6 Pro) ಹೆಸರಿನ ಎರಡು ಮಾಡೆಲ್‌ಗಳನ್ನು ಒಳಗೊಂಡಿರಲಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿರುವ ಈ ಫೋನ್ ಇಂದು (ಅ.19) ಅಧಿಕೃತವಾಗಿ ಲಾಂಚ್ ಆಗಲಿದೆ. ಬಿಡುಗಡೆ ಕಾರ್ಯಕ್ರಮವು (ಭಾರತೀಯ ಕಾಲಮಾನ) ರಾತ್ರಿ 10:30ಕ್ಕೆ ಆರಂಭವಾಗಲಿದೆ. ಗೂಗಲ್‌ ಪಿಕ್ಸಲ್ 6 ಸರಣಿಯ ಬಿಡುಗಡೆ ಕಾರ್ಯಕ್ರಮವನ್ನು ಆನ್‌ಲೈನ್‌ ಮೂಲಕ ವೀಕ್ಷಣೆ ಮಾಡಬಹುದು. ಗೂಗಲ್‌ನ ಅಧಿಕೃತ ಯೂಟ್ಯೂಬ್‌ (Youtube) ಚಾನಲ್‌ ಹಾಗೂ ಡೆಡಿಕೇಟೆಡ್ ಪೇಜ್‌ನ ಮೂಲಕವೂ ವೀಕ್ಷಿಸಬಹುದಾಗಿದೆ.

ಈ ಎರಡು ಸ್ಮಾರ್ಟ್​ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ ಗೂಗಲ್ ಪಿಕ್ಸೆಲ್ 6 ಬೆಲೆ ಯುರೋ 649 ಅಂದರೆ ಭಾರತದಲ್ಲಿ ಸರಿಸುಮಾರು 56,200 ರೂ. ಎನ್ನಬಹುದು. ಪಿಕ್ಸೆಲ್ 6 ಪ್ರೊ ಯುರೋ 899 ಭಾರತದಲ್ಲಿ ಸರಿಸುಮಾರು 77,900 ರೂ. ಎಂದು ಊಹಿಸಲಾಗಿದೆ.

ಏನು ವಿಶೇಷತೆ?:

ಗೂಗಲ್ ಪಿಕ್ಸೆಲ್ 6 ಪ್ರೊ 6.7-ಇಂಚಿನ LTPO OLED ಡಿಸ್‌ಪ್ಲೇಯನ್ನು ಒಳಗೊಂಡಿರಲಿದೆ. ಇನ್ನು ಈ ಡಿಸ್‌ಪ್ಲೇಯ ರೀಫ್ರೇಶ್ ರೇಟ್ 10Hz ನಿಂದ 120Hz ವರೆಗಿನ ಇರಲಿದೆ ಎಂದು ವರದಿಯಾಗಿದೆ. ಇನ್ನು ಪಿಕ್ಸೆಲ್ 6 ಫೋನ್ 6.4 ಇಂಚಿನ OLED ಡಿಸ್‌ಪ್ಲೇಯನ್ನು ಪಡೆದಿರಲಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳನ್ನು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್‌ನಿಂದ ರಕ್ಷಿಸಲಾಗಿದೆ ಮತ್ತು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಹೊಂದಿದೆ.

ಈ ಎರಡೂ ಫೋನ್‌ಗಳ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿವೆ ಎಂದು ಹೇಳಲಾಗಿದೆ. ಇತರೆ ಸ್ಮಾರ್ಟ್‌ಫೋನ್‌ಗಳಿಗಿಂತ 150 ಪ್ರತಿಶತ ಹೆಚ್ಚು ಬೆಳಕನ್ನು ಸೆರೆ ಹಿಡಿಯುತ್ತದೆ. ಸೆಕೆಂಡಿರಿ ಕ್ಯಾಮೆರಾವು 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎನ್ನಲಾಗಿದೆ. ಅತ್ಯುತ್ತಮ ಜೂಮ್ ಸೌಲಭ್ಯ ಹೊಂದಿರಲಿವೆ. ಹಾಗೆಯೇ ಪಿಕ್ಸೆಲ್ 6 ಮತ್ತು ಪಿಕ್ಸೆಲ್ 6 ಪ್ರೊ ಗಳಲ್ಲಿ ಮ್ಯಾಜಿಕ್ ಎರೇಸರ್ ಫೀಚರ್ ಒಳಗೊಂಡಿರಲಿವೆ.

ಗೂಗಲ್ ಪಿಕ್ಸೆಲ್ 6 ಮತ್ತು ಪಿಕ್ಸೆಲ್ 6 ಪ್ರೊ 30W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ವರದಿಯಾಗಿದೆ. ಇನ್ನು ವಾಯರ್‌ಲೆಸ್‌ ಚಾರ್ಜಿಂಗ್‌ಗೆ ಸಂಬಂಧಿಸಿದಂತೆ, ಪಿಕ್ಸೆಲ್ 6 ಪ್ರೊ 23W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಹಾಗೆಯೇ ಗೂಗಲ್ ಪಿಕ್ಸೆಲ್ 6 ಫೋನ್ 21W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಒಳಗೊಂಡಿರಲಿದೆ ಎನ್ನಲಾಗಿದೆ.

Apple Event: ಭಾರತದಲ್ಲಿ ಆಪಲ್‌ ಮ್ಯಾಕ್‌ಬುಕ್‌ ಪ್ರೊ, ಏರ್​​ಪಾಡ್ಸ್ ಮಾಡೆಲ್‌ ಬಿಡುಗಡೆ: ಏನು ವಿಶೇಷತೆ?

Battery Life Smartphones: ನೀವು ಕಡಿಮೆ ಬೆಲೆಗೆ ಬಿಗ್ ಬ್ಯಾಟರಿಯ ಬೆಸ್ಟ್ ಸ್ಮಾರ್ಟ್​ಫೋನ್ ಹುಡುಕುತ್ತಿದ್ದರೆ ಇಲ್ಲಿದೆ ನೋಡಿ

(Google Pixel 6 and Google Pixel 6 Pro powered by its home-grown Tensor launch today)

Published On - 2:05 pm, Tue, 19 October 21

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ