Google Pixel 6a: ಧಮಾಕ ಆಫರ್ ಮಿಸ್ ಮಾಡ್ಬೇಡಿ: ಕೇವಲ 2,999 ರೂ. ಗೆ ಖರೀದಿಸಿ ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್​ಫೋನ್

Flipkart Big Bachat Dhamaal sale: ಫ್ಲಿಪ್​ಕಾರ್ಟ್​ನಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಮೇಲೆ ಶೇ. 29 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಈ ಮೂಲಕ ಡಿಸ್ಕೌಂಟ್ ಪಡೆದುಕೊಂಡು 30,999 ರೂ. ಗೆ ಸೇಲ್ ಆಗುತ್ತಿದೆ. 13,000 ರೂ. ಗಳ ರಿಯಾಯಿತಿ ನೀಡಲಾಗಿದೆ.

Google Pixel 6a: ಧಮಾಕ ಆಫರ್ ಮಿಸ್ ಮಾಡ್ಬೇಡಿ: ಕೇವಲ 2,999 ರೂ. ಗೆ ಖರೀದಿಸಿ ಗೂಗಲ್‌ ಪಿಕ್ಸಲ್‌ 6a ಸ್ಮಾರ್ಟ್​ಫೋನ್
google pixel 6a
Follow us
Vinay Bhat
|

Updated on: Apr 01, 2023 | 1:17 PM

ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ (Flipkart) ನಲ್ಲಿ ಬಿಗ್ ಬಚತ್ ಧಮಾಲ್ ಸೇಲ್ (Big Bachat Dhamaal sale) ನಡೆಯುತ್ತಿದೆ. ಈ ಮೇಳದಲ್ಲಿ ಸ್ಮಾರ್ಟ್​ಫೋನ್​ಗಳು ಸೇರಿದಂತೆ ಲ್ಯಾಪ್​ಟಾಪ್, ಬಟ್ಟೆಗಳು ಬಹುತೇಕ ಎಲ್ಲ ಎಲೆಕ್ಟ್ರಾನಿಕ್ ವಸ್ತುಗಳು ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಆಗುತ್ತಿದೆ. ಆ್ಯಪಲ್, ಸ್ಯಾಮ್​ಸಂಗ್, ಗೂಗಲ್, ರಿಯಲ್ ಮಿ, ಒನ್​ಪ್ಲಸ್ ಸೇರಿದಂತೆ ಅನೇಕ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳ ಮೇಲೆ ಆಕರ್ಷಕ ರಿಯಾಯಿತಿ ದರದಲ್ಲಿ ಮಾರಾಟ ಆಗುತ್ತಿದೆ. ಮುಖ್ಯವಾಗಿ ಗೂಗಲ್ ಕಂಪನಿಯ ಗೂಗಲ್ ಪಿಕ್ಸೆಲ್ 6ಎ (Google Pixel 6a) ಸ್ಮಾರ್ಟ್​ಫೋನ್ ಊಹಿಸಲಾಗದ ದರಕ್ಕೆ ಸೇಲ್ ಆಗುತ್ತಿದೆ. 43,999 ರೂ. ಗೆ ಅನಾವರಣಗೊಂಡ ಈ ಫೋನನ್ನು ಇದೀಗ ಕೇವಲ 2,999 ರೂ. ಗೆ ನಿಮ್ಮದಾಗಿಸಬಹುದು.

ಫ್ಲಿಪ್​ಕಾರ್ಟ್​ನಲ್ಲಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಮೇಲೆ ಶೇ. 29 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಈ ಮೂಲಕ ಡಿಸ್ಕೌಂಟ್ ಪಡೆದುಕೊಂಡು 30,999 ರೂ. ಗೆ ಸೇಲ್ ಆಗುತ್ತಿದೆ. 13,000 ರೂ. ಗಳ ರಿಯಾಯಿತಿ ನೀಡಲಾಗಿದೆ. ಇದರ ಜೊತೆಗೆ ಫೆಡರಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್​ದಾರರು 5,000 ರೂ. ಗಳ ಮೇಲಿನ ಆರ್ಡರ್​ಗೆ 3,000 ರೂ. ವರೆಗಿನ ಡಿಸ್ಕೌಂಟ್ ಪಡೆಯಬಹುದು.

ಇಷ್ಟೇ ಅಲ್ಲದೆ 28,000 ರೂ. ವರೆಗೆದಿನ ಎಕ್ಸ್​ಚೇಂಜ್ ಆಫರ್ ಕೂಡ ಘೋಷಿಸಲಾಗಿದೆ. ನಿಮ್ಮ ಹಳೆಯ ಫೋನ್ ಪಿಕ್ಸೆಲ್ ಫೋನ್​ಗೆ ಹೋಲಿಕೆ ಆಗುವಂತಿದ್ದು, ಉತ್ತಮ ಕಂಡಿಷನ್​ನಲ್ಲಿದ್ದರೆ ಎಕ್ಸ್​ಚೇಂಜ್ ಆಫರ್ ಮೂಲಕ ಕೇವಲ 2,999 ರೂ. ಗೆ ಪಿಕ್ಸೆಲ್ 6a ನಿಮ್ಮದಾಗಿಸಬಹುದು. ಇದು 6 GB RAM + 128GB ಸ್ಟೋರೇಜ್‌ನ ವೇರಿಯಂಟ್‌ ಆಗಿದೆ.

ಇದನ್ನೂ ಓದಿ
Image
Tech Tips: ಮೊಬೈಲ್​ನಲ್ಲಿ ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್‌ ಸೆಂಡ್ ಮಾಡುವುದು ಹೇಗೆ?
Image
AI Generated Images: ಮುದ್ದು ಪ್ರಾಣಿಗಳ ಕ್ಯೂಟ್ ಸೆಲ್ಫಿ; ಕೇರಳ ಮೂಲದ ಆರ್ಟಿಸ್ಟ್ ಕೈ ಚಳಕ ನೋಡಿ!
Image
Realme GT Neo 5 SE: 100W ಫಾಸ್ಟ್ ಚಾರ್ಜರ್, 5000mAh ಬ್ಯಾಟರಿ: ಬಿಡುಗಡೆಗೆ ಸಜ್ಜಾದ ರಿಯಲ್ ಮಿ ಜಿಟಿ ನಿಯೋ 5 SE ಸ್ಮಾರ್ಟ್​ಫೋನ್
Image
ChatGPT: ಪ್ರಯಾಣದ ಯೋಜನೆ ಮಾಡಲು ಚಾಟ್ ಜಿಪಿಟಿ ಬಳಸಬಹುದೇ? ವಾಸ್ತವದಲ್ಲಿ ಇದು ಹೇಗೆ ಕೆಲಸ ಮಾಡುತ್ತದೆ?

Redmi Note 12 4G: ಶಓಮಿ ರೆಡ್ಮಿ ಸ್ಮಾರ್ಟ್​ಫೋನ್ ಖರೀದಿಗೆ ₹1,000 ಡಿಸ್ಕೌಂಟ್

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ–ಕೋರ್ ಗೂಗಲ್ ಟೆನ್ಸರ್ GS101 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ ಕೂಡ 12.2 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ–ವೈಡ್–ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಫೋನ್‌ನ ರಿಯರ್‌ ಕ್ಯಾಮೆರಾ 30fps ನಲ್ಲಿ 4K ವಿಡಿಯೋ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಸೆಲ್ಫಿ ಕ್ಯಾಮೆರಾ ಅಂದರೆ ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 4,306mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್‌ ಹೊಂದಿದೆ. ಬ್ಯಾಟರಿಗೆ ತಕ್ಕಂತೆ ಫಾಸ್ಟ್ ಚಾರ್ಜರ್ ಆಯ್ಕೆ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ