Google Pixel 6a: ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್​​ಫೋನ್ ಬಿಡುಗಡೆ ಯಾವಾಗ?: ಇಲ್ಲಿದೆ ಮಾಹಿತಿ

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್ ಚಾಕ್, ಚಾರ್ಕೋಲ್ ಮತ್ತು ಸೇಜ್ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಆಗಸ್ಟ್ 25 ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Google Pixel 6a: ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್​​ಫೋನ್ ಬಿಡುಗಡೆ ಯಾವಾಗ?: ಇಲ್ಲಿದೆ ಮಾಹಿತಿ
Google Pixel 6a
Follow us
TV9 Web
| Updated By: Vinay Bhat

Updated on:Jul 17, 2022 | 3:24 PM

ಸರ್ಚ್‌ ಇಂಜಿನ್‌ ದೈತ್ಯ ಗೂಗಲ್‌ (Google) ತನ್ನ ವಾರ್ಷಿಕ ಸಮ್ಮೆಳನ ಗೂಗಲ್‌ I/O ನಲ್ಲಿ ಬಹುನಿರೀಕ್ಷಿತ ಗೂಗಲ್‌ ಪಿಕ್ಸೆಲ್‌ 6ಎ (Google Pixel 6a) ಸ್ಮಾರ್ಟ್‌ಪೋನನ್ನು ಬಿಡುಗಡೆ ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಹಿಂದಿನ ಪಿಕ್ಸೆಲ್ 6 ಮತ್ತು ಪಿಕ್ಸೆಲ್ 6 ಪ್ರೊ ಸ್ಮಾರ್ಟ್‌ಫೋನ್‌ಗಳಿಗೆ (Smartphone) ಹೋಲಿಸಿದರೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಆದರೆ, ಇದು ಭಾರತದಲ್ಲಿ ಅನಾವರಣಗೊಳ್ಳುವ ಬಗ್ಗೆ ಕಂಪನಿ ಬಹಿರಂಗ ಪಡಿಸಿರಲಿಲ್ಲ. ಇದೀಗ ಗೂಗಲ್‌ ಪಿಕ್ಸೆಲ್‌ 6a ಬಿಡುಗಡೆ ಕಾರ್ಯಕ್ರಮವು ಭಾರತದಲ್ಲಿ ಇದೇ ಆಗಸ್ಟ್ ತಿಂಗಳಿನಲ್ಲಿ ಏರ್ಪಡಲಿದೆ ಎಂದು ಹೇಳಲಾಗಿದೆ. ಅಲ್ಲದೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್ ಬಿಡುಗಡೆ ಕಾರ್ಯಕ್ರಮ ಜರುಗಲಿದೆಯಂತೆ.

  1. ಜಾಗತೀಕ ಮಾರುಕಟ್ಟೆಯಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಬೆಲೆ $449  ಆಗಿದೆ. ಭಾರತೀಯ ರೂಪಾಯಿಗಳ ಬೆಲೆಯಲ್ಲಿ ಇದರ ಬೆಲೆ ಸರಿಸುಮಾರು 34,800 ರೂ. ಗಳಾಗಬಹುದು ಎಂದು ಅಂದಾಜಿಸಬಹುದು.
  2. ಈ ಸ್ಮಾರ್ಟ್‌ಫೋನ್ ಚಾಕ್, ಚಾರ್ಕೋಲ್ ಮತ್ತು ಸೇಜ್ ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಆಗಸ್ಟ್ 25 ರಂದು ಭಾರತದಲ್ಲಿ ಅನಾವರಣಗೊಳ್ಳಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
  3. ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಮತ್ತು 60Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ.
  4. ಆಕ್ಟಾ-ಕೋರ್ ಗೂಗಲ್ ಟೆನ್ಸರ್ SoC ಮತ್ತು Titan M2 ಸೆಕ್ಯುರಿಟಿ ಕೊಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ. 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.
  5. ಇದನ್ನೂ ಓದಿ
    Image
    ಇಂದು ವಿಶ್ವ ಎಮೋಜಿ ದಿನ: ಈ ಎಮೋಜಿಯನ್ನು ರಚಿಸಿದವರು ಯಾರು ಗೊತ್ತಾ?
    Image
    Airtel: ಏರ್ಟೆಲ್ ಬಳಕೆದಾರರೇ ಗಮನಿಸಿ: ಈ ಪ್ಲಾನ್​ನಲ್ಲಾಗಿದೆ ಬಹುದೊಡ್ಡ ಬದಲಾವಣೆ
    Image
    Oppo Reno 8: ಬಿಡುಗಡೆಗೆ ಒಂದು ದಿನ ಇರುವಾಗ ಸೋರಿಕೆ ಆಯ್ತು ಒಪ್ಪೋ ರೆನೊ 8 ಸರಣಿ ಸ್ಮಾರ್ಟ್​​ಫೋನ್ ಬೆಲೆ
    Image
    Best Smartphone: ಭಾರತದಲ್ಲಿರುವ 12,000 ರೂ. ಒಳಗಿನ 5 ಅತ್ಯುತ್ತಮ ಸ್ಮಾರ್ಟ್​​ಫೋನ್​ಗಳು ಇದುವೇ ನೋಡಿ
  6. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12.2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
  7. ಈ ಫೋನ್‌ನ ರಿಯರ್‌ ಕ್ಯಾಮೆರಾ 30fps ನಲ್ಲಿ 4K ವಿಡಿಯೋ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಸೆಲ್ಫಿ ಕ್ಯಾಮೆರಾ ಅಂದರೆ ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.
  8. ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 4,410mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್‌ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ.

Published On - 3:24 pm, Sun, 17 July 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?