Google Pixel 6a: ಫ್ಲಿಪ್​ಕಾರ್ಟ್​ನಿಂದ ಬಂಪರ್ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ

Flipkart: ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್​​ಫೋನ್ 6GB +128GB ಸ್ಟೋರೇಜ್ ಆಯ್ಕೆಯೊಂದಿಗೆ 43,999 ರೂ. ಗೆ ಬಿಡುಗಡೆ ಆಗಿತ್ತು. ಇದೀಗ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನನ್ನು ನೀವು ಕೇವಲ 30,999 ರೂ. ಗೆ ನಿಮ್ಮದಾಗಿಸಬಹುದು.

Google Pixel 6a: ಫ್ಲಿಪ್​ಕಾರ್ಟ್​ನಿಂದ ಬಂಪರ್ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ
Google Pixel 6a
Follow us
TV9 Web
| Updated By: Vinay Bhat

Updated on: Dec 11, 2022 | 6:55 AM

ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ (Flipkart) ನಲ್ಲಿ ಯಾವುದೇ ಡಿಸ್ಕೌಂಟ್ ಸೇಲ್ ನಡೆಯುತ್ತಿಲ್ಲ. ಹೀಗಿದ್ದರೂ ಗೂಗಲ್ ಕಂಪನಿ ಪ್ರಸಿದ್ಧ ಸ್ಮಾರ್ಟ್​ಫೋನ್ ಗೂಗಲ್ ಪಿಕ್ಸೆಲ್ 6a (Google Pixel 6a) ಬಂಪರ್ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ. ಕೆಲವು ಆಯ್ದ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್‌ ಕೊಡುಗೆ ನೀಡಲಾಗಿದ್ದು ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆಗಳು ಸಹ ಲಭ್ಯ ಇವೆ. ನೀವು ಮಧ್ಯಮ ಬೆಲೆಗೆ ಒಂದೊಳ್ಳೆ ಫೋನ್ ಅಥವಾ ಉತ್ತಮ ಕ್ವಾಲಿಟಿಯ ಕ್ಯಾಮೆರಾ ಫೋನ್ ಹುಡುಕುತ್ತಿದ್ದರೆ ಇದು ಅತ್ಯುತ್ತಮ ಆಯ್ಕೆ ಆಗಿದೆ.

ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್​​ಫೋನ್ 6GB +128GB ಸ್ಟೋರೇಜ್ ಆಯ್ಕೆಯೊಂದಿಗೆ 43,999 ರೂ. ಗೆ ಬಿಡುಗಡೆ ಆಗಿತ್ತು. ಇದೀಗ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನನ್ನು ನೀವು ಕೇವಲ 30,999 ರೂ. ಗೆ ನಿಮ್ಮದಾಗಿಸಬಹುದು. ಶೇ. 29 ರಷ್ಟು ಡಿಸ್ಕೌಂಟ್ ಸಿಗಲಿದೆ. ಇದಲ್ಲದೇ ಸುಮಾರು 18,500 ರೂ. ವರೆಗೆ ಎಕ್ಸ್‌ಚೇಂಜ್ ಆಫರ್‌ ಸಹ ನೀಡಲಾಗಿದೆ.

ಏನು ವಿಶೇಷತೆ?:

ಇದನ್ನೂ ಓದಿ
Image
WhatsApp: ವಿಂಡೋಸ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿ ಫೀಚರ್: ಹೊಸ ಅಪ್ಡೇಟ್​ನಲ್ಲಿ ಏನಿದೆ ನೋಡಿ
Image
Samsung Galaxy M04: ಗ್ಯಾಲಕ್ಸಿ M ಸರಣಿಯಲ್ಲಿ ಬಂದಿದೆ ಹೊಸ ಸ್ಮಾರ್ಟ್​ಫೋನ್: ಬೆಲೆ ಕೇವಲ 8,499 ರೂಪಾಯಿ
Image
Best Camera Phone: 20 ಸಾವಿರ ರೂ. ಒಳಗಡೆ ಬೊಂಬಾಟ್ ಕ್ಯಾಮೆರಾದ ಫೋನ್ ಹುಡುಕುತ್ತಿದ್ದರೆ ಇದುವೇ ಬೆಸ್ಟ್ ಆಯ್ಕೆ
Image
Shocking News: 6 ಲಕ್ಷ ಭಾರತೀಯರ ವೈಯಕ್ತಿಕ ಡೇಟಾ ಹ್ಯಾಕ್, ಮಾಲ್‌ವೇರ್‌ ಸಾಧನ ತಡೆಯಲು ಹೀಗೆ ಮಾಡಿ

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ HD+ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದ್ದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಮತ್ತು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ–ಕೋರ್ ಗೂಗಲ್ ಟೆನ್ಸರ್ GS101 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 12 ಔಟ್ ಆಫ್ ದಿ ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಕನಿಷ್ಠ ಐದು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯುತ್ತದೆ ಎಂದು ಗೂಗಲ್ ಕಂಪೆನಿ ತಿಳಿಸಿದೆ.

Twitter New Feature: ಟ್ವಿಟರ್​ನಲ್ಲೂ ಲಭ್ಯವಾಗಲಿದೆ ವಿವ್ಸ್ ಕೌಂಟ್; ಎಲಾನ್ ಮಸ್ಕ್ ಘೋಷಣೆ

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ ಕೂಡ 12.2 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ–ವೈಡ್–ಆಂಗಲ್ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಫೋನ್‌ನ ರಿಯರ್‌ ಕ್ಯಾಮೆರಾ 30fps ನಲ್ಲಿ 4K ವಿಡಿಯೋ ರೆಕಾರ್ಡಿಂಗ್ ಅನ್ನು ನೀಡುತ್ತದೆ. ಸೆಲ್ಫಿ ಕ್ಯಾಮೆರಾ ಅಂದರೆ ಮುಂಭಾಗದ ಕ್ಯಾಮರಾ 30fps ನಲ್ಲಿ 1080p ವರೆಗೆ ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ.

ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ 4,306mAh ಬ್ಯಾಟರಿಯನ್ನುಹೊಂದಿದೆ. ಇದು 24 ಗಂಟೆಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಮತ್ತು 72 ಗಂಟೆಗಳವರೆಗೆ ಬ್ಯಾಕಪ್ ಅನ್ನು ಒಳಗೊಂಡಿರುವ ಬ್ಯಾಟರಿ ಸೇವರ್ ಮೋಡ್‌ ಹೊಂದಿದೆ. ಬ್ಯಾಟರಿಗೆ ತಕ್ಕಂತೆ ಫಾಸ್ಟ್ ಚಾರ್ಜರ್ ಆಯ್ಕೆ ಕೂಡ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ