AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Pixel 7: ಇಂದಿನಿಂದ ಗೂಗಲ್ ಪಿಕ್ಸೆಲ್ 7 ಸರಣಿ ಖರೀದಿಗೆ ಲಭ್ಯ: ಮೊದಲ ಸೇಲ್​ನಲ್ಲಿ ಬಂಪರ್ ಆಫರ್

Google Pixel 7 Series: ತನ್ನ ಕ್ಯಾಮೆರಾದಿಂದಲೇ ಟೆಕ್ ಪ್ರಿಯರ ನಿದ್ದೆ ಕದ್ದಿರುವ ಗೂಗಲ್ ಪಿಕ್ಸೆಲ್ 7 ಮತ್ತು ಪಿಕ್ಸೆಲ್ 7 ಪ್ರೊ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಸೇಲ್ ಕಾಣುತ್ತಿರುವ ಈ ಫೋನ್ ಬಂಪರ್ ಆಫರ್​ನಲ್ಲಿ ನಿಮ್ಮದಾಗಿಸಬಹುದು.

Google Pixel 7: ಇಂದಿನಿಂದ ಗೂಗಲ್ ಪಿಕ್ಸೆಲ್ 7 ಸರಣಿ ಖರೀದಿಗೆ ಲಭ್ಯ: ಮೊದಲ ಸೇಲ್​ನಲ್ಲಿ ಬಂಪರ್ ಆಫರ್
google pixel 7
TV9 Web
| Updated By: Vinay Bhat|

Updated on: Oct 13, 2022 | 12:30 PM

Share

ಗೂಗಲ್ (Google) ಕಂಪನಿ ತನ್ನ ಪಿಕ್ಸೆಲ್ ಸರಣಿಗಳಡಿಯಲ್ಲಿ ವರ್ಷಕ್ಕೆ ಒಂದರಂತೆ ಫೋನ್​ಗಳನ್ನು ಬಿಡುಗಡೆ ಮಾಡುತ್ತವೆ. ಈ ಪೈಕಿ ಕಳೆದ ವಾರವಷ್ಟೆ ಗೂಗಲ್ ತನ್ನ ಹೊಸ ಸರಣಿಯ ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ತನ್ನ ಬಹುನಿರೀಕ್ಷಿತ ಗೂಗಲ್‌ ಪಿಕ್ಸೆಲ್‌ 7 ಸರಣಿಯ (Pixel 7 Series) ಅಡಿಯಲ್ಲಿ ಗೂಗಲ್ ಪಿಕ್ಸೆಲ್ 7 ಮತ್ತು ಪಿಕ್ಸೆಲ್ 7 ಪ್ರೊ (Pixel 7 Pro) ಎಂಬ ಎರಡು ಹೊಸ ಸ್ಮಾರ್ಟ್‌ಫೋನ್‌ ರಿಲೀಸ್ ಆಗಿತ್ತು. ತನ್ನ ಕ್ಯಾಮೆರಾದಿಂದಲೇ ಟೆಕ್ ಪ್ರಿಯರ ನಿದ್ದೆ ಕದ್ದಿರುವ ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಸೇಲ್ ಕಾಣುತ್ತಿರುವ ಈ ಫೋನ್ ಬಂಪರ್ ಆಫರ್​ನಲ್ಲಿ ನಿಮ್ಮದಾಗಿಸಬಹುದು. ಹಾಗಾದರೆ ಈ ಫೋನಿನ ದರ ಎಷ್ಟು?, ಏನೆಲ್ಲ ವಿಶೇಷತೆಗಳಿವೆ?, ಆಫರ್ ಏನಿದೆ ಎಂಬುದನ್ನು ನೋಡೋಣ.

ಬೆಲೆ – ಆಫರ್ ಏನಿದೆ?:

ಭಾರತದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ 59,999 ರೂ. ಬೆಲೆಯನ್ನು ಹೊಂದಿದೆ. ಗೂಗಲ್‌ ಪಿಕ್ಸೆಲ್‌ 7 ಪ್ರೊ ಸ್ಮಾರ್ಟ್‌ಫೋನಿಗೆ 84,999 ರೂ. ನಿಗದಿ ಮಾಡಲಾಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಮೊದಲ ಸೇಲ್ ಪ್ರಯುಕ್ತ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಗೂಗಲ್‌ ಪಿಕ್ಸಲ್ 7 ಖರೀದಿಸುವ ಗ್ರಾಹಕರು 8,000 ರೂ. ಗಳ ಡಿಸ್ಕೌಂಟ್‌ ಪಡೆಯಬಹುದು. ಹಾಗೆಯೇ ಗೂಗಲ್‌ ಪಿಕ್ಸಲ್ 7 ಪ್ರೊ ಖರೀದಿಸಿದರೆ 15,000 ರೂ. ಗಳ ಡಿಸ್ಕೌಂಟ್ ನಿಮ್ಮದಾಗಿಸಬಹುದು.

ಇದನ್ನೂ ಓದಿ
Image
Amazon Diwali sale: ಗ್ಯಾಲಕ್ಸಿ S22 5G ಸ್ಮಾರ್ಟ್​ಫೋನ್ ಖರೀದಿಗೆ ಮುಗಿಬಿದ್ದ ಜನರು: ಎಷ್ಟು ರೂ. ಡಿಸ್ಕೌಂಟ್ ಗೊತ್ತೇ?
Image
WhatsApp Tricks: ಐಫೋನ್, ಆಂಡ್ರಾಯ್ಡ್​ ಸ್ಮಾರ್ಟ್​​ಫೋನ್​​ನಲ್ಲಿ ವಾಟ್ಸ್​ಆ್ಯಪ್​​ ಕಾಲ್ ರೆಕಾರ್ಡ್​ ಹೇಗೆ?: ಇಲ್ಲಿದೆ ಟ್ರಿಕ್
Image
ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಫೇಸ್​ಬುಕ್ ಮಾತೃಸಂಸ್ಥೆ ಮೆಟಾವನ್ನೂ ಸೇರಿಸಿದ ರಷ್ಯಾ!
Image
Lava Yuva Pro: ಇದು ಭಾರತದ ಸ್ಮಾರ್ಟ್​ಫೋನ್: ಅತಿ ಕಡಿಮೆ ಬೆಲೆಗೆ ಆಕರ್ಷಕ ಮೊಬೈಲ್ ಬಿಡುಗಡೆ ಮಾಡಿದ ಲಾವಾ

ಗೂಗಲ್‌ ಪಿಕ್ಸೆಲ್‌ 7:

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್​ನಲ್ಲಿ ಕಾರ್ಯನಿವರ್ಹಿಸುತ್ತಿದ್ದು, ಹೊಚ್ಚ ಹೊಸ ಆಂಡ್ರಾಯ್ಡ್ 13 ಬೆಂಬಲ ಪಡೆದುಕೊಂಡಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಜೊತೆಗೆ ಕ್ಯಾಮೆರಾ ಮೂಲಕ ವಿಡಿಯೊ ರೆಕಾರ್ಡ್‌ ಮಾಡುವಾಗ ಬ್ಲರ್‌ ಎಫೆಕ್ಟ್‌ ನೀಡುವ ‘ಸಿನಿಮ್ಯಾಟಿಕ್ ಬ್ಲರ್’ ಫೀಚರ್ಸ್‌ ಪಡೆದುಕೊಂಡಿರುವುದು ವಿಶೇಷ.

ಈ ಬಾರಿ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್ ಮತ್ತು ವೈಯರ್​​ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇದರ ಜೊತೆಗೆ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಎಂಬ ವಿಶೇಷ ಆಯ್ಕೆಯನ್ನು ಅಳವಡಿಸಲಾಗಿದ್ದು ಇದನ್ನು ಆಕ್ಟಿವ್‌ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ಹೆಚ್ಚಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಭಾರತದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 59,999 ರೂ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಗೂಗಲ್ ಪಿಕ್ಸೆಲ್ 7 ಪ್ರೊ:

ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಕ್ವಾಡ್ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. 10.8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನ್​ನಲ್ಲಿ ವಿಶೇಷವಾದ ‘ಮ್ಯಾಕ್ರೋ ಫೋಕಸ್’ ಫೀಚರ್ಸ್‌ ಒಳಗೊಂಡಿದೆ ಎಂದು ಗೂಗಲ್‌ ಹೇಳಿದೆ. ಇದು ಕ್ಲೋಸ್-ಅಪ್ ಫೋಟೋಗಳನ್ನು ಅದ್ಭುತವಾಗಿ ಸೆರೆಹಿಡಿಯುತ್ತದೆ.

ಪಿಕ್ಸೆಲ್‌ 7ಗೆ ಹೋಲಿಸಿದರೆ 7 ಪ್ರೊ ಸ್ಮಾರ್ಟ್‌ಫೋನ್​ನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ. ಇದರ ಬೆಲೆ 84,999 ರೂ. ಆಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಇದೇ ಅಕ್ಟೋಬರ್ 13 ರಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮೊದಲ ಸೇಲ್ ಕಾಣಲಿದೆ.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಬಿಜೆಪಿ ಕಾಮೆಂಟ್ ಮಾಡುವ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ: ಶಿವಕುಮಾರ್
ಬಿಜೆಪಿ ಕಾಮೆಂಟ್ ಮಾಡುವ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ: ಶಿವಕುಮಾರ್
ಪಹಲ್ಗಾಮ್​​ನಲ್ಲಿ ದಾಳಿ ಮಾಡಿದ ಮೂವರು ಉಗ್ರರ ಹತ್ಯೆ; ಅಮಿತ್ ಶಾ ಘೋಷಣೆ
ಪಹಲ್ಗಾಮ್​​ನಲ್ಲಿ ದಾಳಿ ಮಾಡಿದ ಮೂವರು ಉಗ್ರರ ಹತ್ಯೆ; ಅಮಿತ್ ಶಾ ಘೋಷಣೆ
ಫ್ರೆಂಡ್​ಶಿಪ್​ಗಾಗಿ ಫ್ರೆಂಡ್​ಶಿಪ್ ಸಾಂಗ್ ಹೇಳಿದ ಸುದೀಪ್; ಮೆಲೋಡಿ ಹಾಡು
ಫ್ರೆಂಡ್​ಶಿಪ್​ಗಾಗಿ ಫ್ರೆಂಡ್​ಶಿಪ್ ಸಾಂಗ್ ಹೇಳಿದ ಸುದೀಪ್; ಮೆಲೋಡಿ ಹಾಡು
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಕಮೀಷನರ್ ಹೇಳಿದ್ದೇನು?
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಕಮೀಷನರ್ ಹೇಳಿದ್ದೇನು?
ಕೊಪ್ಪಳ: 5 ದಿನಗಳಿಂದ ಮರದ ಮೇಲೆ ಕುಳಿತು ಅನ್ನಾಹಾರವಿಲ್ಲದೆ ಸ್ವಾಮೀಜಿ ವ್ರತ!
ಕೊಪ್ಪಳ: 5 ದಿನಗಳಿಂದ ಮರದ ಮೇಲೆ ಕುಳಿತು ಅನ್ನಾಹಾರವಿಲ್ಲದೆ ಸ್ವಾಮೀಜಿ ವ್ರತ!