ಭಾರೀ ರಿಯಾಯಿತಿ: ಗೂಗಲ್ ಪಿಕ್ಸೆಲ್ 7 ಪ್ರೊ ಫೋನ್ ಮೇಲೆ ಇದುವರೆಗೆ ಕಾಣದ ಡಿಸ್ಕೌಂಟ್: ಆಫರ್ ಮಿಸ್ ಮಾಡ್ಬೇಡಿ

Google Pixel 7 Pro Discount: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಈಗ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್​ಫೋನ್​ನ 12GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಮೇಲೆ ಅದ್ಭುತವಾದ ಆಫರ್ ನೀಡುತ್ತಿದೆ. ಈ ಫೋನ್​ನ ಮೂಲ​ ಬೆಲೆ 84,999 ರೂ. ಆದರೀಗ ಈ ಫೋನ್ ಮೇಲೆ ಶೇ. 16 ರಷ್ಟು ರಿಯಾಯಿತಿ ಘೋಷಿಸಲಾಗಿದೆ.

ಭಾರೀ ರಿಯಾಯಿತಿ: ಗೂಗಲ್ ಪಿಕ್ಸೆಲ್ 7 ಪ್ರೊ ಫೋನ್ ಮೇಲೆ ಇದುವರೆಗೆ ಕಾಣದ ಡಿಸ್ಕೌಂಟ್: ಆಫರ್ ಮಿಸ್ ಮಾಡ್ಬೇಡಿ
Google Pixel 7 Pro
Follow us
Vinay Bhat
|

Updated on: Aug 12, 2023 | 1:14 PM

ಗೂಗಲ್ ಕಂಪನಿಯ ಫೋನ್​ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನಮಾನವಿದೆ. ವರ್ಷಕ್ಕೊಂದು ತನ್ನ ಪಿಕ್ಸೆಲ್ ಸರಣಿಯ ಅಡಿಯಲ್ಲಿ ನೂತನ ಸ್ಮಾರ್ಟ್​ಫೋನ್​ಗಳನ್ನು ಅನಾವರಣ ಮಾಡುವ ಕಂಪನಿ ಈ ವರ್ಷ ಗೂಗಲ್ ಪಿಕ್ಸೆಲ್ 7 ಸರಣಿಯನ್ನು ಪರಿಚಿಯಿಸಿತ್ತು. ಇದೀಗ ಈ ಸರಣಿಯ ಗೂಗಲ್ ಪಿಕ್ಸೆಲ್ 7 ಪ್ರೊ (Google Pixel 7 Pro) ಫೋನ್ ಬಂಪರ್ ರಿಯಾಯಿತಿ ದರಲ್ಲಿ ಸೇಲ್ ಕಾಣುತ್ತಿದೆ. ಕ್ಯಾಮೆರಾ ಪ್ರಿಯರಿಗೆ ಹೇಳಿ ಮಾಡಿಸಿರುವ ಈ ಫೋನ್​ನಲ್ಲಿ ಬಲಿಷ್ಠ ಪ್ರೊಸೆಸರ್ ಕೂಡ ಇದೆ. ಹಾಗಾದರೆ ಈ ಸ್ಮಾರ್ಟ್​ಫೋನ್ ಎಷ್ಟು ಬೆಲೆಗೆ ಲಭ್ಯವಿದೆ?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಗೂಗಲ್ ಪಿಕ್ಸೆಲ್ 7 ಪ್ರೊ ರಿಯಾಯಿತಿ:

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಈಗ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್​ಫೋನ್​ನ 12GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಮೇಲೆ ಅದ್ಭುತವಾದ ಆಫರ್ ನೀಡುತ್ತಿದೆ. ಈ ಫೋನ್​ನ ಮೂಲ​ ಬೆಲೆ 84,999 ರೂ. ಆದರೀಗ ಈ ಫೋನ್ ಮೇಲೆ ಶೇ. 16 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಅಂದರೆ ನೀವು ಈಗ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್​ಫೋನನ್ನು ಕೇವಲ 69,999 ರೂ. ಗೆ ಖರೀದಿಸಬಹುದು. ಇದರ ಜೊತೆಗೆ ವಿನಿಮಯ ಕೊಡುಗೆಗಳು ಮತ್ತು ಬ್ಯಾಂಕ್ ಆಫರ್ ಲಾಭವನ್ನು ಪಡೆಯುವ ಮೂಲಕ ನೀವು ಬೆಲೆಯನ್ನು ಇನ್ನಷ್ಟು ಕಡಿಮೆ ಮಾಡಬಹುದು.

ಒಂದೇ ವಾಟ್ಸ್​ಆ್ಯಪ್​ನಲ್ಲಿ ಅನೇಕ ಅಕೌಂಟ್: ಹೊಸ ಪ್ರಯೋಗಕ್ಕೆ ಮುಂದಾದ ಮೆಟಾ

ಇದನ್ನೂ ಓದಿ
Image
ಇನ್ಫಿನಿಕ್ಸ್ ಜಿರೋ 30 5G ಸ್ಮಾರ್ಟ್​ಫೋನ್ ಬಿಡುಗಡೆಗೆ ಸಜ್ಜು: ಈ ಬಾರಿ ಏನು ವಿಶೇಷತೆ ಇದೆ?
Image
ಪಾಕಿಸ್ತಾನದಿಂದ ಹೊಸ ಆ್ಯಪ್ ಬಿಡುಗಡೆ, ವಾಟ್ಸ್​ಆ್ಯಪ್​ಗೇ ಸೆಡ್ಡು!
Image
ಇಂದಿನಿಂದ ಖರೀದಿಗೆ ಸಿಗಲಿದೆ 6,000mAh ಬ್ಯಾಟರಿಯ ಗ್ಯಾಲಕ್ಸಿ F34 5G ಸ್ಮಾರ್ಟ್​ಫೋನ್: ಬೆಲೆ ಎಷ್ಟು?
Image
50MP ಕ್ಯಾಮೆರಾ, 5000mAh ಬ್ಯಾಟರಿ: ಬೆಲೆ ಕೇವಲ 7,999 ರೂ.: ಈ ​ಫೋನ್ ಮೇಲಿನ ಆಫರ್ ಮಿಸ್ ಮಾಡ್ಬೇಡಿ

ಇತರೆ ಕೊಡುಗೆಗಳು ಏನಿದೆ?:

ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ ಮಾರಾಟ ಮಾಡಲು ಬಯಿಸಿದರೆ ಆ ಫೋನಿನ ಮಾದರಿ ಮತ್ತು ಸ್ಥಿತಿಯನ್ನು ಅವಲಂಬಿಸಿ, 65,000 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ನೀಡಲಾಗುತ್ತದೆ. ಹೆಚ್ಚುವರಿಯಾಗಿ, AU ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸುವ ಗ್ರಾಹಕರು ಸ್ಮಾರ್ಟ್‌ಫೋನ್‌ನಲ್ಲಿ ಮೇಲೆ ಶೇ. 10 ರಷ್ಟು ರಿಯಾಯಿತಿ ಪಡೆಯಬಹುದು.

ಗೂಗಲ್ ಪಿಕ್ಸೆಲ್ 7 ಪ್ರೊ ಏಕೆ ಖರೀದಿಸಬೇಕು?:

ಗೂಗಲ್ ಪಿಕ್ಸೆಲ್ 7 ಪ್ರೊ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ 50 MP ಪ್ರಾಥಮಿಕ ಕ್ಯಾಮೆರಾ, 48MP ಕ್ಯಾಮೆರಾ ಮತ್ತು 12MP ಕ್ಯಾಮೆರಾ ಆಯ್ಕೆ ಹೊಂದಿದೆ. ಇದು ಛಾಯಾಗ್ರಹಣಕ್ಕೆ ಹೇಳಿ ಮಾಡಿಸಿದಂತಿದೆ. ಈ ಸ್ಮಾರ್ಟ್‌ಫೋನ್​ನಲ್ಲಿ ವಿಶೇಷವಾದ ‘ಮ್ಯಾಕ್ರೋ ಫೋಕಸ್’ ಫೀಚರ್ಸ್‌ ಒಳಗೊಂಡಿದೆ. ಇದು ಕ್ಲೋಸ್-ಅಪ್ ಫೋಟೋಗಳನ್ನು ಅದ್ಭುತವಾಗಿ ಸೆರೆಹಿಡಿಯುತ್ತದೆ.

ಈ ಫೋನ್ ಪ್ರಬಲವಾದ ಟೆನ್ಸರ್ ಜಿ2 ಚಿಪ್‌ಸೆಟ್‌ನಿಂದ ಚಾಲಿತವಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್