ಗೂಗಲ್ ಕಂಪನಿಯ ಫೋನ್ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನಮಾನವಿದೆ. ವರ್ಷಕ್ಕೊಂದು ತನ್ನ ಪಿಕ್ಸೆಲ್ ಸರಣಿಯ ಅಡಿಯಲ್ಲಿ ನೂತನ ಸ್ಮಾರ್ಟ್ಫೋನ್ಗಳನ್ನು ಅನಾವರಣ ಮಾಡುವ ಕಂಪನಿ ಈ ವರ್ಷ ಗೂಗಲ್ ಪಿಕ್ಸೆಲ್ 7 ಸರಣಿಯನ್ನು ಪರಿಚಿಯಿಸಿತ್ತು. ಇದೀಗ ಈ ಸರಣಿಯ ಗೂಗಲ್ ಪಿಕ್ಸೆಲ್ 7 ಪ್ರೊ (Google Pixel 7 Pro) ಫೋನ್ ಬಂಪರ್ ರಿಯಾಯಿತಿ ದರಲ್ಲಿ ಸೇಲ್ ಕಾಣುತ್ತಿದೆ. ಕ್ಯಾಮೆರಾ ಪ್ರಿಯರಿಗೆ ಹೇಳಿ ಮಾಡಿಸಿರುವ ಈ ಫೋನ್ನಲ್ಲಿ ಬಲಿಷ್ಠ ಪ್ರೊಸೆಸರ್ ಕೂಡ ಇದೆ. ಹಾಗಾದರೆ ಈ ಸ್ಮಾರ್ಟ್‌ಫೋನ್ ಎಷ್ಟು ಬೆಲೆಗೆ ಲಭ್ಯವಿದೆ?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಈಗ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್ಫೋನ್ನ 12GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಮೇಲೆ ಅದ್ಭುತವಾದ ಆಫರ್ ನೀಡುತ್ತಿದೆ. ಈ ಫೋನ್ನ ಮೂಲ ಬೆಲೆ 84,999 ರೂ. ಆದರೀಗ ಈ ಫೋನ್ ಮೇಲೆ ಶೇ. 16 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಅಂದರೆ ನೀವು ಈಗ ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್ಫೋನನ್ನು ಕೇವಲ 69,999 ರೂ. ಗೆ ಖರೀದಿಸಬಹುದು. ಇದರ ಜೊತೆಗೆ ವಿನಿಮಯ ಕೊಡುಗೆಗಳು ಮತ್ತು ಬ್ಯಾಂಕ್ ಆಫರ್ ಲಾಭವನ್ನು ಪಡೆಯುವ ಮೂಲಕ ನೀವು ಬೆಲೆಯನ್ನು ಇನ್ನಷ್ಟು ಕಡಿಮೆ ಮಾಡಬಹುದು.
ಒಂದೇ ವಾಟ್ಸ್ಆ್ಯಪ್ನಲ್ಲಿ ಅನೇಕ ಅಕೌಂಟ್: ಹೊಸ ಪ್ರಯೋಗಕ್ಕೆ ಮುಂದಾದ ಮೆಟಾ
ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಮಾರಾಟ ಮಾಡಲು ಬಯಿಸಿದರೆ ಆ ಫೋನಿನ ಮಾದರಿ ಮತ್ತು ಸ್ಥಿತಿಯನ್ನು ಅವಲಂಬಿಸಿ, 65,000 ರೂ. ವರೆಗೆ ಎಕ್ಸ್ಚೇಂಜ್ ಆಫರ್ ನೀಡಲಾಗುತ್ತದೆ. ಹೆಚ್ಚುವರಿಯಾಗಿ, AU ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸುವ ಗ್ರಾಹಕರು ಸ್ಮಾರ್ಟ್‌ಫೋನ್‌ನಲ್ಲಿ ಮೇಲೆ ಶೇ. 10 ರಷ್ಟು ರಿಯಾಯಿತಿ ಪಡೆಯಬಹುದು.
ಗೂಗಲ್ ಪಿಕ್ಸೆಲ್ 7 ಪ್ರೊ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ 50 MP ಪ್ರಾಥಮಿಕ ಕ್ಯಾಮೆರಾ, 48MP ಕ್ಯಾಮೆರಾ ಮತ್ತು 12MP ಕ್ಯಾಮೆರಾ ಆಯ್ಕೆ ಹೊಂದಿದೆ. ಇದು ಛಾಯಾಗ್ರಹಣಕ್ಕೆ ಹೇಳಿ ಮಾಡಿಸಿದಂತಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ವಿಶೇಷವಾದ ‘ಮ್ಯಾಕ್ರೋ ಫೋಕಸ್’ ಫೀಚರ್ಸ್ ಒಳಗೊಂಡಿದೆ. ಇದು ಕ್ಲೋಸ್-ಅಪ್ ಫೋಟೋಗಳನ್ನು ಅದ್ಭುತವಾಗಿ ಸೆರೆಹಿಡಿಯುತ್ತದೆ.
ಈ ಫೋನ್ ಪ್ರಬಲವಾದ ಟೆನ್ಸರ್ ಜಿ2 ಚಿಪ್‌ಸೆಟ್‌ನಿಂದ ಚಾಲಿತವಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ