ಗೂಗಲ್ (Google) ಕಂಪನಿ ತನ್ನ ಪಿಕ್ಸೆಲ್ ಸರಣಿಗಳಡಿಯಲ್ಲಿ ವರ್ಷಕ್ಕೆ ಒಂದರಂತೆ ಫೋನ್ಗಳನ್ನು ಬಿಡುಗಡೆ ಮಾಡುತ್ತವೆ. ಈ ಪೈಕಿ ಕಳೆದ ವಾರವಷ್ಟೆ ಗೂಗಲ್ ತನ್ನ ಹೊಸ ಸರಣಿಯ ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ತನ್ನ ಬಹುನಿರೀಕ್ಷಿತ ಗೂಗಲ್ ಪಿಕ್ಸೆಲ್ 7 ಸರಣಿಯ (Pixel 7 Series) ಅಡಿಯಲ್ಲಿ ಗೂಗಲ್ ಪಿಕ್ಸೆಲ್ 7 ಮತ್ತು ಪಿಕ್ಸೆಲ್ 7 ಪ್ರೊ (Pixel 7 Pro) ಎಂಬ ಎರಡು ಹೊಸ ಸ್ಮಾರ್ಟ್‌ಫೋನ್ ರಿಲೀಸ್ ಆಗಿತ್ತು. ತನ್ನ ಕ್ಯಾಮೆರಾದಿಂದಲೇ ಟೆಕ್ ಪ್ರಿಯರ ನಿದ್ದೆ ಕದ್ದಿರುವ ಈ ಫೋನ್ ಇಂದು ಖರೀದಿಗೆ ಸಿಗುತ್ತಿದೆ. ಕಳೆದ ಬಾರಿ ಸೇಲ್ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಈ ಫೋನ್ ಸೋಲ್ಡ್ ಔಟ್ ಆಗಿತ್ತು. ಹೀಗಾಗಿ ಇಂದುಕೂಡ ಭರ್ಜರಿ ಸೇಲ್ ಆಗುವ ನಿರೀಕ್ಷೆಯಿದೆ. ಹಾಗಾದರೆ ಈ ಫೋನಿನ ದರ ಎಷ್ಟು?, ಏನೆಲ್ಲ ವಿಶೇಷತೆಗಳಿವೆ?, ಆಫರ್ ಏನಿದೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಭಾರತದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್ 59,999 ರೂ. ಬೆಲೆಯನ್ನು ಹೊಂದಿದೆ. ಗೂಗಲ್ ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನಿಗೆ 84,999 ರೂ. ನಿಗದಿ ಮಾಡಲಾಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಕೆಲ ಆಯ್ದ ಬ್ಯಾಂಕ್ ಕಾರ್ಡ್ಗಳಿಗೆ ಡಿಸ್ಕೌಂಟ್ ಆಫರ್ ಕೂಡ ನೀಡಲಾಗಿದೆ.
ಗೂಗಲ್ ಪಿಕ್ಸೆಲ್ 7:
ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್ 6.32 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್ನಲ್ಲಿ ಕಾರ್ಯನಿವರ್ಹಿಸುತ್ತಿದ್ದು, ಹೊಚ್ಚ ಹೊಸ ಆಂಡ್ರಾಯ್ಡ್ 13 ಬೆಂಬಲ ಪಡೆದುಕೊಂಡಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, 10.8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಜೊತೆಗೆ ಕ್ಯಾಮೆರಾ ಮೂಲಕ ವಿಡಿಯೊ ರೆಕಾರ್ಡ್ ಮಾಡುವಾಗ ಬ್ಲರ್ ಎಫೆಕ್ಟ್ ನೀಡುವ ‘ಸಿನಿಮ್ಯಾಟಿಕ್ ಬ್ಲರ್’ ಫೀಚರ್ಸ್ ಪಡೆದುಕೊಂಡಿರುವುದು ವಿಶೇಷ.
ಈ ಬಾರಿ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್ ಮತ್ತು ವೈಯರ್ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇದರ ಜೊತೆಗೆ ಟ್ರೀಮ್ ಬ್ಯಾಟರಿ ಸೇವರ್ ಮೋಡ್ ಎಂಬ ವಿಶೇಷ ಆಯ್ಕೆಯನ್ನು ಅಳವಡಿಸಲಾಗಿದ್ದು ಇದನ್ನು ಆಕ್ಟಿವ್ ಮಾಡುವ ಮೂಲಕ 72 ಗಂಟೆಗಳ ಬ್ಯಾಟರಿ ಅವಧಿಯನ್ನು ಹೆಚ್ಚಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಭಾರತದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 59,999 ರೂ. ಇದು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಗೂಗಲ್ ಪಿಕ್ಸೆಲ್ 7 ಪ್ರೊ:
ಈ ಸ್ಮಾರ್ಟ್‌ಫೋನ್ 6.7 ಇಂಚಿನ ಕ್ವಾಡ್ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಪಿಕ್ಸೆಲ್ 7 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. 10.8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಸ್ಮಾರ್ಟ್ಫೋನ್ನಲ್ಲಿ ವಿಶೇಷವಾದ ‘ಮ್ಯಾಕ್ರೋ ಫೋಕಸ್’ ಫೀಚರ್ಸ್ ಒಳಗೊಂಡಿದೆ ಎಂದು ಗೂಗಲ್ ಹೇಳಿದೆ. ಇದು ಕ್ಲೋಸ್-ಅಪ್ ಫೋಟೋಗಳನ್ನು ಅದ್ಭುತವಾಗಿ ಸೆರೆಹಿಡಿಯುತ್ತದೆ.
ಪಿಕ್ಸೆಲ್ 7ಗೆ ಹೋಲಿಸಿದರೆ 7 ಪ್ರೊ ಸ್ಮಾರ್ಟ್ಫೋನ್ನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.2, GPS, NFC, ಮತ್ತು USB ಟೈಪ್-C ಪೋರ್ಟ್ ಒಳಗೊಂಡಿದೆ. ಇದರ ಬೆಲೆ 84,999 ರೂ. ಆಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಇದೇ ಅಕ್ಟೋಬರ್ 13 ರಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಮೊದಲ ಸೇಲ್ ಕಾಣಲಿದೆ.