Smartphones: ಹುಬ್ಬೇರಿಸುವಂತಹ ಫೀಚರ್​ಗಳಿದ್ದರೂ ಮಾರುಕಟ್ಟೆಯಲ್ಲಿ ಫೇಲ್ ಆದ ಸ್ಮಾರ್ಟ್​ಫೋನ್​ಗಳು ಯಾವುವು ಗೊತ್ತೇ?

Mobile: ವಿಶೇಷ ಎಂದರೆ ಕೆಲವು ಫೋನ್​ಗಳು ಆಕರ್ಷಕ ಫೀಚರ್​ಗಳಿಂದ ಕೂಡಿದ್ದರೂ ಅವುಗಳು ಮಾರುಕಟ್ಟೆಯಲ್ಲಿ ಮೋಡಿ ಮಾಡಲು ಫೇಲ್ ಆದವು. ಅಂಥಹ ಟಾಪ್ 5 ಫೋನ್​ಗಳ ಪಟ್ಟಿ ಇಲ್ಲಿದೆ ನೋಡಿ.

Smartphones: ಹುಬ್ಬೇರಿಸುವಂತಹ ಫೀಚರ್​ಗಳಿದ್ದರೂ ಮಾರುಕಟ್ಟೆಯಲ್ಲಿ ಫೇಲ್ ಆದ ಸ್ಮಾರ್ಟ್​ಫೋನ್​ಗಳು ಯಾವುವು ಗೊತ್ತೇ?
ಸಾಂದರ್ಭಿಕ ಚಿತ್ರ
Follow us
Vinay Bhat
|

Updated on: Mar 04, 2023 | 8:40 PM

ಮಾರುಕಟ್ಟೆಯಲ್ಲಿ ಇಂದು ಕಡಿಮೆ ಎಂದರೂ ತಿಂಗಳಿಗೆ ಐದರಿಂದ-ಏಳು ಫೋನುಗಳು ಅನಾವರಣಗೊಳ್ಳುತ್ತವೆ. ಬಜೆಟ್ ಫೋನಿನಿಂದ ಹಿಡಿದು, ಮಧ್ಯಮ- ಹೈ ರೇಂಜ್ ಫೋನುವರೆಗೂ ಅನೇಕ ಸ್ಮಾರ್ಟ್​ಫೋನ್​​ಗಳು (Smartphones) ಮೋಡಿ ಮಾಡಿವೆ. ಇದರಲ್ಲಿ ಕೆಲವು ಫೋನ್​ಗಳು ಕಳೆದ ವರ್ಷ ಬಿಡುಗಡೆ ಆಗಿದ್ದರೂ ಈಗಲೂ ಟ್ರೆಂಡಿಂಗ್​ನಲ್ಲಿದ್ದು (Trend) ಭರ್ಜರಿ ಸೇಲ್ ಕಾಣುತ್ತಿದೆ. ಇನ್ನೂ ಕೆಲ ಮೊಬೈಲ್​ಗಳು (Mobile) ಹೇಳ ಹೆಸರಿಲ್ಲದಂತೆ ಮಾಯವಾಗಿವೆ. ವಿಶೇಷ ಎಂದರೆ ಕೆಲವು ಫೋನ್​ಗಳು ಆಕರ್ಷಕ ಫೀಚರ್​ಗಳಿಂದ ಕೂಡಿದ್ದರೂ ಅವುಗಳು ಮಾರುಕಟ್ಟೆಯಲ್ಲಿ ಮೋಡಿ ಮಾಡಲು ವಿಫಲವಾದವು. ಅಂಥಹ ಟಾಪ್ 5 ಫೋನ್​ಗಳ ಪಟ್ಟಿ ಇಲ್ಲಿದೆ ನೋಡಿ.

ರಿಯಲ್ ಮಿ ಜಿಟಿ ನಿಯೋ 3:

ರಿಯಲ್ ಮಿ ಈಗ ಹೆಚ್ಚಾಗಿ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳಿಂದ ಗುರುತಿಸಿಕೊಂಡಿದೆ. ಇದರ ನಡುವೆ 42,999 ರೂ. ಗೆ ಬಿಡುಗಡೆ ಮಾಡಿದ ಮೊಬೈಲ್ ರಿಯಲ್ ಮಿ ಜಿಟಿ ನಿಯೋ 3. ವೇಗದ ಚಾರ್ಜರ್, ಬಲಿಷ್ಠ ಪ್ರೊಸೆಸರ್ ಮೂಲಕ ಸದ್ದು ಮಾಡಿದ್ದ ಈ ಸ್ಮಾರ್ಟ್​ಫೋನ್ ಬಿಡುಗಡೆಯ ನಂತರ ಯಶಸ್ಸು ಸಾಧಿಸಲಿಲ್ಲ. ಇದು 6.43 ಇಂಚಿನ ಹೆಚ್‌ಡಿ + AMOLED ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ Dimensity 8100 SoC ಪ್ರೊಸೆಸರ್‌ ನೀಡಲಾಗಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್​ನಲ್ಲಿದೆ. 4,500 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 150W ಸಾಮರ್ಥ್ಯದ ಆಲ್ಟ್ರಾ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇದು ಕೇವಲ 5 ನಿಮಿಷಗಳಲ್ಲಿ ಶೇ. 50 ರಷ್ಟು ಚಾರ್ಜ್ ಆಗುತ್ತಂತೆ.

ಐಕ್ಯೂ 9T:

ಐಕ್ಯೂ 9ಟಿ ಸ್ಮಾರ್ಟ್​ಫೋನ್ ಕೂಡ ಹೊಚ್ಚಹೊಸ ಪ್ರೊಸೆಸರ್, ಫಾಸ್ಟ್ ಚಾರ್ಜರ್ ಹೊಂದಿದ್ದರೂ ಮಾರುಕಟ್ಟೆಯಲ್ಲಿ ವಿಫಲವಾಯಿತು. ಈ ಫೋನ್ 6.78 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುವ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಐಕ್ಯೂ 9T ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್‌ ಬೆಂಬಲಿಸುತ್ತದೆ. ಕಂಪನಿ ಹೇಳಿರುವ ಪ್ರಕಾರ ಇದು 0-100% ಚಾರ್ಜ್ ಆಗಲು ಕೇವಲ 20 ನಿಮಿಷ ಸಾಕಂತೆ.

ಇದನ್ನೂ ಓದಿ
Image
Amazon, Flipkart Holi sale 2023: ಅಮೆಜಾನ್, ಫ್ಲಿಪ್​ಕಾರ್ಟ್​ನಲ್ಲಿ ಹೋಳಿ ಸೇಲ್: ಅನೇಕ ಪ್ರಾಡಕ್ಟ್ ಮೇಲೆ ಬಂಪರ್ ಡಿಸ್ಕೌಂಟ್
Image
OnePlus Nord CE 3: ಅದ್ಭುತ ಕ್ಯಾಮೆರಾ, ಭರ್ಜರಿ ಫೀಚರ್ಸ್: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಒನ್​ಪ್ಲಸ್ ನಾರ್ಡ್ CE 3
Image
Tech Tips: ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ
Image
Tech Tips: ಮನೆಯಲ್ಲೇ ಕುಳಿತು ಆನ್​ಲೈನ್ ಮೂಲಕ ಹಣ ಗಳಿಸಲು ಇಲ್ಲಿದೆ ನೋಡಿ ಸುಲಭ ಮಾರ್ಗ

Huawei Nova 10 SE: 108MP ಕ್ಯಾಮೆರಾ ಫೋನ್ ಸಾಲಿಗೆ ಮತ್ತೊಂದು ಸೇರ್ಪಡೆ: ಯಾವ ಸ್ಮಾರ್ಟ್​ಫೋನ್?, ಬೆಲೆ ಎಷ್ಟು?

ಐಕ್ಯೂ 9 SE:

ಐಕ್ಯೂ ಕಂಪನಿ ಭಾರತದಲ್ಲಿ ಮಧ್ಯಮ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದೇ ಸಾಲಿನಲ್ಲಿ ರಿಲೀಸ್ ಆಗಿದ್ದು ಐಕ್ಯೂ 9 ಎಸ್​ಇ. 33,990 ರೂ. ಬೆಲೆಯ ಈ ಸ್ಮಾರ್ಟ್​ಫೋನ್​ನಲ್ಲಿ ಆಕರ್ಷಕ ಫೀಚರ್​ಗಳಿವೆ. ಈ ದರಕ್ಕೆ ಮಾರುಕಟ್ಟೆಯಲ್ಲಿರುವ ಅತ್ಯಂತ ವೇಗದ ಸ್ಮಾರ್ಟ್​ಫೋನ್ ಇದಾಗಿದೆ. ಆದರೆ, ಇದು ಮಾರುಕಟ್ಟೆಯಲ್ಲಿ ಸದ್ದು ಮಾಡಲೇಯಿಲ್ಲ. ಇದು 6.62 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಸೆನ್ಸಾರ್‌ ಅನ್ನು ನೀಡಲಾಗಿದೆ. 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 66W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ.

ಮೋಟೋರೊಲಾ ಎಡ್ಜ್ 30 ಫ್ಯೂಶನ್:

ಮೋಟೋರೊಲಾ ಕಡಿಮೆ ಬೆಲೆಗೆ ಎಡ್ಜ್ 30 ಫ್ಯೂಶನ್ ಫೋನನ್ನು ಅನಾವರಣ ಮಾಡಿತ್ತು. 39,999 ರೂ. ವಿನ ಈ ಫೋನ್​ನಲ್ಲಿ ಎಲ್ಲವೂ ಬೆಲೆಗೆ ತಕ್ಕಂತೆ ಅದ್ಭುತವಾಗಿದೆ. ಆದರೆ, ಮಾರುಕಟ್ಟೆಯಲ್ಲಿ ಫೇಲ್ ಆಯಿತು. ಇದು 6.55 ಇಂಚಿನ ಕರ್ವ್ಡ್ ಎಂಡ್‌ಲೆಸ್ ಎಡ್ಜ್ ಪೋಲ್ಡ್ ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ನಲ್ಲಿ ಅಳವಡಿಸಲಾಗಿದ್ದು ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇದೆ. 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ.

ವಿವೋ X80:

ಅತ್ಯಂತ ವೇಗದ ಆಂಡ್ರಯ್ಡ್ ಸ್ಮಾರ್ಟ್​ಫೋನ್ ಎಂಬ ಪಟ್ಟ ಪಡೆದುಕೊಂಡಿರುವ ವಿವೋ ಎಕ್ಸ್80 ಈ ವರ್ಷದ ಅನ್​ಲಕ್ಕಿ ಮೊಬೈಲ್ ಎಂದೇ ಹೇಳಬಹುದು. 79,999 ರೂ. ಬೆಲೆಯ ಈ ಮೊಬೈಲ್​ನಲ್ಲಿ ಬಲಿಷ್ಠ ಪ್ರೊಸೆಸರ್, ಅದ್ಭುತ ಕ್ಯಾಮೆರಾ ಸೇರಿದಂತೆ ಅನೇಕ ಫೀಚರ್​ಗಳಿದ್ದರೂ ಯಶಸ್ಸು ಸಾಧಿಸಲಿಲ್ಲ. ಇದು 6.78-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ಬಲವಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX866 RGBW ಸೆನ್ಸಾರ್‌ ಹೊಂದಿದೆ. 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್