Sign In

By signing in or creating an account, you agree with Associated Broadcasting Company's Terms & Conditions and Privacy Policy.

Google: ಥರ್ಡ್​ ಪಾರ್ಟಿ ಆ್ಯಪ್ ಬ್ಯಾನ್ ಆದರೂ ಆಂಡ್ರಾಯ್ಡ್​ ಫೋನ್​ನಲ್ಲಿ ಕಾಲ್ ರೆಕಾರ್ಡ್ ಮಾಡಲು ಇಲ್ಲಿದೆ ಟ್ರಿಕ್

Call Recording App: ನಿಮ್ಮ ಫೋನ್‌ನಲ್ಲಿ ಕಾಲ್‌ ರೆಕಾರ್ಡಿಂಗ್‌ ಆಯ್ಕೆಯನ್ನು ನೀಡಿದ್ದರೆ ನೀವು ಕಾಲ್‌ ರೆಕಾರ್ಡಿಂಗ್‌ ಮಾಡಬಹುದಾಗಿದೆ. ಹಾಗಾದ್ರೆ ಗೂಗಲ್‌ ಪೋನ್‌ ಅಪ್ಲಿಕೇಶನ್‌ ಬಳಸಿಕೊಂಡು ಕರೆ ರೆಕಾರ್ಡ್‌ ಮಾಡುವುದು ಹೇಗೆ ಎಂಬುದನ್ನು ನೋಡೋಣ.

Google: ಥರ್ಡ್​ ಪಾರ್ಟಿ ಆ್ಯಪ್ ಬ್ಯಾನ್ ಆದರೂ ಆಂಡ್ರಾಯ್ಡ್​ ಫೋನ್​ನಲ್ಲಿ ಕಾಲ್ ರೆಕಾರ್ಡ್ ಮಾಡಲು ಇಲ್ಲಿದೆ ಟ್ರಿಕ್
Call Recording
Follow us
TV9 Web
| Updated By: Vinay Bhat

Updated on:May 12, 2022 | 2:22 PM

ಆ್ಯಂಡ್ರಾಯ್ಡ್‌ ಸ್ಮಾರ್ಟ್​​ಫೋನ್​​ನಲ್ಲಿ ಸುರಕ್ಷತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್‌ (Goolge) ಹಲವು ಕ್ರಮಗಳನ್ನು ಕೈಗೊಂಡಿದ್ದು ಇದರಲ್ಲಿ ಪ್ರಮುಖವಾಗಿ ಕಾಲ್‌ ರೆಕಾರ್ಡಿಂಗ್‌ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಿದೆ. ಅಂದರೆ, ಗೂಗಲ್‌ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್‌ ಪಾರ್ಟಿ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್‌ ಮಾಡಿದೆ. ಇದರಲ್ಲಿ ಟ್ರೂ ಕಾಲರ್ (True Caller) ಕೂಡ ಒಳಗೊಂಡಿದೆ. ಈಗ ಟ್ರೂ ಕಾಲರ್‌ ಅಪ್ಲಿಕೇಶನ್‌ನಲ್ಲಿ ಕಾಲ್‌ ರೆಕಾರ್ಡಿಂಗ್‌ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬಳಕೆದಾರರ ಗೌಪ್ಯತೆಯ ಮೇಲೆ ಆಕ್ರಮಣ ಎಂದು ಪರಿಗಣಿಸಿ ಗೂಗಲ್ ಇಂತಹದೊಂದು ಮಹತ್ತರ ಕ್ರಮ ಕೈಗೊಂಡಿದೆ. ಆದರೆ, ನಿಮ್ಮ ಫೋನ್‌ನಲ್ಲಿ ಕಾಲ್‌ ರೆಕಾರ್ಡಿಂಗ್‌ ಆಯ್ಕೆಯನ್ನು ನೀಡಿದ್ದರೆ ನೀವು ಕಾಲ್‌ ರೆಕಾರ್ಡಿಂಗ್‌ (Call Reocrding) ಮಾಡಬಹುದಾಗಿದೆ. ಹಾಗಾದ್ರೆ ಗೂಗಲ್‌ ಪೋನ್‌ ಅಪ್ಲಿಕೇಶನ್‌ ಬಳಸಿಕೊಂಡು ಕರೆ ರೆಕಾರ್ಡ್‌ ಮಾಡುವುದು ಹೇಗೆ ಎಂಬುದನ್ನು ನೋಡೋಣ.

ಕೆಲವು ಸ್ಮಾರ್ಟ್‌ಫೋನ್‌ಗಳಲ್ಲಿ ಕಾಲ್‌ ರೆಕಾರ್ಡ್‌ ಮಾಡುವ ಆಯ್ಕೆಯನ್ನು ಡಿಫಾಲ್ಟ್ ಆಗಿ ನೀಡಲಾಗಿದೆ. ಆದರೆ ನೀವು ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಯಾವುದೇ ಕಾಲ್‌ ರೆಕಾರ್ಡಿಂಗ್‌ ಆಯ್ಕೆಯನ್ನು ಹೊಂದಿಲ್ಲ ಎಂದಾದರೆ ಪ್ಲೇ ಸ್ಟೋರ್‌ನಿಂದ ಗೂಗಲ್​​ನ ಫೋನ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು. ಇದರ ಮೂಲಕ ನಿಮ್ಮ ಕಾಲ್‌ ರೆಕಾರ್ಡ್‌ ಮಾಡಬಹುದು. ಅದಕ್ಕಾಗಿ ಈ ಕೆಳಗಿನ ಕ್ರಮ ಅನುಸರಿಸಿ.

  • ಇನ್​ಸ್ಟಾಲ್ ಆದ ಬಳಿಕ ಗೂಗಲ್‌ನ ಫೋನ್ ಅಪ್ಲಿಕೇಶನ್ ತೆರೆಯಿರಿ
  • ಇದರಲ್ಲಿ ಮೂರು-ಚುಕ್ಕೆಗಳ ಬಟನ್ > ಸೆಟ್ಟಿಂಗ್‌ಗಳನ್ನು ಟ್ಯಾಪ್ ಮಾಡಿ.
  • ಇದೀಗ, ಕಾಲ್‌ ರೆಕಾರ್ಡಿಂಗ್‌ನಲ್ಲಿ ಮತ್ತೊಮ್ಮೆ ಟ್ಯಾಪ್ ಮಾಡಿ ಮತ್ತು “ನಿಮ್ಮ ಸಂಪರ್ಕಗಳಲ್ಲಿಲ್ಲದ ಸಂಖ್ಯೆಗಳು” ಅನ್ನು ಸಕ್ರಿಯಗೊಳಿಸಿ.
  • ಇದರಲ್ಲಿ ಆಟೋ-ಕಾಲ್‌ ರೆಕಾರ್ಡಿಂಗ್ ಅನ್ನು ಸಕ್ರಿಯಗೊಳಿಸಲು ಸಾಧ್ಯವಿಲ್ಲ. ನೀವು ಅಪರಿಚಿತ ಸಂಖ್ಯೆಗಳನ್ನು ಮಾತ್ರ ರೆಕಾರ್ಡ್ ಮಾಡಲಾಗುತ್ತದೆ. ನಿಮ್ಮ ಫೋನ್‌ನಲ್ಲಿ ಸೇವ್‌ ಆಗಿರುವ ನಂಬರ್‌ನಿಂದ ಕರೆ ಬಂದರೆ ಕಾಲ್‌ ರೆಕಾರ್ಡಿಂಗ್‌ ಅನ್ನು ಆಕ್ಟಿವ್‌ ಮಾಡಬೇಕಾಗುತ್ತದೆ.

ಆಟೋ ರೆಕಾರ್ಡ್ ಆ್ಯಕ್ಟಿವ್ ಮಾಡುವುದು ಹೇಗೆ?

ಇದನ್ನೂ ಓದಿ
Image
Google Pixel 6a: ಬಹುನಿರೀಕ್ಷಿತ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್‌ಫೋನ್‌ ಬಿಡುಗಡೆ: ಫೀಚರ್ಸ್​, ಬೆಲೆ ಕುರಿತ ಮಾಹಿತಿ ಇಲ್ಲಿದೆ
Image
National Technology Day 2022: ಇದನ್ನು ಏಕೆ ಆಚರಿಸಲಾಗುತ್ತದೆ? ಅದರ ಮಹತ್ವ ಮತ್ತು ಈ ವರ್ಷದ ಥೀಮ್​: ಇಲ್ಲಿದೆ ಮಾಹಿತಿ
Image
Google: ಇಂದಿನಿಂದ ಗೂಗಲ್ ಹೊಸ ನಿಯಮ ಜಾರಿ: ಇನ್ಮುಂದೆ ಕಾರ್ಯನಿರ್ವಹಿಸಲ್ಲ ಈ ಆ್ಯಪ್​ಗಳು
Image
ಆಂಡ್ರಾಯ್ಡ್ ಮತ್ತು ಐಒಎಸ್​​ನಲ್ಲಿ m-Aadhaar ಆ್ಯಪ್ ಹೇಗೆ ಬಳಸುವುದು?: ಇಲ್ಲಿದೆ ನೋಡಿ
  • ಮೊದಲಿಗೆ ಗೂಗಲ್‌ ಫೋನ್ ಅಪ್ಲಿಕೇಶನ್ ತೆರೆಯಿರಿ > ಸೆಟ್ಟಿಂಗ್‌ಗಳು > ಕಾಲ್‌ ರೆಕಾರ್ಡಿಂಗ್.
  • ಇದೀಗ “ನಿಮ್ಮ ಸಂಪರ್ಕಗಳಲ್ಲಿ ಇಲ್ಲದ ಸಂಖ್ಯೆಗಳು” ಅನ್ನು ಟ್ಯಾಪ್ ಮಾಡಿ.
  • ನಂತರ “ಆಯ್ದ ಸಂಖ್ಯೆಗಳು” ಮೇಲೆ ಟ್ಯಾಪ್ ಮಾಡಿ > ಯಾವಾಗಲೂ ಆಯ್ಕೆಮಾಡಿದ ಸಂಖ್ಯೆಗಳನ್ನು ರೆಕಾರ್ಡ್ ಮಾಡಿ.
  • ಇದೀಗ “ಸಂಪರ್ಕವನ್ನು ಆರಿಸಿ” ಮೇಲೆ ಮತ್ತೊಮ್ಮೆ ಟ್ಯಾಪ್ ಮಾಡಿ.
  • ಈಗ ನಿಮ್ಮ ಫೋನ್‌ಗೆ ಬರುವ ಎಲ್ಲಾ ಅಪರಿಚಿತ ಸಂಖ್ಯೆಯ ಕರೆಗಳು ಮತ್ತು ನೀವು ಪಟ್ಟಿಯಲ್ಲಿ ಸೇರಿಸುವ ಕರೆಗಳು ಸ್ವಯಂಚಾಲಿತವಾಗಿ ರೆಕಾರ್ಡ್ ಆಗುತ್ತವೆ.

ಗೂಗಲ್‌ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್‌ ಪಾರ್ಟಿ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್‌ ಮಾಡಿದೆ ನಿಜ ಹಾಗಂತೆ ಎಲ್ಲಾ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಪ್ಲಾಟ್‌ಫಾರ್ಮ್‌ನಿಂದ ಬ್ಯಾನ್‌ ಆಗುವುದಿಲ್ಲ. ಅಂದರೆ ಒನ್‌ಪ್ಲಸ್‌, ಶವೋಮಿ ಮತ್ತು ಸ್ಯಾಮ್‌ಸಂಗ್‌ ಕಂಪೆನಿಗಳು ನೀಡುವ ಇಂಟರ್‌ಬಿಲ್ಟ್‌ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಬ್ಯಾನ್‌ ಆಗುವುದಿಲ್ಲ. ಇದಲ್ಲದೆ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್‌ನ ಸ್ವಂತ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ ಸಹ ಲಭ್ಯವಿರುತ್ತದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Thu, 12 May 22

ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ಅಚ್ಚರಿಯ ಮಾಹಿತಿ ರಿವೀಲ್
‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ಅಚ್ಚರಿಯ ಮಾಹಿತಿ ರಿವೀಲ್
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ
ಸರ್ಕಾರದ ಗ್ರೇಟರ್ ಬೆಂಗಳೂರು ತಯಾರಿ ಗೇಲಿ ಮಾಡಿದ ಮುನಿರತ್ನ