ಆ್ಯಂಡ್ರಾಯ್ಡ್ ಸ್ಮಾರ್ಟ್‌ಫೋನ್‌ನಲ್ಲಿ ಸುರಕ್ಷತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್ (Goolge) ಹಲವು ಕ್ರಮಗಳನ್ನು ಕೈಗೊಂಡಿದ್ದು ಇದರಲ್ಲಿ ಪ್ರಮುಖವಾಗಿ ಕಾಲ್ ರೆಕಾರ್ಡಿಂಗ್ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಿದೆ. ಅಂದರೆ, ಗೂಗಲ್ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್ ಪಾರ್ಟಿ ಕಾಲ್ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿದೆ. ಇದರಲ್ಲಿ ಟ್ರೂ ಕಾಲರ್ (True Caller) ಕೂಡ ಒಳಗೊಂಡಿದೆ. ಈಗ ಟ್ರೂ ಕಾಲರ್ ಅಪ್ಲಿಕೇಶನ್‌ನಲ್ಲಿ ಕಾಲ್ ರೆಕಾರ್ಡಿಂಗ್ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬಳಕೆದಾರರ ಗೌಪ್ಯತೆಯ ಮೇಲೆ ಆಕ್ರಮಣ ಎಂದು ಪರಿಗಣಿಸಿ ಗೂಗಲ್ ಇಂತಹದೊಂದು ಮಹತ್ತರ ಕ್ರಮ ಕೈಗೊಂಡಿದೆ. ಆದರೆ, ನಿಮ್ಮ ಫೋನ್‌ನಲ್ಲಿ ಕಾಲ್ ರೆಕಾರ್ಡಿಂಗ್ ಆಯ್ಕೆಯನ್ನು ನೀಡಿದ್ದರೆ ನೀವು ಕಾಲ್ ರೆಕಾರ್ಡಿಂಗ್ (Call Reocrding) ಮಾಡಬಹುದಾಗಿದೆ. ಹಾಗಾದ್ರೆ ಗೂಗಲ್ ಪೋನ್ ಅಪ್ಲಿಕೇಶನ್ ಬಳಸಿಕೊಂಡು ಕರೆ ರೆಕಾರ್ಡ್ ಮಾಡುವುದು ಹೇಗೆ ಎಂಬುದನ್ನು ನೋಡೋಣ.
ಕೆಲವು ಸ್ಮಾರ್ಟ್‌ಫೋನ್‌ಗಳಲ್ಲಿ ಕಾಲ್ ರೆಕಾರ್ಡ್ ಮಾಡುವ ಆಯ್ಕೆಯನ್ನು ಡಿಫಾಲ್ಟ್ ಆಗಿ ನೀಡಲಾಗಿದೆ. ಆದರೆ ನೀವು ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಯಾವುದೇ ಕಾಲ್ ರೆಕಾರ್ಡಿಂಗ್ ಆಯ್ಕೆಯನ್ನು ಹೊಂದಿಲ್ಲ ಎಂದಾದರೆ ಪ್ಲೇ ಸ್ಟೋರ್‌ನಿಂದ ಗೂಗಲ್‌ನ ಫೋನ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬಹುದು. ಇದರ ಮೂಲಕ ನಿಮ್ಮ ಕಾಲ್ ರೆಕಾರ್ಡ್ ಮಾಡಬಹುದು. ಅದಕ್ಕಾಗಿ ಈ ಕೆಳಗಿನ ಕ್ರಮ ಅನುಸರಿಸಿ.
ಆಟೋ ರೆಕಾರ್ಡ್ ಆ್ಯಕ್ಟಿವ್ ಮಾಡುವುದು ಹೇಗೆ?
ಗೂಗಲ್ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲಾ ಥರ್ಡ್ ಪಾರ್ಟಿ ಕಾಲ್ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್ ಮಾಡಿದೆ ನಿಜ ಹಾಗಂತೆ ಎಲ್ಲಾ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಪ್ಲಾಟ್‌ಫಾರ್ಮ್‌ನಿಂದ ಬ್ಯಾನ್ ಆಗುವುದಿಲ್ಲ. ಅಂದರೆ ಒನ್‌ಪ್ಲಸ್, ಶವೋಮಿ ಮತ್ತು ಸ್ಯಾಮ್‌ಸಂಗ್ ಕಂಪೆನಿಗಳು ನೀಡುವ ಇಂಟರ್‌ಬಿಲ್ಟ್ ಕಾಲ್ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಬ್ಯಾನ್ ಆಗುವುದಿಲ್ಲ. ಇದಲ್ಲದೆ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್‌ನ ಸ್ವಂತ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ ಸಹ ಲಭ್ಯವಿರುತ್ತದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:21 pm, Thu, 12 May 22