AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G82 5G: ಭರ್ಜರಿ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ: ಭಾರತದಲ್ಲಿ ಮೋಟೋ G82 ಸ್ಮಾರ್ಟ್‌ಫೋನ್‌ ಬಿಡುಗಡೆ

ಮೋಟೋರೊಲಾ ಕಂಪನಿ ಹೊಸ ಮೋಟೋ ಜಿ82 (Moto G82 5G) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​​ ಇದೆ?, ಇಲ್ಲಿದೆ ನೋಡಿ ಮಾಹಿತಿ.

Moto G82 5G: ಭರ್ಜರಿ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ: ಭಾರತದಲ್ಲಿ ಮೋಟೋ G82 ಸ್ಮಾರ್ಟ್‌ಫೋನ್‌ ಬಿಡುಗಡೆ
Moto G82 5G
Follow us
TV9 Web
| Updated By: Vinay Bhat

Updated on: Jun 08, 2022 | 6:03 AM

ಜಾಗತಿಕ ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಮೊಬೈಲ್ ಬ್ರ್ಯಾಂಡ್​​ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್​ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಇತ್ತೀಚೆಗಷ್ಟೆ ಮೋಟೋರೊಲಾ ಕಂಪನಿ ಸದ್ದಿಲ್ಲದೆ ಮೋಟೋ ಇ 32ಎಸ್ (Moto E32s) ಸ್ಮಾರ್ಟ್‌ಫೋನ್‌ ಅನ್ನು ದೇಶದಲ್ಲಿ ಲಾಂಚ್‌ ಮಾಡಿತ್ತು. ಇದರ ಬೆನ್ನಲ್ಲೇ ಮತ್ತೊಂದು ಹೊಸ ಮೋಟೋ ಜಿ82 (Moto G82 5G) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನಿನ ವಿಶೇಷತೆ ಅಂದರೆ ಇದರ ಮುಖ್ಯ ಕ್ಯಾಮರಾ OIS ಬೆಂಬಲವನ್ನು ಹೊಂದಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​​ ಇದೆ?, ಇಲ್ಲಿದೆ ನೋಡಿ ಮಾಹಿತಿ.

  1. ಮೋಟೋ G82 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ ಕೇವಲ 21,499 ರೂ. ನಿಗದಿ ಮಾಡಲಾಗಿದೆ. 8GB + 128GB ಸ್ಟೋರೇಜ್ ಆಯ್ಕೆಯ ಬೆಲೆ 22,999 ರೂ. ಆಗಿದೆ.
  2. ಈ ಸ್ಮಾರ್ಟ್‌ಫೋನ್‌ ಇದೇ ಜೂನ್‌ 14 ರಿಂದ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್, ರಿಲಯನ್ಸ್ ಡಿಜಿಟಲ್ ಮತ್ತು ಪ್ರಮುಖ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಸಬಹುದು. ವಿಶೇಷ ಆಫರ್ ಕೂಡ ಘೋಷಿಸಲಾಗಿದ್ದು, SBI ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸುವ ಗ್ರಾಹಕರು 1,500 ರೂ. ಗಳ ರಿಯಾಯಿತಿಯನ್ನು ಪಡೆಯಬಹುದು.
  3. ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಿಂದ ಕೂಡಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದುಕೊಂಡಿದೆ.
  4. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಅಳವಡಿಸಲಾಗಿದ್ದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
  5. ಇದನ್ನೂ ಓದಿ
    Image
    Realme GT Neo 3T: ಮಾರುಕಟ್ಟೆಗೆ ಬಂದೇ ಬಿಡ್ತು ರಿಯಲ್‌ ಮಿ GT ನಿಯೋ 3T: ಬೆಲೆ ಎಷ್ಟು ಗೊತ್ತೇ?
    Image
    Microsoft Office: ಮೈಕ್ರೋಸಾಫ್ಟ್ ಆಫೀಸ್ ಮೇಲೆ ಹ್ಯಾಕರ್​ಗಳ ಕಣ್ಣು: ನಿಮ್ಮ ಪಿಸಿಯನ್ನು ತಕ್ಷಣವೇ ಹೀಗೆ ಮಾಡಿ
    Image
    Apple Event: ಆಪಲ್ iOS 16, ಹೊಸ ಮ್ಯಾಕ್‌ಬುಕ್‌ ಅನಾವರಣ: ಇದರಲ್ಲಿದೆ ಅಚ್ಚರಿ ಫೀಚರ್ಸ್
    Image
    OnePlus 9 Pro: ಶಾಕಿಂಗ್: ಒನ್‌ಪ್ಲಸ್‌ 9 ಪ್ರೊ ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ: ಈ ಆಫರ್ ಮಿಸ್ ಮಾಡ್ಬೇಡಿ
  6. ಮೋಟೋ G82 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುತ್ತದೆ.
  7. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದಲ್ಲದೆ 16ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
  8. ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ನೀಡಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
Daily Devotional: ತೀರ್ಥ ತೆಗೆದುಕೊಳ್ಳುವ ವಿಧಾನ ಹೇಗೆ ತಿಳಿಯಿರಿ
Daily Devotional: ತೀರ್ಥ ತೆಗೆದುಕೊಳ್ಳುವ ವಿಧಾನ ಹೇಗೆ ತಿಳಿಯಿರಿ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ