ಭಾರತದಲ್ಲಿ 5ಜಿ (5G) ಅಲೆ ಸದ್ಯದಲ್ಲೇ ಪ್ರಾರಂಭವಾಗಲಿದೆ. ಈಗಾಗಲೇ ಹರಾಜಿಗೆ ಕೇಂದ್ರ ಸರಕಾರ (Central Government) ಅನುಮೋದನೆ ನೀಡಿದ್ದು ಪ್ರಸ್ತುತ ಮಾಹಿತಿ ಪ್ರಕಾರ 5G ಸ್ಪೆಕ್ಟ್ರಮ್ ಹರಾಜು ಜುಲೈ 26, 2022 ರಂದು ನಡೆಯಲಿದೆ. ಭಾರತದಲ್ಲಿ 5G ನೆಟ್‌ವರ್ಕ್ ಆದಷ್ಟು ಬೇಗ ಲಭ್ಯವಾಲಿದೆ ಎಂಬುದನ್ನುಅರಿತಿರುವ ಸ್ಮಾರ್ಟ್‌ಫೋನ್ ಕಂಪನಿಗಳ ಅದಾಗಲೆ ಅನೇಕ 5G ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಈ 5G ಸ್ಮಾರ್ಟ್‌ಫೋನ್ ಅತ್ಯುತ್ತಮ ಕಾರ್ಯದಕ್ಷತೆಯ ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಇದೇ ಕಾರಣಕ್ಕೆ ಹೆಚ್ಚಿನ ಜನರು 5G ಸ್ಮಾರ್ಟ್‌ಫೋನ್‌ಗಳನ್ನು (5G Smartphone) ಖರೀದಿಸುವುದಕ್ಕೆ ಮುಂದಾಗುತ್ತಿದ್ದಾರೆ. ಭಾರತದಲ್ಲಿ ವಿವಿಧ ಬೆಲೆಗಳಲ್ಲಿ 5G ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಹಾಗಾದ್ರೆ ಭಾರತದಲ್ಲಿ ಬಜೆಟ್ ಬೆಲೆಗೆ ಅಂದರೆ 15,000 ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನು ನೋಡೋಣ.
Vivo T1 5G ಗೇಮಿಂಗ್ಗೆ ಹೇಳಿ ಮಾಡಿಸಿದ ಅತ್ಯುತ್ತಮ ಬಜೆಟ್ ಬೆಲೆಯ 5ಜಿ ಸ್ಮಾರ್ಟ್‌ಫೋನ್ ಆಗಿದೆ. ಇದು Qualcomm Snapdragon 695 ಪ್ರೊಸೆಸರ್ ಮತ್ತು 5000mAh ಬ್ಯಾಟರಿಯಿಂದ ಕಾರ್ಯನಿರ್ವಹಿಸುತ್ತದೆ. 6.58-ಇಂಚಿನ IPS LCD ಡಿಸ್ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ದರದೊಂದಿಗೆ ಬರುತ್ತದೆ. ಇದರ ಆರಂಭಿಕ ಬೆಲೆ ಕೇವಲ ರೂ. 14,499 ಆಗಿದೆ.
ಇನ್ನು Moto G51 5G ಕೂಡ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ 5ಜಿ ಫೋನ್ ಆಗಿದೆ. ಇದು 120Hz ರಿಫ್ರೆಶ್ ದರದೊಂದಿಗೆ ದೊಡ್ಡ 6.8-ಇಂಚಿನ IPS LCD ಡಿಸ್ಪ್ಲೇಯನ್ನು ಹೊಂದಿದೆ. Qualcomm Snapdragon 480+ 5G ಚಿಪ್‌ಸೆಟ್ ಮತ್ತು 20W ಚಾರ್ಜಿಂಗ್‌ನೊಂದಿಗೆ 5000mAh ಬ್ಯಾಟರಿಯೊಂದಿಗೆ ಬಿಡುಗಡೆ ಆಗಿತ್ತು. ಇದು 50MP ಪ್ರಾಥಮಿಕ ಲೆನ್ಸ್ ಜೊತೆಗೆ 8MP ಅಲ್ಟ್ರಾ-ವೈಡ್ ಮತ್ತು 2MP ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಮುಂಭಾಗದಲ್ಲಿ 13MP ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಇದರ ಬೆಲೆ ರೂ. 13,999.
Poco M4 Pro 5G ಕೂಡ ಎಲ್ಲ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ಇದು 6.43-ಇಂಚಿನ FHD+ ಡಿಸ್ಪ್ಲೇ ಜೊತೆಗೆ 90Hz ರಿಫ್ರೆಶ್ ದರವನ್ನು ಹೊಂದಿದೆ. MediaTek Helio G96 ಪ್ರೊಸೆಸರ್‌ನಿಂದ ಚಾಲಿತವಾಗಿದೆ. 64MP ಪ್ರಾಥಮಿಕ ಕ್ಯಾಮೆರಾಗಳನ್ನು ನೀಡಲಾಗಿದ್ದು, 8MP ಮತ್ತು 2MP ಸೆಕೆಂಡರಿ ಕ್ಯಾಮೆರಾಗಳೊಂದಿಗೆ ಬರುತ್ತದೆ. ಇದರ ಆರಂಭಿಕ ಬೆಲೆ ರೂ. 14,999.
iQOO Z6 ಬೆಲೆ ಕೇವಲ ರೂ. 13,999. ಕೈಗೆಟುಕುವ ಬೆಲೆಯಲ್ಲಿ ಈ ಫೋನನ್ನು ನೀವು ಖರೀದಿಸಬಹುದು. 4GB RAM ಮತ್ತು 128GB ಸಂಗ್ರಹಣೆಯೊಂದಿಗೆ ಸ್ನಾಪ್‌ಡ್ರಾಗನ್ 696 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸುತ್ತದೆ. ಇದರ ಹಿಂಭಾಗದಲ್ಲಿ 50MP, 2MP ಮತ್ತು 2MP ಯ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ನೀಡಲಾಗಿದೆ.
ಕೊನೆಯದಾಗಿ ಡೈಮೆನ್ಸಿಟಿ 810 5G ಪ್ರೊಸೆಸರ್ ಹೊಂದಿರುವ Realme 9 5G ಸ್ಮಾರ್ಟ್‌ಫೋನ್ 6.5-ಇಂಚಿನ FHD+ ಡಿಸ್ಪ್ಲೇ ಜೊತೆಗೆ 90Hz ರಿಫ್ರೆಶ್ ರೇಟ್ ಮತ್ತು 48MP AI ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಇದರ ಬೆಲೆ ರೂ. 14,999 ಆಗಿದೆ.