ಹಾನರ್​ನಿಂದ ಬಜೆಟ್ ಬೆಲೆಗೆ 108MP ಕ್ಯಾಮೆರಾದ ಹಾನರ್ X8b ಬಿಡುಗಡೆ

Honor X8B Launched ಬೆಲೆಗೆ ಸಂಬಂಧಿಸಿದಂತೆ, ಭಾರತದಲ್ಲಿ ಹಾನರ್ X8B ಫೋನ್‌ನ ಮೂಲ ರೂಪಾಂತರದ ಬೆಲೆ ರೂ. 20 ಸಾವಿರ ಎಂದು ಅಂದಾಜಿಸಲಾಗಿದೆ. ಹಾನರ್ X8B ಸ್ಮಾರ್ಟ್‌ಫೋನ್ ಮಿಡ್‌ನೈಟ್ ಬ್ಲಾಕ್, ಟೈಟಾನಿಯಂ ಸಿಲ್ವರ್ ಮತ್ತು ಗ್ಲಾಮರಸ್ ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ.

ಹಾನರ್​ನಿಂದ ಬಜೆಟ್ ಬೆಲೆಗೆ 108MP ಕ್ಯಾಮೆರಾದ ಹಾನರ್ X8b ಬಿಡುಗಡೆ
Honor X8B
Follow us
|

Updated on: Dec 19, 2023 | 6:55 AM

ಸದ್ಯ ಮಾರುಕಟ್ಟೆಯಲ್ಲಿ ಬಜೆಟ್ ಸ್ಮಾರ್ಟ್​ಫೋನ್​ಗಳು ವಿಜೃಂಭಿಸುತ್ತಿವೆ. ಉತ್ತಮ ಫೀಚರ್ಸ್ ಇರುವ ಫೋನ್​ಗಳು ಅತ್ಯಂತ ಕಡಿಮೆ ಬೆಲೆಗೆ ಮಾರುಕಟ್ಟೆಗೆ ಬರುತ್ತಿವೆ. ಮುಖ್ಯವಾಗಿ ಈ ವರ್ಷ ಕ್ಯಾಮೆರಾಗೆ ವಿಶೇಷ ಒತ್ತು ನೀಡಿ ಫೋನ್‌ಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಇದೀಗ ಈ ಸಾಲಿನಲ್ಲಿ ಚೀನಾದ ಸ್ಮಾರ್ಟ್​ಫೋನ್ ದೈತ್ಯ ಹಾನರ್ ಹೊಸ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದರ ಹೆಸರು ಹಾನರ್ X8B. ಈ ಫೋನ್‌ನ ವೈಶಿಷ್ಟ್ಯಗಳೇನು? ಬೆಲೆ ಎಷ್ಟು? ನೋಡೋಣ.

ಹಾನರ್ X8B ಫೋನ್ ಅನ್ನು ಮೊದಲು ಸೌದಿ ಅರೇಬಿಯಾದಲ್ಲಿ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ಇದು ಭಾರತ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಹಾನರ್ X8B ಸ್ಮಾರ್ಟ್‌ಫೋನ್ 6.7-ಇಂಚಿನ ಪೂರ್ಣ HD+ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್​ಪ್ಲೇ 90 Hz ನ ರಿಫ್ರೆಶ್ ದರದಿಂದ ಕೂಡಿದೆ. ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ.

ಬೆಸ್ಟ್ ಬೆಜೆಟ್ ಫೋನ್ ರಿಯಲ್ ಮಿ C67 5G ಇಂದಿನಿಂದ ಖರೀದಿಗೆ ಲಭ್ಯ

ಇದನ್ನೂ ಓದಿ
Image
ಬಜೆಟ್ ಪ್ರಿಯರ ಬಹುನಿರೀಕ್ಷಿತ ಫೋನ್ ಪೋಕೋ C65 ಇಂದಿನಿಂದ ಖರೀದಿಗೆ ಲಭ್ಯ
Image
ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್ ಯಾರು ಬೇಕಾದ್ರೂ ನೋಡಬಹುದು: ಹೇಗೆ?
Image
ಒಂದೇ ದಿನ ಬರೋಬ್ಬರಿ ಮೂರು ​ಫೋನ್ಸ್ ಬಿಡುಗಡೆ ಮಾಡಿದ ವಿವೋ: ಯಾವುವು?
Image
ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್ ಬಳಕೆದಾರರಿಗೆ ಸರ್ಕಾರದಿಂದ ಅಲರ್ಟ್

4500 mAh ಬ್ಯಾಟರಿಯನ್ನು ಹೊಂದಿದ್ದು, 33 ವ್ಯಾಟ್‌ಗಳ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಮ್ಯಾಜಿಕ್ ಕ್ಯಾಪ್ಸೂಲ್ಸ್ ನೋಟಿಫಿಕೇಶನ್ ಫೀಚರ್ ಈ ಸ್ಮಾರ್ಟ್​ಫೋನ್​ನ ವಿಶೇಷತೆ ಎಂದು ಹೇಳಬಹುದು. ಕ್ಯಾಮೆರಾದ ಬಗ್ಗೆ ಹೇಳುವುದಾದರೆ, ಈ ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್‌ಗಳೊಂದಿಗೆ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 50-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಸೈಡ್ ಫೇಸಿಂಗ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಇದೆ.

ಸಂಪರ್ಕಕ್ಕೆ ಸಂಬಂಧಿಸಿದಂತೆ, ಇದು ಡ್ಯುಯಲ್ ಸಿಮ್, 4G ವೋಲ್ಟ್, ವೈ-ಫೈ 802.11ac, ಬ್ಲೂಟೂತ್ 5.0G, GPS, USB ಟೈಪ್ C ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 8GB RAM, 128GB ಸ್ಟೋರೇಜ್, 8GB RAM, 256GB ಸ್ಟೋರೇಜ್, 8GB RAM, 512GB ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ.

ಬೆಲೆಗೆ ಸಂಬಂಧಿಸಿದಂತೆ, ಭಾರತದಲ್ಲಿ ಈ ಫೋನ್‌ನ ಮೂಲ ರೂಪಾಂತರದ ಬೆಲೆ ರೂ. 20 ಸಾವಿರ ಎಂದು ಅಂದಾಜಿಸಲಾಗಿದೆ. ಹಾನರ್ X8B ಸ್ಮಾರ್ಟ್‌ಫೋನ್ ಮಿಡ್‌ನೈಟ್ ಬ್ಲಾಕ್, ಟೈಟಾನಿಯಂ ಸಿಲ್ವರ್ ಮತ್ತು ಗ್ಲಾಮರಸ್ ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ. ಈ ಫೋನ್ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಕುರಿತು ಕಂಪನಿಯು ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ